Day: May 12, 2020

ಅನುವಾದ ಸಂಗಾತಿ

ಮೂಲ ಕವನ ಡಾ.ಶಿವಕುಮಾರ್ ಮಾಲಿಪಾಟೀಲ,ಗಂಗಾವತಿ ಅವರ “ದೇವರು ಹೇಳುತ್ತಿದ್ದಾನೆ ವಿಶ್ರಾಂತಿ ಪಡೆಯಿರಿ” ಇಂಗ್ಲೀಷಿಗೆ ನಾಗರೇಖಾ ಗಾಂವಕರ್ ಸಂಗಾತಿಯ ಓದುಗರಿಗೆ ಮೂಲ ಮತ್ತು ಅನುವಾದಿತ ಕವಿತೆಗಳೆರಡನ್ನೂ ಇಲ್ಲಿ ನೀಡಿದೆ ದೇವರು ಹೇಳುತ್ತಿದ್ದಾನೆ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ ಗುಡಿ, ಗುಂಡಾರ, ಮಸೀದಿ, ಚರ್ಚೆಗಳಿಗೆ ಬಹಳಷ್ಟು ಅಲೆದಿದ್ದಿರಿ, ಮನವಿಲ್ಲದೆ ನನ್ನನ್ನು ಬಹಳಷ್ಟು ಹುಡುಕಿದ್ದಿರಿ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ ಕಾಯಕ ಬಿಟ್ಟು ಸಾಮೂಹಿಕ ಭಜನೆ, ಪ್ರಾರ್ಥನೆ ಏನೇನೋ ಜಾತ್ರೆ ,ಉತ್ಸವಗಳನ್ನು ಮಾಡಿದಿರಿ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ. ಅನ್ನ ,ಆಹಾರವಿದ್ದರೂ […]

ಕಾವ್ಯಯಾನ

ಕೊರೊನ ಕಾಲದಲ್ಲಿ… ಶ್ವೇತಾ ಎಂ ಯು. ಕರೋನಾ ಕಾಲದಲ್ಲಿ ಕೂತುಂಡು ಮೈ ಭಾರ ಹೆಚ್ಚಿಸಿದವರ ನಡುವೆ ದುಡಿಮೆಯಿಲ್ಲದೆ ಜೀವಭಯದಿಂದ ಬದುಕೊ ಹಠವು ನಾಳೆ ಹೇಗೆಂದು ಸೊರಗಿದವರು ಅನಾಯಾಸವಾಗಿ ಸಿಕ್ಕ ರಜೆಗೆ ಹಾಯಾಗಿ ಪ್ರವಾಸ ಮಾಡಲಾಗದೆ ಮರುಗುತಿರುವ ಮಂದಿಯ ನಡುವೆ ತವರ ಸೇರಿಕೊಳ್ಳಲು ಉಟ್ಟ ಬಟ್ಟೆಯಲಿ ಬರಿಗಾಲಲ್ಲಿ ನಡೆದು ಬೀದಿ ಪಾಲಾದವರು ಚೆಂದ ಸೀರೆಯುಟ್ಟು ತುಟಿಗೊಂದಿಷ್ಟು ಹೆಚ್ಚೇ ರಂಗು ಬಳಿದ ಲಲನೆಯರು ರಾಜಕೀಯ ಭವಿಷ್ಯವು ಲೆಕ್ಕಾಚಾರವು ಸಹಾಯ ಹಸ್ತ ಚಾಚಿ ತೆಗೆದ ಸೆಲ್ಫಿಗೆ ನಗುವ ಚೆಲ್ಲಿ, ಕೈ ಚಾಚಿದ […]

ಕಾವ್ಯಯಾನ

ಗಝಲ್ ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ? ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ ಊರ ಸೇರುವುದು ಹೇಗೆ ? ಶಾಂತವಾಗಿ ಹರಿಯುತ್ತಿದ್ದ ಬಾಳಕಡಲಿನಲಿ ಎಣಿಸದ ಉಬ್ಬರವಿಳಿತ ಇರುವ ನೆಲೆ ಜೀವಗಳ ನಲುಗಿಸಿದೆ ಮರಳಿ ಊರ ಸೇರುವುದು ಹೇಗೆ ? ದುಡಿಮೆ ಆದಾಯವಿಲ್ಲದ ಬದುಕು ನರಕಸದೃಶವಲ್ಲದೇ ಮತ್ತೇನು ? ತಿನ್ನುವ ಅನ್ನಕೂ ತತ್ವಾರವಾಗಿದೆ ಮರಳಿ ಊರ ಸೇರುವುದು ಹೇಗೆ ? ಅನುಕಂಪವಿಲ್ಲದ ಸಾವು ಹಗಲಲ್ಲೂ ಭೀತಿಯ ಕಾರಿರುಳ ಹರಡಿದೆ ಬೆದರಿದ ಮನ […]

ಕಾವ್ಯಯಾನ

ಗಝಲ್ ಸಹದೇವ ಯರಗೊಪ್ಪ ಬದುಕಿಗೆ ಅರ್ಥ ಕಲ್ಪಿಸಲು ಉಲಿದೆ ನೀ ಬರಲೇ ಇಲ್ಲ ಒಲವಿಗೆ ಬಲವ ತುಂಬಲು ಕೂಗಿದೆ ನೀ ಬರಲೇ ಇಲ್ಲ ಬೆವರಿನ ಅಂಬಲಿ ಉಂಡು ಒಡಲ ಹಂಬಲ ತಣಿಸುವೆ ಬಾ ಪ್ರೇಮದ ಎಲ್ಲೆ ಮೀರಲು ಗೋಗರೆದೆ ನೀ ಬರಲೇ ಇಲ್ಲ ಇರುಳ ಕಾಲುದಾರಿ ಕತ್ತಲು ಮೆತ್ತಿ ಮೈ ಮುರಿಯುತಿದೆ ಭಾವನೆಗಳ ಬೆಳಕಲಿ ಒಂದಾಗಲು ಕರೆದೆ ನೀ ಬರಲೇ ಇಲ್ಲ ಮದಿರೆಯಲಿ ಅಧರ ಕಳಚಿ ನೂರು ನವಿಲು ಕುಣಿದಂತಾಗಿದೆ ಭಾರವಾದ ತನು ಹಗುರುಗೊಳಿಸಲು ಕೈ ಚಾಚಿದೆ […]

ಕಾವ್ಯಯಾನ

ಗಝಲ್ ಈರಪ್ಪ ಬಿಜಲಿ ಕಗ್ಗೊಲೆಯಾದ ಕನಸುಗಳನು ಗಂಟುಕಟ್ಟಿ ಹೊತ್ತುಕೊಂಡು ನಡೆದಿದ್ದೇವೆ ಹತ್ಯೆಯಾದ ಮನಸುಗಳನು ವಸ್ತ್ರದಲಿ ಸುತ್ತಿಕೊಂಡು ನಡೆದಿದ್ದೇವೆ ।। ವಿಧಿಯಾಟಕೆ ಬದುಕು ಬಲಿಯಾಗಿ ಕೊನೆಯಾದಂತೆ ಕಾಣುತಿದೆ ಬೂಟಾಟಿಕೆ ಮಾತಿಗೆ ಮರುಳಾಗಿ ಬಾಳಬಂಡಿ ಹತ್ತಿಕೊಂಡು ನಡೆದಿದ್ದೇವೆ ।। ಶ್ರಮಿಕರು ಸತ್ತರು ನೆತ್ತರು ಬೀದಿಬೀದಿಗೆಲ್ಲ ನದಿಯಾಗಿ ಹರಿದಿದೆ ಧನಿಕರು ಮೂಗಿಗೆ ಸವರಿದ ತುಪ್ಪವನು ಮೆತ್ತಿಕೊಂಡು ನಡೆದಿದ್ದೇವೆ ।। ಹೊತ್ತೊತ್ತಿಗೂ ಅನ್ನಆಹಾರ ನೀರಿಲ್ಲದೇ ಕ್ಷಣಕ್ಷಣವು ಬಳಲಿದೇವು ಉಸಿರಳಿವ ಮುನ್ನ ಗೂಡುನೆನೆದು ಮನೆ ಸೇರುವಾಸೆ ಕಟ್ಟಿಕೊಂಡು ನಡೆದಿದ್ದೇವೆ।। ಬೆಂದುಬೆಂಡಾದ ಜೀವಿಗಳ ಮೊಗದಲಿ ಬಿಜಲಿ […]

Back To Top