ಅನುವಾದ ಸಂಗಾತಿ
ಕಿಟಕಿ — ಗೋಡೆ ಕನ್ನಡ ಮೂಲ:ವಸುಂಧರಾಕದಲೂರು ಇಂಗ್ಲೀಷಿಗೆ: ಸಮತಾ ಆರ್ ಕಿಟಕಿ — ಗೋಡೆ ನಾನೊಂದು ಕಿಟಕಿ; ಮುಚ್ಚಿಯೇಇದ್ದೇನೆ ಶತಮಾನಗಳಿಂದಗತಕಾಲದ ಗಾಳಿ ಒಳಗೆಸುಳಿದಾಡುತ್ತಾ ಕತ್ತಲ ಘಮಲಿನಅಮಲಲಿ ಉರುಳಾಡುತ್ತಾಎದ್ದೆದ್ದು ಕುಣಿಯುವಆತ್ಮಗಳೂ ಅಸ್ಥಿಪಂಜರಗಳೂನನ್ನೊಳಗಿವೆ. ವಿಶಾಲ ಬಿಳಲುಗಳ ಆಲದಮರವೊಂದು ಟಿಸಿಲೊಡೆದುತೊಗಟೆ ಕಳಚಿಕೊಳ್ಳದೆ ಬೇರೂರಿಮುಚ್ಚಿದ ಕಿಟಕಿಯಾಚೆಸ್ವಚ್ಛ ಗಾಳಿಗೆ ಚಿಗುರು ಚಿಗಿಸಿಹಕ್ಕಿ ಗೂಡಿಗೆ ಟೊಂಗೆ ಚಾಚಿದೆ.ಒಂದೊಂದು ಟೊಂಗೆಗೂಗೂಡು. ಗೂಡೊಳಗೆ ಕಾವುಕೂತ ಹಸಿ ಬಾಣಂತಿ ಹಕ್ಕಿಕಿಟಕಿ ಕುಟುಕಿದ ಸದ್ದು;ಚಾಚಿದ ಟೊಂಗೆಯೋಚೈತನ್ಯದ ಹಕ್ಕಿಯೋ ತಿಳಿಯದು.ಪ್ರತೀ ಶಬ್ದ ಮಾಡುವ ಹಕ್ಕಿಗೂಅದೇನು ರಾಗವೋಸುಮ್ಮಗೆ ಬೀಸುವ ಗಾಳಿಗೆತಲೆದೂಗುವ ಟೊಂಗೆಗಳಿಗೂಅದೇನು ಹೊಸ ರಂಗೋ […]
ಗಝಲ್
ಗಝಲ್ ಸಹದೇವ ಯರಗೊಪ್ಪ ಪ್ರೇಮದ ಹೂ ಬಾಣ ಹೃದಯದಲಿ ರುಜು ಹಾಕುವಾಗ ನಾನೇ ಇಲ್ಲದಾದೆಹದವರಿತ ಎದೆಹೊಲದಿ ಬಿತ್ತಿದ ಪ್ರೀತಿ ಫಲ ನೀಡುವಾಗ ನಾನೇ ಇಲ್ಲದಾದೆ ಅಂಗಗಳ ಸಂಗ ಬಯಸಿದ ಮನಸು ನಿದಿರೆ ಬತ್ತಿಸಿ ಕಂಗಳ ವಿಶ್ರಾಂತಿ ಕದ್ದಿದೆತುಂಬಿದ ರೂಪದ ಬಟ್ಟಲು ಕಂಡು ಗುಲಾಬಿ ರಂಗೇರಿದಾಗ ನಾನೇ ಇಲ್ಲದಾದೆ ಫಕೀರನಂತೆ ತಂಬೂರಿ ಮೀಟುತ ಅವಳ ಹಿಮ್ಮಡಿಯ ಹುಡಿಬೆಳಕಲಿ ಅಲೆದೆಬದುಕಿನ ತಿರುವಿನಲ್ಲಿ ಕಣ್ಣ ಪ್ರಣತಿ ಹೊತ್ತಿಸಿ ಕಾಯುವಾಗ ನಾನೇ ಇಲ್ಲದಾದೆ ಮೋಹ ತೃಷೆಯಲಿ ತೇಲಾಡುವ ಅಮಲಿಗೆ ಬಿಸಿಯುಸಿರ ಗುಟುಕಿಸಿದೆಒಲವ ಮಳೆಗೆ […]
ಗುರುವಿನ ಗರಿಮೆ
ಲೇಖನ ಗುರುವಿನ ಗರಿಮೆ ನೂತನ ದೋಶೆಟ್ಟಿ ಬಾಲ್ಯದಲ್ಲಿ ಶಿಕ್ಷಣವೆಂದರೆ ಶಿಕ್ಷೆ ಯೌವನದಲ್ಲಿ ಶಿಕ್ಷಣವೆಂದರೆ ಪರೀಕ್ಷೆಗಳು ಹಾಗೂ ಮೋಜು, ಆನಂತರದಲ್ಲಿ ಅದೇ ಶಿಕ್ಷಣ ವೃತ್ತಿಗೆ ರಹದಾರಿ.ಈ ರೀತಿಯಾಗಿ ಶಿಕ್ಷಣವನ್ನು ಸರಳೀಕರಿಸಬಹುದಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹಿನ್ನೆಲೆಯಲ್ಲಿ ಎರಡು ಸರಳ ಸೂತ್ರಗಳನ್ನು ನಿಮ್ಮ ಮುಂದೆ ಇಡಬಯಸುತ್ತೇನೆ. ಶಿಕ್ಷಣ= ಶಿಕ್ಷಣ ಸಂಸ್ಥೆ+ ವಿದ್ಯಾರ್ಥಿ ಉದ್ಯೋಗ= ಮಾರ್ಕ್ಸ+ ವಶೀಲಿ ಈ ಎರಡು ಸೂತ್ರಗಳನ್ನು ಇಟ್ಟುಕೊಂಡು ಇಂದಿನ ಶಿಕ್ಷಣದ ಬಗ್ಗೆ ನೋಡೋಣ. ಮೊದಲ ಸೂತ್ರದಲ್ಲಿ ಶಿಕ್ಷಣ ಸಂಸ್ಥೆಗಳು ಬಹು ಮುಖ್ಯವಾಗುತ್ತವೆ. ಉನ್ನತ ಶಿಕ್ಷಣದಲ್ಲಿ ಈ […]
ದೇಹದ ಹಂಗು ತೊರೆದು; ಹೊಸದನ್ನು ಹುಡುಕಿ ಯಾರಾದರೂ ವ್ಯಾಟ್ಸ್‌ಆಪ್ ಅಥವಾ ಫೇಸ್‌ಬುಕ್‌ನ ಇನ್ ಬಾಕ್ಸ್‌ಗೆ ಬಂದು ಅಡ್ರೆಸ್ ಕೊಡಲು ಕೇಳಿದರೆ ನಾನು ಮಾತನಾಡದೇ ಕೊಟ್ಟುಬಿಡುವುದು ನನಗೆ ರೂಢಿಯಾಗಿಬಿಟ್ಟಿದೆ. ಯಾಕೆಂದರೆ ಬಹುತೇಕ ಹಾಗೆ ಕೇಳುವವರು ಸಾಹಿತಿ ಮಿತ್ರರೇ. ಅದೂ ಆಗಷ್ಟೇ ಅವರ ಪುಸ್ತಕ ಪ್ರಕಟವಾದವರು. ಹೀಗಾಗಿ ಪ್ರಕಾಶ ನಾಯಕರು ವಿಳಾಸ ತಿಳಿಸು ಎಂದು ವ್ಯಾಟ್ಸ್ ಆಪ್‌ನಲ್ಲಿ ಕೇಳಿದಾಗ ಅವರ ಅಂತೂ ಫೇಸ್‌ಬುಕ್‌ನಲ್ಲಿ ಸದ್ದು ಮಾಡ್ತಿರೋದನ್ನು ಗಮನಿಸಿದ್ದರಿಂದ ಅಷ್ಟೇನು ಗಮನವಹಿಸದೇ ಕೊಟ್ಟುಬಿಟ್ಟೆ. ಅದಾದ ನಂತರ […]
ಅಂಕಣ ಬರಹ ಅಂಜನಾ ಬರೆಯುತ್ತಾರೆ ಜಗಲಿಯೆನ್ನುವ ಮೊದಲಪ್ರೇಮ ಸೂರ್ಯ ಮೂಡುವ ಹೊತ್ತು ಬರಿಗಾಲಲ್ಲಿ ಒಮ್ಮೆ ಅಂಗಳಕ್ಕಿಳಿದು ನೋಡಿ. ಮಣ್ಣಿನೊಂದಿಗಿನ ಮೊದಲಪ್ರೇಮದ ಸ್ಪರ್ಶ ಅಂಗಾಲುಗಳನ್ನು ತಾಕಿ ಹೃದಯವನ್ನು ಸೋಕುತ್ತದೆ; ಬಾಗಿಲುಗಳಾಚೆ ಬಂದು ಸುರಿವ ಮಳೆಗೆ ಒಮ್ಮೆ ಮುಖವನ್ನೊಡ್ಡಿ ನೋಡಿ. ಮಳೆಯೊಂದಿಗಿನ ಮೊದಲಪ್ರೇಮದ ಸುಖ ಮುಂಗುರುಳನ್ನು ತೋಯಿಸಿ ಹನಿಹನಿಯಾಗಿ ನೆಲಕ್ಕಿಳಿಯುತ್ತದೆ; ಒಂದು ಏಕಾಂತದ ಸಂಜೆಯಲ್ಲಿ ಸದ್ದಿಲ್ಲದೆ ಅರಳುತ್ತಿರುವ ಜಾಜಿಯ ಮೊಗ್ಗುಗಳನ್ನು ಅಂಗೈಯಲ್ಲಿ ಹಿಡಿದು ನೋಡಿ. ಪರಿಮಳದೆಡೆಗಿನ ಮೊದಲಪ್ರೇಮದ ಭಾವ ಇಂದ್ರಿಯಗಳ ಹಂಗು ತೊರೆದು ಗಾಳಿಯೊಂದಿಗೆ ತೇಲಿ ಹಗುರಾಗುತ್ತದೆ. ಮೃದುವಾದ ಪುಟ್ಟಪುಟ್ಟ […]