Day: January 8, 2021

ಬಿಳಿ ಸಾಹೇಬನ ಭಾರತ

ಪುಸ್ತಕ ಸಂಗಾತಿ ಬಿಳಿ ಸಾಹೇಬನ ಭಾರತ ಪುಸ್ತಕ: ಬಿಳಿ ಸಾಹೇಬನ ಭಾರತಲೇಖಕರು: ಜಗದೀಶ್ ಕೊಪ್ಪಪ್ರಕಾಶನ: ಮನೋಹರ ಗ್ರಂಥಮಾಲೆ ‌ಬೆಲೆ: 90 ರೂಲಭ್ಯತೆ : ಸಂಗಾತ ಪುಸ್ತಕ, ಧಾರವಾಡ ಜಿಮ್ ಕಾರ್ಬೆಟ್ ಅವರ ಪುಸ್ತಕಗಳು ಎಷ್ಟು ಓದಿದರು ಮುಗಿಯದ ಕುತೂಹಲ ಭರಿತ ಪುಸ್ತಕಗಳು .ಈ ಪುಸ್ತಕ ಕಾರ್ಬೆಟ್ ಅವರ ಜೀವನದ ಮತ್ತಷ್ಟು ವಿಶೇಷ ಸಂಗತಿಗಳನ್ನು ಓದುಗರಿಗೆ ಪರಿಚಯಿಸುತ್ತವೆ . ಇದು ಶಿಕಾರಿ ,ಕಾಡಿನ ಅನುಭವದ ಹೊತ್ತಿಗೆ ಅಲ್ಲ ಪುಸ್ತಕ ಅವರ ವೈಯಕ್ತಿಕ ಬದುಕಿನ ಅನುರೂಪ ಮಾಹಿತಿ ನೀಡುತ್ತದೆ . […]

ಗಜಲ್

ಗಜಲ್ ಸರೋಜಾ ಶ್ರೀಕಾಂತ್ ಸುರಿದ ಬೆಳದಿಂಗಳಿಗೆ ಇರುಳೆಲ್ಲ ಮಾಯವಾಗಿದೆ ಕೇಳು ಸಖಬಳಿಗೆ ಕರೆವ ಸನಿಹಕ್ಕೂ ತುಸು ನಾಚಿಕೆ ಕೇಳು ಸಖ ರಂಗೇರಿದ ಕೆನ್ನೆಗೆ ಕಾರಣವೇ ನಿನ್ನಾಗಮನಒಲವರಿತ ಮುಂಗುರುಳಿಗೆ ಸ್ಪರ್ಶದ ಸಡಗರ ಕೇಳು ಸಖ ಸದ್ದಿಲ್ಲದ ಮೌನದೊಳಗೂ ನೂರೊಂದು ಮಾತುಗಳಿವೆಕಿವಿಗಪ್ಪಳಿಸುತ್ತ ಚಿತ್ತವನ್ನೆಲ್ಲ ಅಪಹರಿಸುತ್ತಿವೆ ಕೇಳು ಸಖ ಸೋತೆನೆನ್ನುವ ಭಾವಕ್ಕೂ ನವಿರಾದ ಮಂದಹಾಸಗೆಲುವಿನ ನಗೆ ನೀ ಬೀರುವಾಗ ಸೊಗಸಿದೆ ಕೇಳು ಸಖ ನೇಸರ ಬರುವ ಮುನ್ನವೇ ಸಂಭ್ರಮಿಸಲಿ ಮತ್ತೊಂದು ಸಲ‘ಸರೋಜ’ಳ ಅಂತರಂಗ ಪ್ರತಿಧ್ವನಿಸುತ್ತಿದೆ ಕೇಳು ಸಖ ***********************************

ಮಾಯಾವಿ 2020

ಕವಿತೆ ಮಾಯಾವಿ 2020 ರಜಿಯಾ ಕೆ ಭಾವಿಕಟ್ಟಿ ಅಳಿದು ಉಳಿದದ್ದು ಎಲ್ಲವೂನಿಗೂಢತೆಯ ಸಾರವನ್ನು ಹೊತ್ತು ತಂದು ತೇಲುವ ದೋಣಿಯಲ್ಲಿ ಜಲದ ಸುಳಿಯೇ ಇಲ್ಲದೆ ಮುಳುಗಿ ಸತ್ತಂತೆ ಭಾಸವಾಗಿತ್ತು ಅಂಧನಿಗೂ ಕುರಡನೆಂಬ ಹಣೆಪಟ್ಟಿ ಮೊದಲೇ ಇದ್ದರು ಹೊಸತರಹದ ಮುಖವಾಡದನೇತ್ರಗಳಿಗೆ ಬಣ್ಣಗಳ ಲೇಪಿಸಲಾಗಿತ್ತು ಕಾಣದಾ ಜೀವಯು ಎಂಬ ಸುಳ್ಳುಗಳ ಸೋಗಿಗೆ ಕಾಲವೇನಿಂತು ಮುನ್ನುಡಿ ಬರೆದಿತ್ತುಅದಕೆ ಸತ್ಯವೆಂಬಂತೆ ಸಮಯಸಾತು ನೀಡಿ ಗರ್ವಪಟ್ಟಿತ್ತು. ಬಿತ್ತಿದವನು ಬರೀಗೈಲಿ ಬೆತ್ತಲಾಗಿ ನಿಂತು ಪರರ ಪಾಲಿಗೆಹುಚ್ಚನಂತೆ ಕಂಡು ಬದುಕುವ ಪಾಡು ಬಂದು ನಿಂತಿತ್ತು. ಗುಡಿ ಗುಂಡಾರ ಮಸೀದಿಗಳನದೇವರಿಗೂ […]

ಅಂಕಣ ಬರಹ ಶಾಲಾರಂಗದೊಳಗೊಂದು ಕೋಲಾಟ ಠಣ್…ಠಣ್… ಠಣ್.. ಗಂಟೆಯ ಸದ್ದು ಒಂಭತ್ತು ಸಾರಿ  ಕೇಳಿಸಿತಾ! ಹಾಂ!! ಅದು ನಮ್ಮ ಶಾಲೆಯ ಬೆಳಗಿನ ಗಂಟೆ.   ನನ್ನಜ್ಜಿಯ ಹಣೆಯ ನಡುವಿನ ಕುಂಕುಮದ ಬೊಟ್ಟಿನಂತೆ ನಮ್ಮ ಊರಿನ ಕೇಂದ್ರ ಭಾಗದಲ್ಲಿ ಆಧಾರ ಸ್ತಂಭದಂತೆ ಕೂತಿತ್ತು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಹೌದು ಅದು ನಮ್ಮ ಶಾಲೆ.  ನಮ್ಮ ಹಳ್ಳಿಯ ಶಾಲೆ.  ಬಲಗಾಲಿಟ್ಟು ಒಳಗೆ ಬರಬೇಕು. ಮೊದಲು ಕಾಣಿಸುವುದೇ ಬಿಳೀ ಕಂಬದ ಧ್ವಜಸ್ತಂಭ. ಅದರ ಬುಡದಲ್ಲಿ ಕಟ್ಟೆ . ಅದರ ಹಿಂದೆ, […]

Back To Top