Day: January 1, 2021

ಮುನ್ನಡೆಗೆ ಹಿಂಬಾಗಿ

ಕವಿತೆ ಮುನ್ನಡೆಗೆ ಹಿಂಬಾಗಿ ಹರೀಶ ಕೋಳಗುಂದ ಕಣ್ಣ ಪರದೆಯ ಮೇಲೆ ಓಡುವಬಣ್ಣ ಬಣ್ಣದ ಚಿತ್ರಗಳುಉರುಳುವ ಗಾಲಿಚಕ್ರದ ಪರಿಧಿಯಲಿಸರಿದು ಮರೆಯಾಗುವ ಮೈಲುಗಲ್ಲುಗಳುದೂರ ತೀರದಲ್ಲೆಲ್ಲೋ ಇಳಿಬಿದ್ದು ನೆಲಕಚ್ಚಿದಾಕಾಶಕಾಗಜದೋಣಿಯ ಬಟ್ಟಲಿಗೆ ತೊಟ್ಟಿಕ್ಕುವ ಪಾತಾಳಗಂಗೆಭೂಮಧ್ಯರೇಖೆಗೂ ಭ್ರಮಣದ ನಶೆಇರುಳು ಬೆಳಕಿನಾಟಗೇಲಿ ನಗುವ ಕತ್ತಲುಬೆಂಕಿಯುಗುಳುವ ಮುಗಿಲುತಣ್ಣಗೆ ಸುಡುವ ಹಸಿವ ಜ್ವಾಲೆಕುದಿವ ಮೌನತುಮುಲಗಳ ಅದುಮಿಟ್ಟಂತೆಲ್ಲಾರೆಕ್ಕೆ ಬಡಿವ ತವಕಮಂಜು ಹೊದ್ದು ಮಲಗಿದ ಬೂದಿಯೊಳಗೂಹೆಪ್ಪುಗಟ್ಟಿ ಕುಳಿತ ಅಗ್ನಿಶಿಲ್ಪಜೀವದುಸಿರಿನ ಕಾತರಉರಿವ ಮಂದಾಗ್ನಿಯ ಬುತ್ತಿಗೆ ಕೈಯಿಕ್ಕುವ ತುಡಿತದೊಂದಿಯಾಗದ ಕಟ್ಟಿಗೆಯ ನಿರಾಶಾಭಾವನೋಯುವ ಕರುಳ ಕಣ್ಣ ಹನಿಗೆಚಿಗುರೊಡೆವ ಸಾಂತ್ವನದ ಬೆರಳುಒಂದೋ ಎರಡೋಒಡಕಲು ಬಿಂಬಕ್ಕೆ ಕೈ ಚಾಚಿ […]

ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್

ಕವಿತೆ ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್ ಸ್ಮಿತಾ ಭಟ್ ವರ್ಷವೊಂದು ಗತಿಸಿ ಹೋಯಿತಲ್ಲ, ಎಂದು ಅಂತರ್ಮುಖಿಯಾಗಿ ಯೋಚಿಸುತ್ತಾ ಖಾಲಿ ಗೋಡೆಯತ್ತ ತದೇಕಚಿತ್ತದಿಂದ ನೋಡುತ್ತಿದ್ದೆ. ತನ್ನ ಅಸ್ತಿತ್ವವನ್ನು ನೆನಪಿಸುವಂತೆ, ತೂಗುಹಾಕಿದ ಕ್ಯಾಲೆಂಡರ್ ಗಾಳಿಗೆ ಹಾರುತ್ತಾ ಪರ ಪರ ಸದ್ದು ಮಾಡಿತು ಅದು ಏನನ್ನೋ ಹೇಳುತ್ತಿರುವಂತೆ ಭಾಸವಾಗುತ್ತಿತ್ತು. ಬೀಸುವ ಗಾಳಿಗೆ ಉದುರಿ ಬಿದ್ದಾವು ಎಂದು,ಬರುತ್ತಿದ್ದ ಗಾಳಿಯನ್ನು ತಡೆಯಲು ಎದ್ದು ಕಿಟಕಿಯ ಕದವನ್ನು ಎಳೆದೆ. ಆಗಲೂ ಕ್ಯಾಲೆಂಡರ್ ನದು ಮತ್ತದೇ ಸದ್ದು. ಆಗಲೇ ನಾನು ಗಮನಿಸಿದ್ದು ನವೆಂಬರ್ ತಿಂಗಳಿನಲ್ಲಿಯೇ ನಿಂತು ತನ್ನ ದಯನೀಯ […]

ಹೊಸದಾಗುವುದಾದರೆ…!

ಕವಿತೆ ಹೊಸದಾಗುವುದಾದರೆ…! ಅನಿತಾ ಪಿ. ಪೂಜಾರಿ ತಾಕೊಡೆ ಎರಡು ಸಾವಿರದ ಇಪ್ಪತ್ತೊಂದರ ಪುಟಗಳಲಿಏನಾದರೂ ಹೊಸದಾಗುವುದಾದರೆಆ ಹೊಸತಿನೊಳು ಬದಲಾಗುವುದಾದರೆ…! ಸ್ವಾರ್ಥದ ಕಿಚ್ಚಿಳಿದು ಸೌಹಾರ್ದತೆ ಬೆಸೆದುಕ್ರೌರ್ಯವಳಿದು ಮಾನವೀಯತೆ ಮೊಳೆಯಲಿನಾನೆಂಬ ಅಹಂ ಮರೆತು ನಾವು ನಮ್ಮವರೆಂದುಉಳ್ಳವನು ಇಲ್ಲದವನ ಆಂತರ್ಯವನು ತಿಳಿಯಲಿ ಕಾರಣಗಳು ಸಂಬಂಧಗಳ ದೂರೀಕರಿಸದೆ ಸಕಾರಣಗಳು ಒಡೆದ ಮನಸ್ಸುಗಳನು ಕೂಡಿಸಲಿಬುದ್ಧಿಯು ಅತಿಯಾಸೆಯ ಕೈಗೆ ಸಿಲುಕದೆನೆಮ್ಮದಿಯ ಬದುಕಿಗಷ್ಟೆ ಸೀಮಿತವಾಗಿರಲಿ ಬೇಕು ಬೇಡಗಳ ನಡುವೆ ಸ್ವಾರ್ಥದೆಳೆಗಳು ಬಂದು ಅಂತರ ನಿರಂತರವಾಗದಿರಲಿಆಪ್ತ ಪರಮಾಪ್ತತೆಯ ಆಂರ್ತರ್ಯದ ಒಲವುಪದಗಳಲಿ ಹೊಳೆದು ಮಾಸುವ ಬಣ್ಣವಾಗದಿರಲಿ ಈ ವರ್ಷದಲಿ ಹೊಸತು ಹೀಗೂ ಒಂದಿರಲಿವೈರಾಣುವಿನಲ್ಲಿ ವಿನಾಶದ […]

ಡಿಯರ್-ಟೈಗರ್!

ಕಥೆ ಡಿಯರ್-ಟೈಗರ್! ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೆಣ್ಣು ಅಂದರೆ ಪ್ರಬಲವಾದ ಶಿಸ್ತು ಮತ್ತು ಕಬಂಧ ಬಾಹುಬಲದ  ಚೌಕಟ್ಟಿನಲ್ಲಿ ಬೆಳೆಯಬೇಕು; ಅಷ್ಟೇ ಕಟ್ಟುನಿಟ್ಟಿನ ಬೇಲಿಯೊಳಗೆ ಬದುಕಬೇಕು ಎಂಬ ಬಂಧಿಯಲ್ಲ. ಅವಳಿಗೂ ಸರ್ವಸ್ವತಂತ್ರದ ಬದುಕು ಇಷ್ಟ. ಖಂಡಿತ! ಇದು ಬಹುಶಃ ಎಲ್ಲರ  ಪಾಲಿನ ಸತ್ಯ.  ಆದರೆ, ಅನೇಕರಿಗೆ ಅಂಥ ಜೀವನ ಇರಲಿ, ಆ ರೀತಿಯ ಮುಕ್ತ ಯೋಚನೆ ಕೂಡ ಅಸಾಧ್ಯ, ಅನ್ನಿಸುವಷ್ಟು ‘ಸರಳುಗಳ ಹಿಂದಿನ ಬಾಳು!’. ವಾಸ್ತವವಾಗಿ, ಅವರಿಗೆ ಆ ಸರಳುಗಳನ್ನು ಎಣಿಸುವ ಧೈರ್ಯ ಸಹ ಇರಲಾರದು… ಕಲ್ಯಾಣಿ […]

ಅಂಕಣ ಬರಹ ರಂಗ ರಂಗೋಲಿ-06 ಅಜ್ಜಿಯ ಗೂಡಲಿ ಹಾರಲು ಕಲಿತ ಗುಬ್ಬಿ ಮರಿ ಆ ಹಳೇ ಮನೆಯಲ್ಲಿ ತೆಂಗಿನ ಹಸಿ ಮಡಲಿನಿಂದ ಒಂದೊಂದು ಒಲಿಯನ್ನು ತನ್ನ ಚಿಕ್ಕಕತ್ತಿಯಿಂದ ಸರ್ರೆಂದು ಎಳೆದು ನನ್ನ ಆಟಕ್ಕೆ ಹಾವು ,ಬುಟ್ಟಿ, ವಾಚ್,ಕಾಲ್ಗೆಜ್ಜೆ, ಕನ್ನಡಕ ಎಷ್ಟು ಪರಿಕರಗಳು ತಯಾರಾಗುತ್ತಿದ್ದವು. ಮಿದುಳಲ್ಲಿ ಚಿತ್ರವಾದ ಕಲ್ಪನೆಗಳೆಲ್ಲಾ, ಅದ್ಭುತ ಆಟಿಗೆಯಾಗಿ, ಕಲಾಪರಿಕರಗಳಾಗಿ ತಯಾರಾಗುವ ಕಲೆಯ ಕುಲುಮೆಯೇ ಅವರಾಗಿದ್ದರು. ಕಾಡಿಗೆ ಹೋಗಿ ಅದೆಂತದೋ ಕಡ್ಡಿಯಂತಹ ಬಳ್ಳಿ ಎಳಕೊಂಡು ಬರುತ್ತಿದ್ದಳು. ಅದರ ಸಿಪ್ಪೆ ತೆಗೆದು ಹೂ ಬುಟ್ಟಿ,ಅನ್ನ ಬಸಿಯುವ ತಟ್ಟೆ, […]

Back To Top