ಅಂಕಣ ಬರಹ-14 `ಸಣ್ಣ’ಸಂಗತಿ ನರಸಿಂಹಸ್ವಾಮಿಯವರ ಪುಟ್ಟ ಕವಿತೆಯೊಂದಿದೆ-ಹೆಸರು `ಸಣ್ಣಸಂಗತಿ’. ಅದು ಸಾಹಿತ್ಯ ವಿಮರ್ಶೆಯಲ್ಲಿ ಶ್ರೇಷ್ಠ ಕವನವೆಂದೇನೂ ಚರ್ಚೆಗೊಳಗಾಗಿಲ್ಲ. ಆದರೆ ಮತ್ತೆಮತ್ತೆ ಕಾಡುತ್ತದೆ. ಅದರ ವಸ್ತು ತಾಯೊಬ್ಬಳ ದುಡಿತ. ಅಲ್ಲೊಂದು ಸನ್ನಿವೇಶವಿದೆ: ನಡುರಾತ್ರಿ. ಕುಟುಂಬದ ಸಮಸ್ತ ಸದಸ್ಯರೂ ಗಾಢನಿದ್ದೆಯಲ್ಲಿದ್ದಾರೆ. ಅವರಲ್ಲಿ ಎಳೆಗೂಸಿನ ತಾಯಿಯೂ ಸೇರಿದ್ದಾಳೆ. ಆಕೆಯ ಮಂಚದ ಪಕ್ಕದಲ್ಲಿರುವ ತೊಟ್ಟಿಲಲ್ಲಿ ಕೂಸಿದೆ. ಅದು ಗಾಳಿಯಲ್ಲಿ ಕಾಲು ಅಲುಗಿಸುತ್ತ ಹೊದಿಕೆಯನ್ನು ಕಿತ್ತೆಸೆಯುತ್ತಿದೆ. ಎಲ್ಲರಂತೆ ಆಕೆಯೂ ನಿದ್ದೆಯಲ್ಲಿ ಮುಳುಗಿರುವಳು. ಆದರೆ ಅವಳ ಕೈ ಮಗುವಿನ ಹೊದಿಕೆಯನ್ನು ಸರಿಪಡಿಸುತ್ತಿದೆ. `ನಿದ್ದೆ ಎಚ್ಚರಗಳಲಿ ಪೊರೆವ […]