ಆಡುಭಾಷೆಯ ಸವಿ ಗೋದಾನ.
ಪುಸ್ತಕ ಸಂಗಾತಿ ಆಡುಭಾಷೆಯ ಸವಿ ಗೋದಾನ. ಕನ್ನಡ ನುಡಿ’ ಯನ್ನು ಮೂರು ರೀತಿಯಿಂದ ಅಭಿವ್ಯಕ್ತ ಗೊಳಿಸಬಹುದೆಂದು ಗೊತ್ತಿರುವ ಸಂಗತಿ. ಅದು ಶಿಷ್ಟ, ಜಾನಪದ ಮತ್ತು ಆಡು ಭಾಷೆ.ನಾನು,ನೀವೂ ಸೇರಿದಂತೆ ಬರಹಗಾರ,ಬರಹಗಾರ್ತಿಯರು, ಅರಿತೋ ಅರಿಯದೆಯೋ,ಗ್ರಾಂಥಿಕ ಭಾಷೆಗೆ ಮರುಳಾಗಿಬಿಟ್ಟಿದ್ದೇವೆ.ಜನಪದ ಭಾಷೆಗೆ ಹತ್ತಿರ ವಾಗಿದ್ದ,ಅಡುಕನ್ನಡವನ್ನು ಜೀವಂತವಾಗಿಟ್ಟವರು ನಮ್ಮ ಗ್ರಾಮೀಣ ಜನಾಂಗ.ಅವರಿಗೆ ಶಿಷ್ಟ ಜನಗಳು ಮಾಡುತ್ತಿರುವ ಅನ್ಯಾಯ ಇದು ಎಂದೇ ಹೇಳಬಹುದು ಎಂದು ನಾನು ಇದೇ ಅಂಕಣದಲ್ಲಿ ಈ ಮೊದಲೇ ಹೇಳಿದಂತೆ ನೆನಪು. ನಮ್ಮ ಓದು ,ಕತೆ,ವಸ್ತು,ಪಾತ್ರ,ವಾಕ್ಯ ರಚನೆ ಗಳ ಜೊತೆಗೆ ಭಾಷಾ […]
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-9 ಆತ್ಮಾನುಸಂಧಾನ ಪಂಪನ ಬನವಾಸಿಗೆ ಪಯಣ ನಾನು ಎರಡನೆ ಇಯತ್ತೆ ಮುಗಿಸುವಾಗ ನಮ್ಮ ತಂದೆಯವರಿಗೆ ಶಿರ್ಶಿ ತಾಲೂಕಿನ ಬನವಾಸಿಗೆ ವರ್ಗವಾಯಿತು. ನಮ್ಮ ಕುಟುಂಬದಲ್ಲಿ ಮಾತ್ರವಲ್ಲ, ನಮ್ಮ ಇಡಿಯ ಕೇರಿಯೇ ದಿಗಿಲುಗೊಂಡಿತು. ಅಂದಿನ ದಿನಮಾನಗಳಲ್ಲಿ ನಮಗೆಲ್ಲ ಬನವಾಸಿಯೆಂಬುದು ವಿದೇಶ ಪ್ರವಾಸದಷ್ಟೇ ದೂರದ ಅನುಭವವನ್ನುಂಟು ಮಾಡುವಂತಿತ್ತು. ಭಯಾನಕವಾದ ಪರ್ವತ ಶ್ರೇಣಿಗಳ ಆಚೆಗಿನ ಘಟ್ಟ ಪ್ರದೇಶ ಎಂಬುದು ಒಂದು ಕಾರಣವಾದರೆ, ನಮ್ಮೂರ ಪಕ್ಕದ ಹನೇಹಳ್ಳಿಯಿಂದ ಶಿರ್ಶಿಗೆ ಹೊರಡುವ ಒಂದೇ ಒಂದು ಬಸ್ಸು ನಸುಕಿನಲ್ಲಿ […]
ಇ-ಬುಕ್ ಬಿಡುಗಡೆ
ಇ-ಬುಕ್ ಬಿಡುಗಡೆ ಮೂಚಿಮ್ಮ” ಕಥಾಸಂಕಲನ ಬಿಡುಗಡೆಯ ಕಾರ್ಯಕ್ರಮ ಕನ್ನಡದ ಯುವ ತಲೆಮಾರಿನ ಭರವಸೆಯ ಕಥೆಗಾರರಾಗಿ ಹೊರಹೊಮ್ಮುತ್ತಿರುವ ಡಾ.ಅಜಿತ್ ಹರೀಶಿ ಅವರ “ಮೂಚಿಮ್ಮ” ಕಥಾ ಸಂಕಲನ ಇಬುಕ್, ಆಡಿಯೋ ಬುಕ್ ಹಾಗೂ ಮುದ್ರಿತ ರೂಪದಲ್ಲಿ ಮೈಲ್ಯಾಂಗ್ ಪ್ರಕಾಶನ ಹೊರ ತಂದಿದೆ. ಅದರ ಬಿಡುಗಡೆ ಕಾರ್ಯಕ್ರಮ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀ.ರವೀಂದ್ರ ಭಟ್ಟರು ಕನ್ನಡಕ್ಕೆ ಅಜಿತ್ ಒಬ್ಬ ಸೂಕ್ಷ್ಮ ಬರಹಗಾರರಾಗಿ ದಕ್ಕುತ್ತಿದ್ದಾರೆ. ಅವರ ಕೃತಿಗಳು ಇನ್ನಷ್ಟು ಸಮಾಜಮುಖಿಯಾದ ತಲ್ಲಣಗಳಿಗೆ […]