ಕಾರ್ಮಿಕ ದಿನದ ವಿಶೇಷ-ಲೇಖನ
ಪ್ರತಿಯೊಬ್ಬರೂ ಕಾರ್ಮಿಕರೇ ಶೃತಿ ಮೇಲುಸೀಮೆ ಪ್ರತಿಯೊಬ್ಬರೂ ಕಾರ್ಮಿಕರೇ ಇಂದು ಮೇ ಒಂದು, ಅಂತಾರಾಷ್ಟ್ರೀಯ ಕಾರ್ಮಿಕ ದಿನ. ಇದನ್ನು 1886, ಮೇ 4 ರಂದು ಚಿಕಾಗೋದಲ್ಲಿ ಕಾರ್ಮಿಕರ ಮೇಲೆ ನಡೆದ ದಮನಕಾರಿ ಘಟನೆಯನ್ನು ಖಂಡಿಸಿದ ಪ್ರತೀಕದ ಕುರುಹುವಾಗಿ ಆಚರಿಸುತ್ತಾ ಬರಲಾಗುತ್ತದೆ. ಈ ಕಾರ್ಮಿಕ ದಿನದ ಮೂಲ ಕುರುಹು ಇರುವುದು ಅಮೆರಿಕದಲ್ಲಿ, ಅಲ್ಲಿ ಕಾಲರಾಡೋ ರಾಜ್ಯ 1887ರಲ್ಲಿ ಮಾರ್ಚ್ 15 ರಂದು ಕಾರ್ಮಿಕ ದಿನ ಆಚರಣೆಗೆ ಕಾನೂನನ್ನು ಮಾನ್ಯ ಮಾಡಿತು. ಭಾರತದಲ್ಲಿ ಈ ದಿನವನ್ನು 1927ರಿಂದ ಆಚರಿಸುತ್ತಾ ಬರಲಾಗುತ್ತಿದೆ. ಇಂದು […]
ಕಾರ್ಮಿಕ ದಿನದ ವಿಶೇಷ-ಕಥೆ
ಕಥೆ ಕರ್ಮ ಮತ್ತು ಕಾರ್ಮಿಕ! ಪೂರ್ಣಿಮಾ ಮಾಳಗಿಮನಿ ಕರ್ಮ ಮತ್ತು ಕಾರ್ಮಿಕ! ಎಲ್ಲರ ಮನೆಯ ದೋಸೆಯೂ ತೂತೇ, ಹಾಗಂತ ತೂತಿಲ್ಲದ ದೋಸೆಗಾಗಿ ಹಾತೊರೆಯುವುದನ್ನು ರಾಗಿಣಿ ಬಿಟ್ಟಿರಲಿಲ್ಲ. ಮನೆಯೊಳಗಿನ ಸಣ್ಣ ಪುಟ್ಟ ಜಗಳಗಳಿಗೆ, ಮೂವತ್ತೈದು ವರ್ಷಕ್ಕೇ ಜೀವನವೇ ಸಾಕಾಗಿ ಹೋಗಿದೆ, ಎಂದು ಕೈ ಚೆಲ್ಲಿ ಕುಳಿತ ಹೆಂಡತಿ ರಾಗಿಣಿಯನ್ನು ಮ್ಯಾರೇಜ್ ಕೌನ್ಸಲರ ಬಳಿ ಕರೆದೊಯ್ಯುವ ವಿಚಾರ ಮಾಡಿದ್ದು ಪ್ರಶಾಂತನೇ. ಮಕ್ಕಳೂ ಆಗಿಲ್ಲವೆಂದ ಮೇಲೆ ನಿಮ್ಮ ಹೆಂಡತಿ ಟೈಮ್ ಪಾಸ್ ಮಾಡುವುದಾದರೂ ಹೇಗೆ ಎಂದು ದಬಾಯಿಸಿ, ಕೌನ್ಸಲರ ಒಂದು ನಾಯಿ ಮರಿ […]