ಮಕ್ಕಳ ಕವಿತೆ
ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ ಇರುವೆ ಗೆಳೆಯನು ತಾನೇನಾನೇ ನೋಡಿಲ್ವಕಾಡಿನ ಬಿಲದಲಿ ಹುಲ್ಲಿನ ಬೀಜಕೂಡಿ ಹಾಕಿಲ್ವ? ಹುಲ್ಲು ಮೊಳೆತು ಮಳೆಯ ಬೆರೆತುಆನೆಯು ತಿಂದಿಲ್ವಆನೆಗು ಇರುವೆಗು ಭೇದವೆ ಇಲ್ಲಬೆಲ್ಲ ಕದ್ದಿಲ್ವ? ಪುಟ್ಟಿಯ ಮಾತು ಸಿಡಿಯೋ ಅರಳುತಲೆಯು ಕೆಟ್ಟಿಲ್ವ!!ಅಮ್ಮ ಅಪ್ಪ ಅಜ್ಜಿ ಅಜ್ಜಬಿದ್ದು ನಕ್ಕಿಲ್ವ? ******************************
ಬೆಳಕಿನ ರೋಚಕತೆ ನೀಡುವ ಬೆಳದಿಂಗಳು. ಪುಸ್ತಕ- ಬೆಳದಿಂಗಳು ಕವಿ- ಗುರು ಹಿರೇಮಠ ವಿಶ್ವೃಷಿ ಪ್ರಕಾಶನ ಬೆಲೆ-೧೨೦/- ಗುರು ಹಿರೇಮಠ ತುಮಕೂರು ಟು ಹೊಸ್ಪೇಟ್ ಎಂದೇ ನನಗೆ ಪರಿಚಯವಾದವರು. ಮೃದು ಮಾತಿನ ಅಷ್ಟೇ ನಾಚಿಕೆ ಸ್ವಭಾವದ ಹುಡುಗ. ಯಾವಾಗ ಎದುರಿಗೆ ಸಿಕ್ಕರೂ ಒಂದು ನಗೆಯ ಹೊರತಾಗಿ ಬೇರೆ ಮಾತು ಆಡಲು ಬರುವುದೇ ಇಲ್ಲವೇನೋ ಎಂಬಷ್ಟು ಮೌನಿ. ಅವರ ಚುಟುಕುಗಳ ಸಂಕಲನ ಬೆಳದಿಂಗಳು ಓದಿದಾಗ ಅವರ ಮೌನಕ್ಕೊಂದು ಅರ್ಥ ದೊರಕಿತು ನನಗೆ. ಹೇಳಬೇಕಾದುದ್ದನ್ನೆಲ್ಲ ಚುಟುಕಾಗಿ ಮೂರು ನಾಲ್ಕು ಸಾಲುಗಳಲ್ಲಿ ಹೇಳಿ […]
ಬಾಗಿಲುಗಳ ಆಚೀಚೆ ಬಾಗಿಲುಗಳ ಆಚೀಚೆ ಏನೆಲ್ಲ ಇರಬಹುದು! ಹುಟ್ಟಿದ ಭಾವನೆಗಳನ್ನೆಲ್ಲ ಹುಷಾರಾಗಿ ನಿರ್ವಹಿಸುವ ಮನಸ್ಸಿನಂತೆಯೇ ಬಾಗಿಲುಗಳು ಕೂಡಾ. ಅಗತ್ಯಕ್ಕೆ, ಅವಶ್ಯಕತೆಗೆ ಅನುಗುಣವಾಗಿ ತೆರೆದುಕೊಳ್ಳುವ ಒಂದೊಂದು ಬಾಗಿಲಿಗೂ ಅದರದೇ ಆದ ಪುಟ್ಟ ಹೃದಯವೊಂದು ಇರಬಹುದು; ಆ ಹೃದಯದ ಬಡಿತಗಳೆಲ್ಲವೂ ಮನೆಯೊಳಗಿನ ಮೌನವನ್ನೋ, ಅಂಗಡಿಗಳ ವ್ಯವಹಾರವನ್ನೋ, ಸಿನೆಮಾ ಹಾಲ್ ನ ಕತ್ತಲೆಯನ್ನೋ, ರಸ್ತೆಯೊಂದರ ವಾಹನಗಳ ವೇಗವನ್ನೋ ತಮ್ಮದಾಗಿಸಿಕೊಳ್ಳುತ್ತ ಏರಿಳಿಯುತ್ತಿರಬಹುದು. ಹೀಗೆ ಎಲ್ಲ ಪ್ರಾಪಂಚಿಕ ನೋಟ-ಅನುಭವಗಳನ್ನು ತಮ್ಮದಾಗಿಸಿಕೊಳ್ಳುವ ಬಾಗಿಲುಗಳಿಗೆ ಒಮ್ಮೊಮ್ಮೆ ಕೃಷ್ಣ-ರಾಧೆಯರ, ಶಿವ-ಪಾರ್ವತಿಯರ ಹೃದಯಗಳೂ ಅಂಟಿಕೊಂಡು ಈ ಬಾಗಿಲು ಎನ್ನುವ ವಿಸ್ಮಯದ […]