ಹಕ್ಕಿಯ ದುರಂತ
ಅನುವಾದಿತ ಕವಿತೆ ಹಕ್ಕಿಯ ದುರಂತ ವಿ.ಗಣೇಶ್ ಸಗ್ಗದ ಚೆಲುವಿನ ಹಕ್ಕಿಯು ಒಂದುಭಾನಂಗಳದಿಂದ ಧರೆಗಿಳಿದುಊರಿನ ಮನೆ ಮಂದಿರಗಳ ಮೇಲ್ಗಡೆಹಾರುತಲಿದ್ದಿತು ನಲಿನಲಿದು. ಚಿನ್ನದ ವರ್ಣದ ರನ್ನದ ರೆಕ್ಕೆಯನೀಲಿಯ ಕಂಗಳ ಆ ಹಕ್ಕಿಹಾರುತ ಬರುವುದ ನೋಡಿದ ಮಕ್ಕಳಎದೆಯಲಿ ಆನಂವೆ ಉಕ್ಕಿ ಹಕ್ಕಿಯು ಹಾರುತ ಸಾಗುವ ಜಾಡಲಿತಾವೂ ಓಡುತ ಕೆಳಗಿಂದಕೇಕೆಯ ಹಾಕುತ ನಲಿಯುತಲಿರಲುಜನ ಸೇರಿತು ಅಚ್ಚರಿಯಿಂದ ಎಂಥ ಚೆಂದದ ಚೆಲುವಿನ ಹಕ್ಕಿಏನದು ಚೆಂದ ಆ ಮೈ ಬಣ್ಣ!ಕೈಗದು ಸಿಕ್ಕರೆ ಮಾರಲು ಆಗಕೈತುಂಬ ಹಣ ಝಣ ಝಣ ಮಾರುವುದೇತಕೆ ನಾವೇ ಹಿಡಿದುಕೊಂದೇ ತಿಂದರೆ ಬಹಳ […]
ನಸುಕಿನ ಕನಸಿನಲಿ ನನ್ನವಳು
ಕವಿತೆ ನಸುಕಿನ ಕನಸಿನಲಿ ನನ್ನವಳು ಜಯಶ್ರೀ.ಭ.ಭಂಡಾರಿ .
ತಮಂಧದೆಡೆಗೆ
ಕವಿತೆ ತಮಂಧದೆಡೆಗೆ ನೂತನ ದೋಶೆಟ್ಟಿ ತುತ್ತಿಡುತ್ತ ತೋರಿದ ಚಂದಮಾಮಬೆದರಿ ಅಡಗಿದ ಮೊಲಕಣ್ಣ ಕ್ಯಾನ್ವಾಸಿನಲ್ಲಿ ಕಳೆದು ಹೋದ ಕೌತುಕ ಆಕೆಯೊಂದಿಗಿನ ಬೆಳದಿಂಗಳ ರಾತ್ರಿಕ್ಯಾಂಡಲ್ ಡಿನ್ನರ್ಭ್ರಮೆಯಲ್ಲಿ ಕರಗಿದ ಕಲ್ಪನಾ ಲೋಕ ಚಂದ್ರನ ಮೇಲೀಗ ಸೈಟ್ ಬುಕ್ಕಿಂಗ್!ನೀರಿಲ್ಲದ ಚದರಡಿಯ ಬೆಲೆ ಕೊಂಚ ಕಮ್ಮಿಪಸೆಯ ನೆಲ ಚಿನ್ನಕ್ಕೂ ಮಿಗಿಲುಲೋಡ್ ಶೆಡ್ಡಿಂಗ್ ನ ಹೋಗಲು ರಾತ್ರಿಗಳಲೂಮನೆಯ ಸ್ಕೆಚ್ಚು ತಯಾರು ಓಡುವ ಚಂದಿರನ ಹಿಡಿಯಲುಆಕಾಶಕ್ಕೆ ಇಟ್ಟು ಏಣಿಯ ಮೇಲೆವಾಮನನ ಎರಡು ಪಾದಗಳುಇನ್ನೊಂದಕ್ಕೆ ಮಂಗಳನ ಆಹ್ವಾನ ನೀರು ಗುರುತಿದ್ದರೆ ಹೇಳಿಗಾಳಿ,ಮಳೆ, ಬೆಳಕೆಲ್ಲಹುಟ್ಟುವವು ಲ್ಯಾಬಿನಲ್ಲಿನಾಳೆಗಳು ಕರೆದೊಯ್ಯಲುಬೆಳಕಿನಿಂದ ಕತ್ತಲೆಡೆಗೆ. *********************************
ಹಲವು ಭಾವಗಳನ್ನು ಒಟ್ಟಿಗೆ ಸೆರೆಹಿಡಿಯುವ ರೂಪಕಗಳು ಸೂಜಿ ಕಣ್ಣಿಂದ ತೂರಿದದಾರಕ್ಕೆ ಒಳಗಿಲ್ಲ ಹೊರಗಿಲ್ಲ ಈ ಒಂದು ಸಾಲಲ್ಲಿಯೇ ತನ್ನ ಇಡೀ ಕಾವ್ಯದ ಸತ್ವವನ್ನು ನಮ್ಮೆದುರಿಗೆ ತೆರೆದಿಟ್ಟ ಕೃಷ್ಣ ಗಿಳಿಯಾರ ಎಂಬ ವೈದ್ಯರ ಪರಿಚಯ ಯಾರಿಗಿಲ್ಲ ಹೇಳಿ. ವೃತ್ತಿಯಲ್ಲಿ ವೈದ್ಯರಾದರೂ ನವಿರು ಗೆರೆಗಳು ಅವರ ಭಾವಾಭಿವ್ಯಕ್ತಿಯ ಪ್ರತಿರೂಪ. ಭಟ್ಕಳದಲ್ಲಿ ವೈದ್ಯರಾಗಿ ಕಾರ್‍ಯ ನಿರ್ವಹಿಸುತ್ತಿರುವ ಕೃಷ್ಣ ಗಿಳಿಯಾರರ ಕ್ಯಾಮರಾಕ್ಕೆ ಫೋಸ್ ನೀಡಲೆಂದೇ ಬಹಳಷ್ಟು ಹೂವುಗಳು ಅರಳುತ್ತವೆ. ಹೆಚ್ಚಿನ ಪಕ್ಷಿಗಳು ಅವರೆದುರು ಹೊಸ ಮದುವಣಗಿತ್ತಿಯಂತೆ ನುಲಿಯುತ್ತ ನಡೆಯುತ್ತವೆ. ಸೂರ್‍ಯ ಬಳಕುತ್ತ ತನ್ನದೊಂದು […]
ಪಾಲಿಸೋ ಹೂವ ನಾನು ಚಿಕ್ಕವಳಿದ್ದಾಗ ಊರಿನ ಆಂಜನೇಯ ದೇವಸ್ಥಾನದ ದೇವರ ಪಲ್ಲಕ್ಕಿ ವರುಷಕ್ಕೊಮ್ಮೆ ನಮ್ಮ ಮನೆಗೆ ಬರುತ್ತಿತ್ತು. ಮನೆಯ ಹಿರಿಯರೆಲ್ಲರೂ ಭಯ-ಭಕ್ತಿಗಳಿಂದ ದೇವರನ್ನು ಸ್ವಾಗತಿಸಲು ಸಿದ್ಧರಾದರೆ, ನನ್ನ ಮನಸ್ಸಿನಲ್ಲೊಂದು ವಿಚಿತ್ರವಾದ ಸಡಗರ ತುಂಬಿಕೊಳ್ಳುತ್ತಿತ್ತು. ಕಲ್ಲು-ಮುಳ್ಳು ಬಿಸಿಲು ಯಾವುದನ್ನೂ ಲೆಕ್ಕಿಸದೆ ಮಡಿಬಟ್ಟೆಯಲ್ಲಿ ಪಲ್ಲಕ್ಕಿ ಹೊರುತ್ತಿದ್ದ ಗಂಡಸರು, ಅವರ ಕಾಲುಗಳನ್ನು ತಣ್ಣೀರಿನಿಂದ ತೊಳೆದು ಹಳೆಹಾಡುಗಳನ್ನು ಹಾಡುತ್ತ ಪಲ್ಲಕ್ಕಿಯನ್ನು ಸ್ವಾಗತಿಸುತ್ತಿದ್ದ ಹೆಂಗಸರು, ದೇವರು-ಶಾಸ್ತ್ರ ಯಾವುದರ ಬಗ್ಗೆಯೂ ಸ್ಪಷ್ಟ ಕಲ್ಪನೆಯಿಲ್ಲದೆ ದೇವರ ಆಗಮನವನ್ನು ನೆಂಟರು ಬಂದಂತೆ ಸಂಭ್ರಮಿಸುತ್ತಿದ್ದ ಮಕ್ಕಳು ಹೀಗೆ ಬಿಡಿಬಿಡಿಯಾದ ಪ್ರಪಂಚಗಳನ್ನು […]