Day: July 10, 2020

ಭಯ ಪಡುವುದೇನಿಲ್ಲ

  ಡಾ ಪ್ರತಿಭಾ  ಹಳಿಂಗಳಿ ಭಯ ಅಂದರೆ ಏನು ಎನ್ನುವವರು ಕೂಡ ಈ ಕೊರೊನಾ ಮಹಾಮಾರಿಗೆ ಹೆದರುವಂತಾಗಿದೆ.ತನ್ನ ಕಬಂಧ ಬಾಹುಗಳಿಂದ ಇಡಿಯ ವಿಶ್ವವನ್ನೇ ತಲ್ಲಣಗೊಳಿಸಿರುವ ಈ ರೋಗಕ್ಕೆ ಚಿಕಿತ್ಸೆ ಇನ್ನು ಲಭ್ಯವಿಲ್ಲ.            ಇದರ ಮುಖ್ಯ ಲಕ್ಷಣ ಸೀನು,ಕೆಮ್ಮು,ಜ್ವರ ನೋಡಿದರೆ ಸಾಮಾನ್ಯ ನೆಗಡಿ,ಕೆಮ್ಮಿನಂತೆ ಈ ರೋಗ ಯಾವುದೇ ಹೊತ್ತಿನಲ್ಲಿ ತನ್ನ ಅಸ್ತಿತ್ವ ಬದಲಾಯಿಸಿ ಭಯಂಕರ ವಾಗಿಬಿಡುತ್ತದೆ.ಉಸಿರಾಟದ ತೊಂದರೆ ಉಂಟಾಗಿ ಸರಿಯಾಗಿ ಉಸಿರಾಡಲು ಆಗದೆ ಆಕ್ಸಿಜನ್, ವೆಂಟಿಲೇಟರಗಳ ಬಳಕೆ ಅನಿವಾರ್ಯ ವಾಗುತ್ತದೆ.ಕೊರೊನಾ ಪೀಡಿತ ಎಲ್ಲಾ ರೋಗಿಗಳಿಗೂ ಆಕ್ಸಿಜನ್ ಮತ್ತು […]

ಹಿಂಡು ಮೋಡದ ಗಾಳಿ ಸವಾರಿ

ಪ್ರಜ್ಞಾ ಮತ್ತಿಹಳ್ಳಿ ಹಿಂಡು ಮೋಡದ ಗಾಳಿ ಸವಾರಿ -ಆಷಾಢ     ಮದ್ದಾನೆಯ ಹಿಂಡೊಂದು ಧಾಳಿಯಿಟ್ಟಂತೆ ಅಲ್ಲೋಲಕಲ್ಲೋಲಗೊಳ್ಳುವ ಆಕಾಶದಂಗಳ. ಅದಾಗಲೇ ರಜೆ ಹಾಕಿ ವಿಳಾಸ ಕೊಡದೇ ನಾಪತ್ತೆಯಾದ ಸೂರ್ಯ. ಭರ‍್ರೋ ಎಂದು ಬೀಸುತ್ತ ಗಿಡ-ಮರಗಳನ್ನು ಮಲಗಿಸುವ ರಭಸದ ಗಾಳಿ. ಬೆಳಗೊ-ಬೈಗೊ ಒಂದೂ ತಿಳಿಯದಂತೆ ಮೋಡ ಮಡುಗಟ್ಟಿಕೊಂಡ ಬಾನಾಂಗನೆಯ ಮುಖಾರವಿಂದ.  ಹುರುಪು ಬಂದದ್ದೇ ಕುಮ್ಚಿಟ್ಟೆ ಹೊಡೆದು, ಗಿರಿಗಿರಿ ಮಂಡಿ ತಿರುಗುವ ಪುಂಡು ವೇಷದ ಹಾಗೆ ರಪರಪ ರಾಚುವ ಮಳೆ. ಹಾಂ ಇದು ಆಷಾಢ. ಇದರ ಮೂಲ ಲಕ್ಷಣವೇ ಗಾಳಿ. ಇದು […]

Back To Top