ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಪುಸ್ತಕ ಸಂಗಾತಿ

ಕಲ್ಲಳ್ಳಿ ಗಜಲ್

ಪುಸ್ತಕ ಸಂಗಾತಿ ಕಲ್ಲಳ್ಳಿ ಗಜಲ್ ಸಂಕಲನದ ಹೆಸರು : ಕಲ್ಲಳ್ಳಿ ಗಜಲ್ ಲೇಖಕರು : ದೊಡ್ಡ ಕಲ್ಲಳ್ಳಿ ನಾರಾಯಣಪ್ಪ ಬೆಲೆ : ೧೨೦/- ದೊಡ್ಡ ಕಲ್ಲಳ್ಳಿ ನಾರಾಯಣಪ್ಪನವರು ವೃತ್ತಿಯಲ್ಲಿ ಪದವೀಧರ ಶಿಕ್ಷಕರಾಗಿದ್ದು, ಪ್ರವೃತ್ತಿಯಾಗಿ ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಪ್ರತಿಭೆ. ಇವರು ಈಗಾಗಲೇ ಉತ್ತತೀಯ ಹಾಡು, ಎದೆಯೊಳಗಿನ ಇಬ್ಬನಿ, ಬೆಂಗಾಡು ಎಂಬ ಮೂರು ಸಂಕಲನಗಳನ್ನು ಹೊರ ತಂದಿದ್ದು ಈ ಕಲ್ಲಳ್ಳಿ ಗಜಲ್ ನಾಲ್ಕನೇ ಸಂಕಲನವಾಗಿದೆ.  ಇವರ ಪ್ರತಿಭೆಯನ್ನು ಗುರುತಿಸಿ ಇವರಿಗೆ ಗೋವಿಂದ ದಾಸ್ ಪ್ರಶಸ್ತಿ, ಬೆಳಕು ಸಾಹಿತ್ಯ ಪ್ರಶಸ್ತಿ, ಕುವೆಂಪು ಅನಿಕೇತನ ಪ್ರಶಸ್ತಿ ಇವರ ಮುಡಿಗೇರಿದೆ. ಸೌಮ್ಯ ಸ್ವಭಾವದ, ಮಗು ಮನದ ದೊನಾ ರವರು ಎಂತಹವರನ್ನು ತನ್ನತ್ತ ಸೆಳೆಯುವ ಸ್ವಾಭಾವದವರಾಗಿದ್ದಾರೆ.  ನಾನು ಗಜಲ್ ಸಾಹಿತ್ಯದಲ್ಲಿ ತೊಡಗಿಸಿಕೊಳ್ಳಲು ಇವರೇ ಪ್ರೇರಣೆ ಎಂದರೆ ತಪ್ಪಾಗಲಾರದು.               ಕಲ್ಲಳ್ಳಿ ಗಜಲ್ ಈ ಸಂಕಲನದ ಹೆಸರು, ಮುಖಪುಟದ ವಿನ್ಯಾಸ ಒಂದು ರೀತಿಯಲ್ಲಿ ವಿಭಿನ್ನವಾಗಿ ಮೂಡಿದ್ದು ಚಿತ್ತಾಕರ್ಷಕ ರೇಖಾ ಚಿತ್ರಗಳು ಅದರೊಳಗೆ ಹುದುಗಿಸಿಕೊಂಡಿರುವ ಜೀವದ ಉಸಿರು,  ನೆಲೆ ಎಲ್ಲರ ಗಮ್ಯವನ್ನು ಬೇರೆ ಲೋಕದತ್ತ ಸೆಳೆಯುತ್ತದೆ. ನಮ್ಮ ಮಾಲೂರಿನ ಸಾಹಿತ್ಯ ಪರಿಚಾರಕರಾಗಿದ್ದ  ನಮ್ಮೆಲ್ಲರ ಹಿರಿಯಣ್ಣನಂತಿದ್ದ ಉದಯೋನ್ಮುಖ ಕವಿಗಳಿಗೆ ನೆಲೆ ನಿಲ್ಲಲು ವೇದಿಕೆ ಕಲ್ಪಿಸಿ ಬೆನ್ನು ತಟ್ಟುತಿದ್ದ  ” ಕುಂಚ ”  ಅಂದರೆ ಕುಂತೂರು ಚಂದ್ರಪ್ಪನವರು ( ಇವರು ಈಗ ಇಲಿಲ್ಲ..!!  ಪ್ರಪಂಚವನ್ನೇ ತಲ್ಲಣಗೊಳಿಸಿ ತನ್ನ ಭಾಹು ತೆಕ್ಕೆಗೆ ತೆಗೆದುಕೊಂಡು ಅಪೋಷಣ ಗೈದ  ಮಹಾ ಮಾರಿ ಕರೋನಾ ಈ ಪುಣ್ಯಾತ್ಮನನ್ನು ತನ್ನ ಉದರದ ಹಸಿವಿಗೆ ಅಪೋಷಣ ಮಾಡಿದ್ದು ದುರ್ದೈವ.  ನಮ್ಮನೆಲ್ಲ ಅಗಲಿ ಅನಾಥರನ್ನಾಗಿಸಿದ್ದು  ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಇನ್ನೂ ಯಾರು ಆ ಸ್ಥಾನ ತುಂಬಲಾರರು.) ಇಂತಹ ವ್ಯಕ್ತಿಗೆ ಈ ಸಂಕಲನ ಅರ್ಪಿಸಿ ತಮ್ಮ ಘನತೆಯನ್ನು ದೊನಾ ಹೆಚ್ಚಿಸಿಕೊಂಡಿದ್ದಾರೆ. ಕೃತಘ್ನರೇ ತುಂಬಿರುವ ಕಲಿಯುಗದಲ್ಲಿ ಕೃತಜ್ಞತೆಯ ಈ ಕರುಣಾಳುವಿನ ಈ ಕಾರ್ಯ ಖುಷಿಕೊಟ್ಟಿತು. ಲೇಖಕರ ಪರಿಚಯ ತುಸು ಹೆಚ್ಚೆನಿಸಿದರೂ ನಾನು ಪರಿಚಯಿಸುವುದು ಸಮಂಜಸವೂ , ಔಚಿತ್ಯ ವೂ ಎಂದು ಭಾವಿಸಿರುವೆ. ಇನ್ನೂ ಸಂಕಲನದ ಸುತ್ತ ಸಮಚಿತ್ತ…             ಅರಬ್ಬೀ, ಪರ್ಷಿಯ ಉರ್ದು ಕಾವ್ಯ  ಪ್ರಕಾರದ ಜನಪ್ರಿಯ ಸಾಹಿತ್ಯ ರೂಪ  ಗಜಲ್. ಗಜಲ್ ತನ್ನ ಪ್ರೇಯಸಿಯೊಡನೆ ಸಂವಾದಿಸುವ , ಲಲ್ಲೆಯೊಡಿಯುವ ಕಾವ್ಯವೆಂದೇ ಹೆಸರುವಾಸಿ . ಹಾಡುಗಬ್ಬವೂ ಹೌದು. ನಾರಾಯಣಪ್ಪನವರ ನುಡಿಯಲ್ಲೇ ಹೇಳುವುದಾದರೆ  ಗಜಲ್, ಎಲ್ಲಾ ರೀತಿಯ ಪ್ರಮಾಣಗಳನ್ನು ಧಿಕ್ಕರಿಸಿ ಗಡಿ ಮಡಿಗಳನ್ನು ಮೀರಿ ಬಹುತ್ವವನ್ನು ಸಾರುವ ಮತ್ತು ಜೀವನ ಪ್ರೀತಿಯನ್ನು ಹೆಚ್ಚಿಸುವ ಒಂದು ಚಿಕಿತ್ಸಕ ಕಾವ್ಯ ಪ್ರಕಾರವಾಗಿದೆ. ನಮ್ಮ ಅಂತರಂಗದಲ್ಲಿ ಒಲವಿನ ಕಿರುದೀಪ ಹಚ್ಚಿಡುವ ಮೂಲಕ ಸಮಚಿತ್ತ ಸಾಧಿಸಲು ನೆರವಾಗುತ್ತದೆ. ತಲ್ಲಣಿಸುವ ಜೀವಕ್ಕೆ  ಸಾಂತ್ವನ ನೀಡುವ ಬೇಲಿಯ ಹೂ !  ಹತ್ತಾರು ಕವಲು ದಾರಿಗಳ ಮುಂದೆ ಗೊಂದಲದ ಗೂಡಾಗಿ ನಿಂತ ಸಾಮಾನ್ಯ ಪಯಣಿಗನ ಪಾಡು.  ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನೋಡುವುದಾದರೆ ನಾನಾ ವೈರುದ್ಯಗಳ ನಡುವೆಯೂ ಅನ್ನದ ಹಾಡು ಹಾಡುತ್ತಿರುವ ನೇಗಿಲ ಯೋಗಿಯ ಬೆವರು. ಇವೆಲ್ಲವೂ ಗಜಲ್ ನ ಬೇರುಗಳಾಗಬೇಕು.‌  ಇತ್ತೀಚೆಗೆ ಗಜಲ್ ಕಾವ್ಯ ಪ್ರಕಾರ ಕನ್ನಡ ಸಾಹಿತ್ಯಕ್ಕೂ ಲಗ್ಗೆಯಿಟ್ಟು ತನ್ನ ಅರ್ಥ ವಿಸ್ತಾರ , ಬಹುಮುಖ ಆಯಾಮಗಳು ಕಾವ್ಯಸಕ್ತರನ್ನು  ತನ್ನತ್ತ ಸೆಳೆದು ಹೆಚ್ಚೆಚ್ಚು ತೊಡಗಿಸಿಕೊಳ್ಳುವಂತೆ ಜನಪ್ರಿಯತೆ ಪಡೆಯುತ್ತಿರುವ ಕಾವ್ಯ. ಕೇವಲ ಉತ್ತರ ಕರ್ನಾಟಕದ ಕಪ್ಪುನೆಲದ ಕವಿಗಳೇ ಹೆಚ್ಚಾಗಿ ದುಡಿಸಿಕೊಳ್ಳುತ್ತಿದ್ದ ಈ ಗಜಲ್ ಇತ್ತೀಚೆಗೆ ಕರ್ನಾಟಕದ ಮೂಲೆ ಮೂಲೆಗಳಲ್ಲಿ  ಅಲ್ಲೊಬ್ಬ ಇಲ್ಲೊಬ್ಬ ಗಜಲ್ ಕಾರರನ್ನು ಹುಟ್ಟು ಹಾಕಿ ನದಿ – ನಾಲೆಗಳಲ್ಲಿ ಹರಿಯುವಂತೆ ಕನ್ನಡದ ಗಜಲ್ ಕಂಪು ನಾಡಿನುದ್ದಗಲಕ್ಕೂ ಪಸರಿಸುತ್ತಿರುವುದು ಸಂತೋಷದ ಸಂಗತಿ. ನಾಡಿನ ಹೆಸರಾಂತ ಗಜಲ್ ಕವಿಗಳಾದ ಅಲ್ಲಾ ಗಿರಿರಾಜ್ ( ಈ ಸಂಕಲನದ ಮುನ್ನುಡಿಕಾರರು) ಗಿರೀಶ್ ಜಕಾಪುರೆ,  ಪ್ರಭಾವತಿ ದೇಸಾಯಿ, ಅರುಣಾ ನರೇಂದ್ರ, ಶ್ರೀದೇವಿ ಕೆರೆಮನೆ, ಪ್ರೇಮ ಹೂಗಾರ್, ಹಾಗೂ ಪ್ರಭುದ್ದ ರಾದ ಸುಜಾತ ಲಕ್ಮನೆ  ಶಮಾ ಜಮಾದಾರ್ , ಚಂಪೂ, ನೂರ್ ಅಹ್ಮದ್  ನಾಗನೂರ್ ಮುಂತಾದ ಹಲವಾರು ಕವಿಗಳ ಸಾಲಿನಲ್ಲಿ ನಮ್ಮ ಈ ಕೋಲಾರದ  ಚಿನ್ನ ದೊನಾ ಹೊಳಪು ಕಾಣುತ್ತಿರುವುದು ಹೆಮ್ಮೆಯ ವಿಷಯ.         ಹುಟ್ಟು ಬಡತನ, ಶೋಷಣೆಯ ಬೇಗುದಿಯಲ್ಲಿ ಬೆಂದ ನಾರಾಯಣಪ್ಪನವರು  ಸಮಾಜದಲ್ಲಿನ ಅಸಮಾನತೆ, ಅಂಧಾನುಕರಣೆ , ಜಾತೀಯತೆ, ಧರ್ಮ ರಾಜಕಾರಣ , ಬಡತನ, ಮುಂತಾದ ವಿಷಯಗಳ ಕಡೆ ತಮ್ಮ ಮೃದು, ಮಧುರ ಬಂಡಾಯದ ಬರಹಗಳಿಂದಲೇ  ತಿದ್ದುವ ಬದಲಾವಣೆ ಬಯಸುವ  ಮನಸ್ಸುಳ್ಳವರಾಗಿದ್ದಾರೆ. ಅಷ್ಟೇ ಅಲ್ಲದೆ ಪ್ರೀತಿ ಪ್ರೇಮದ ಸೆಳೆತದ ಅತ್ತರಿನ ನೆಶೆಯಂತೆ ಮಧು ಬಟ್ಟಲೊಳಗೆ ಪ್ರೇಮಾಂಕುರದ ಜೀವ ದ್ರವ್ಯ ತುಂಬಿ ಈ ಸಂಕಲನದ ಮೂಲಕ ಉಣ ಬಡಿಸಲು  ಶಕ್ತರಾಗಿದ್ದಾರೆ.  ಈ ಸಂಕಲನವು ೪೦ ಗಜಲ್ ಗಳನ್ನು ಹೊಂದಿದೆ. *ನನ್ನ ಎದೆಗೆ ಬಿದ್ದ ನಾಣಿಯ ಗಜಲ್ ನ ಕೆಲವು ಸಾಲುಗಳು ಇಲ್ಲಿ ಉಲ್ಲೇಖಿಸುತ್ತಿದ್ದೇನೆ. ನನ್ನ ಕೇರಿ ಗಾಯಗೊಂಡವರ ಶಾಶ್ವತ ದವಾಖಾನೆ ಒಂದೇ ಒಂದು ಗಾಯಕ್ಕಾದರೂ ನಾನು ಔಷಧಿಯಾಗಬೇಕು. ಗ..೨ ಇಲ್ಲಿ ನೋಡಿ ಬಂಡಾಯದ ಬಂಡ ! ಈ ಒಂದು ದ್ವಿಪದಿ ಇವರ ಹುಟ್ಟು ಶೋಷಣೆಯ ಅನಾವರಣ ಮಾಡಿಸುತ್ತದೆ.  ಇವರದಷ್ಟೇ ಅಲ್ಲ ; ಸಮಾಜದ ಕೆಳಸ್ತರದ ಪ್ರತಿಯೊಬ್ಬರ ನೋವು ಇಲ್ಲಿದೆ.  ಜಾತಿ , ಸಮುದಾಯದ ಹೆಸರಲ್ಲಿ ಸಾಮಾನ್ಯರ ಮುಂದೆ ಅಧಿಕಾರಕ್ಕಾಗಿ ಮಂಡಿಯುರುವ ಮಂದಿ ಮುಂದೆ ಸಾಮ್ರಾಜ್ಯ ಆಳುವರು . ಆದರೆ ಕತ್ತಲಾಗಿದ್ದ  ಕೇರಿಯ ಗೂಡಿನ  ಜನರ ನೋವು ಇಂಗುವುದೇ ಇಲ್ಲ.. !! ಎಂಬುದನ್ನು ಮಾರ್ಮಿಕವಾಗಿ ಹೇಳಿದ್ದಾರೆ. ಹೃದಯಗಳಿಲ್ಲದ ಕಣಿವೆಯಲ್ಲಿ ಒಂದೇ ಸಮನೆ ಕಿರುಚುತಿದ್ದಾಳೆ ಬಾಯಿಗೆ ತುರುಕಿದ ಬಟ್ಟೆಯ ಮೇಲೆ ಕಸೂತಿಯ ಹಾಕುತ್ತಿದ್ದಾಳೆ .  ಗ…೫ ಬಯಲ  ಎದೆಯ ತುಂಬಾ  ಬೆಳದಿಂಗಳೆಂಬ ಹಾಲು ಒಸರುವ ಹೊತ್ತಿನಲ್ಲಿ ಯಾರೋ ಇಲ್ಲಿ ಸತ್ತ ಹಸುಳೆಯನ್ನು ಬಟ್ಟೆಯಲ್ಲಿ ಸುತ್ತಿ ಎಸೆದು ಹೋಗಿದ್ದಾರೆ.. ಗ..೧೬. ಎಷ್ಟು ದುರಂತ ಅಲ್ವಾ ?  ಅವಿದ್ಯಾವಂತರಿಗಿಂತಲೂ ವಿದ್ಯಾವಂತ ನಮ್ಮ ಸಮಾಜ.. ಮನುಷ್ಯತ್ವದ ಬಗ್ಗೆ ಮಾತಾನಾಡುವ ನಾವು ಸಮಾಜದಲ್ಲಿ ನೆಲೆಯೂರಿ ನೆಡೆಯುತ್ತಿರುವ ಸ್ತ್ರೀ ಶೋಷಣೆ  (ಹೆಣ್ಣು ಶಿಶು ಹತ್ಯೆ , ಅತ್ಯಾಚಾರ,  ದೌರ್ಜನ್ಯ ) ದ ವಿರುದ್ಧ ಮೌನವಹಿಸಿರುವುದರ  ವ್ಯಂಗ್ಯ ವಾಡಿದ್ದಾರೆ. ನೆಲ ತನ್ನ ತಪ್ಪುಗಳನ್ನು ತಿದ್ದಿಕೊಳ್ಳಲು ಕವಿಗಳನ್ನು ನೇಮಿಸಿದೆಯಂತೆ ಕಲ್ಲಳ್ಳಿ ವಿಪರ್ಯಾಸ ಅಲ್ವಾ ಈಗೀಗ ಕವಿತ್ವವು ಕೀರ್ತೀಗಾಗಿ ಮಾರಲ್ಪಡುತ್ತಿದೆ. ಗ…೨೧ ನೋಯುವಷ್ಟು ನಿಂದಿಸಿದವರು ನೊಣ ಕೂರದಂತೆ ನೋಡಿಕೊಳ್ಳುತ್ತಾರೆ ನನ್ನ ಹೆಣದ ಮೇಲೆ ಮತ್ತೆ ಅತ್ತರು ಚೆಲ್ಲುತ್ತಾರೆ ನೀನು ಸುಮ್ಮನೆ ನಗಬೇಕು… ಗ.೩೬ ಈ  ಎರಡು ಗಜಲ್ ನ ಪ್ರತಿ ಶೇರ್ ಗಳು ಮತ್ತೆ ಮತ್ತೆ ಓದಿಸಿಕೊಂಡು ಹೋಗುತ್ತೆ.  ಸಮಾಜದಲ್ಲಿನ ಜನರ ವಾಸ್ತವಿಕತೆಯ ಮನಸ್ಥಿತಿ, ಗೋಮುಖ ವ್ಯಾಘ್ರತೆಯ ಕರಾಳ ರೂಪವನ್ನು ಸಮಯ ಸಾಧಕತನದ ಸಾಚಾತನವನ್ನೂ ! ಕವಿ ವಿಡಂಬನಾತ್ಮಕ ರೂಪಕಗಳಲ್ಲಿ ಚಿತ್ರಿಸಿ ಓದಗನ್ನು  ಅಲ್ಲೇ ಹಿಡಿದಿಡುವಂತ್ತೆ ಮಾಡಿದ್ದಾರೆ. ಇವಿಷ್ಟು ಕೇವಲ ಉದಾಹರಣೆ ಮಾತ್ರ ಸಂಕಲನದಲ್ಲಿ ಇನ್ನೂ ಹಲವಾರು ಬಗೆಯ ಬಹುಮುಖ ವಸ್ತು , ವಿಷಯಗಳ ಮೇಲೆ ಬೆಳಕು ಚೆಲ್ಲುವ , ಪ್ರತಿರೋದಿಸುವ ಸಂವೇದನಾಶೀಲ ಕೆಲಸ ಮಾಡಿದ್ದಾರೆ. ಕಲ್ಲಳ್ಳಿಯವರು ಒಬ್ಬ ಪ್ರತಿಭಾನ್ವಿತ , ಗಟ್ಟಿ ಗಜಲ್ ಕಾರರು . ಇವರ ಕಾವ್ಯದ ಭಾಷೆ, ಸರಳ  ಸಾಮಾನ್ಯನು ಎದೆಗವಿಚಿಕೊಳ್ಳುವಷ್ಟು ಸುಂದರ ಸಶಕ್ತ. ಪ್ರಾಂತೀಯ ಭಾಷೆಯ ಸೊಗಡನ್ನು ಮೈಗೂಡಿಸಿಕೊಂಡಿರುವ  ಈ ಸಂಕಲನದ ಕೆಲವು ಗಜಲ್ ಗಳ ಮಿಸ್ರಗಳು ಸ್ವತಂತ್ರತೆಯ ಲಯ ತಪ್ಪಿದಂತೆ , ಭಾವಾಭಿವ್ಯಕ್ತಿಯ ಏಕತಾನತೆಯನ್ನು ಹೊಂದಿರುವಂತೆ ಕಂಡು ಬಂತು ಇದು ನನ್ನ ಊಹೆಗೂ ನಿಲುಕದ ಮುದ್ರಾ ದೋಷವೋ ಅಥವಾ ತಿದ್ದುವಾಗ ಆದ ದೋಷವೋ ಇರಬೇಕು ಎಂದೆನಿಸಿತು.  ಓದುಗನಾದ ನನ್ನ ದೃಷ್ಠಿಯಲ್ಲಿ ಭಿನ್ನತೆಯೂ ಇರಬಹುದು.!! ಕವಿ ಭಾವಕ್ಕೆ ದಕ್ಕೆಯಾಗದಿರಲಿ.  ಮುಂದೆ ಇದರತ್ತ ಗಮ್ಯ ನೀಡಲಿ.    ಇವರ ಈ ಸಂಕಲನ ಕನ್ನಡ ಸಾರಸ್ವತ ಲೋಕದಲ್ಲಿ ದಾಪುಗಾಲಿಟ್ಟು  ಕೀರ್ತಿ ಪತಾಕೆಯ ಶಿಖರವೇರಲಿ. ಇನ್ನಷ್ಟು ಮತ್ತಷ್ಟು ಕೃತಿಗಳು ಇವರಿಂದ ಹೊರ ಬರಲಿ ಎಂದು  ಪ್ರೀತಿಯಿಂದ ಶುಭ ಹಾರೈಸುತ್ತೇನೆ. ********************************************* ಅಶೋಕ ಬಾಬು ಟೇಕಲ್.

ಕಲ್ಲಳ್ಳಿ ಗಜಲ್ Read Post »

ಕಾವ್ಯಯಾನ

ಮುನ್ನುಡಿ ಬರೆಯುವೆ

ಕವಿತೆ ಮುನ್ನುಡಿ ಬರೆಯುವೆ ನಾಗರಾಜ್ ಹರಪನಹಳ್ಳಿ ಸೂರ್ಯ ದಿಕ್ಕು ಬದಲಿಸುತ್ತಾನೆಂತೆನಾನು ? ಪ್ರಕೃತಿ ಮೈಮುರಿದು ಮಗ್ಗಲು ಬದಲಿಸುತ್ತಿದೆನಾನು?ನಾನೇನು ಮಾಡಲಿ ?? ಆಧುನಿಕ ಕೌಶಿಕ, ಮುಖವಾಡದ ರಾಮ,ಹೊಸ ನಮೂನಿ ಪಂಜರದೊಳಗೆ ನನ್ನ ಬಂಧಿಸಿರುವಾಗನಾನೇಗೆ ಪಥ ಬದಲಿಸಲಿ ? ಸೂರ್ಯನೇ ನಿನ್ನ ಬೆಳಕುನನಗೆ ಬೆಳಕಾಗಲಿಲ್ಲನದಿಯೇ ನಿನ್ನ ಸ್ವಾತಂತ್ರ್ಯ ನನ್ನದಾಗಲಿಲ್ಲ ಸುಳಿದು ಬೀಸುವ ಗಾಳಿಯೇನಿನ್ನ ಮೈ ನನ್ನ ದಾಗಲಿಲ್ಲನದಿಯೇ ನಿನ್ನ ಕಾಲುಗಳುನನ್ನವಾಗಲಿಲ್ಲ ಆಗ್ನಿಯೇ ನಿನ್ನ ನಾಲಿಗೆಯುನನ್ನದಾಗಲಿಲ್ಲಪ್ರಕೃತಿಯೇ ನಿನ್ನಂತೆ ನಾನುಬದುಕಿ ಬಾಳಲಾಗಲಿಲ್ಲ ಕೊನೆಯ ಪಕ್ಷ ಮರದಂತೆಮೌನಿಯಾಗಲು ಬಿಡಲಿಲ್ಲಚಲಿಸುವ ಚಲನೆಗೂಬಂದ ಬಂಧನ ಬದುಕೇ ಬಂಧನವಾಗಿರಲುನದಿ, ಅಗ್ನಿ, ಗಾಳಿ, ಪ್ರಕೃತಿಯ ಎದುರು ಬೇಡಿಕೊಳ್ಳುವುದಷ್ಟೇ ಉಳಿದದ್ದು …ಹೇಳು ಸೂರ್ಯ ನಿನ್ನಂತೆ ಪಥ ಬದಲಿಸಲಿ ಯಾವಾಗ? ಹರಿವ ನದಿಯೇ ನಿನ್ನಂತೆಸ್ವಚ್ಚಂದವಾಗಿ ಹರಿಯಲಿ ಯಾವಾಗ? ಸುಳಿವ ಗಾಳಿಯೇ ಯಾವಾಗನಿನ್ನಂತೆ ಇತರರಿಗೆ ಕಿವಿಯಾಗಲಿ? ಹೇಳು ಬೆಳಕಿನ ಬೆಳಕೆಕತ್ತಲಿಗೆ ಯಾವಾಗ ದನಿಯಾಗಲಿ? ಪಥಬದಲಿಸಲು ಮನಸ್ಸಿತ್ತುಬಲವೂ ಇತ್ತುಬಂಧನದ ಬೇಲಿಯ ದಾಟಲುಬೇಕಾದ ಹಠ, ಛಲವಕಸಿದುಕೊಳ್ಳಲಾಗಿತ್ತು ; ವ್ಯವಸ್ಥೆಯಚಕ್ರವ್ಯೂಹದಲ್ಲಿ ಸಿಲುಕಿಸಲಾಗಿತ್ತು ;ನದಿಯಾಗಲು, ಗಾಳಿಯಾಗಲೂಕೊನೆಯ ಪಕ್ಷ ಬೆಂಕಿಯಾಗಲೂ ಬಿಡಲಿಲ್ಲ ನನ್ನ ದಾರಿಯೇ ವಿಷಮವಾದೊಡೆಹೇಗೆ ಬದಲಿಸಲಿ ಪಥವ ಸೂರ್ಯದೇವಾ ? ಆದರೂ ….ಕರುಣೆಯ ಆಶಾಕಿರಣ ತಬ್ಬುವ ಆಶಾವಾದ ಚಿಗುರೊಡೆದಿದೆ ನನ್ನೆದೆಯಲಿ *********************************************

ಮುನ್ನುಡಿ ಬರೆಯುವೆ Read Post »

ಕಾವ್ಯಯಾನ, ಗಝಲ್

ಕಾಫಿಯಾನ ಗಜಲ್

ಕಾಫಿಯಾನ ಗಜಲ್ ಅಮೃತ ಎಂ ಡಿ ಅಪ್ಯಾಯಮಾನ ಒಲವ ಹಂಚುವ ಸರದಿ ನನ್ನದುಅಭೂತಪೂರ್ವ ಸಾನಿಧ್ಯ ನೀಡುವ ಗುಣ ನಿನ್ನದು ತುಸು ತುಂಟಾಟವ ಮರೆಮಾಚು ಲಜ್ಜೆ ಆವರಿಸುತ್ತದೆನಡುವಿನ ಒನಪಿನಲ್ಲಿ ಕಾಡಿಸುವುದ ಯಾರು ಕಲಿಸಿದ್ದು.? ಅಧರದಲ್ಲಿ ಏನು ಮಧು ಬಟ್ಟಲು ಅಡಗಿ ಕುಳಿತಿದ್ಯ..?ಚುಂಬಿಸುವ ಪರಿಗೆ ಮೊಗವೆಲ್ಲ ಕೆಂಪೇರಿ ನಲಿಯುವುದು ಶರಾಬಿನ ರಸವ ಹೀರಿದಂತೆ ಒಷ್ಠದಲ್ಲಿಯೂ ಇರುವುದ..?ಪಾಪ ಮೊಗ್ಗಿನಂತೆ ಮೃದು ಆಕೆ, ಸೊರಗಿ ಬಿಟ್ಟಾದು. ಅಮ್ಮು ಈ ಹೈದನ್ಯಾಕೋ ಬಿಡುಗಡೆ ನೀಡುವಂತಿಲ್ಲಮನವು ಅವನ ಆಲಿಂಗನದಲ್ಲಿ ನಕ್ಕು ಕುಣಿಯುವುದು.. ****************************************************

ಕಾಫಿಯಾನ ಗಜಲ್ Read Post »

ಅಂಕಣ ಸಂಗಾತಿ, ಮರಣವೇ ಮಹಾನವಮಿ

ಅಂಕಣ ಬರಹ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಹಂಸಪತಿ ಗರುಡಪತಿ ವೃಷಭಪತಿ ರ‍್ವಜೀವಾಧಿಪತಿ ದೇವರಾಯ ಮಹಾರಾಯನ ಅರಸುತನ ಹೊಸತು ಓಲಗಕ್ಕೆ ಬಾರ; ಸಿಂಹಾಸನದಲ್ಲಿ ಕುಳ್ಳಿರ; ಸ್ತ್ರೀಲಂಪಟನಾಗಿ ಅಂತಃಪುರ ಬಿಟ್ಟು ಹೊರವಡ; ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ. ಗುರುವೆಂಬ ತಳವಾರನಾಜ್ಞೆ ಕೆಟ್ಟಿತ್ತು. ತರೆದ ಬಾಗಿಲ ಮುಚ್ಚುವರಿಲ್ಲ; ಮುಚ್ಚಿದ ಬಾಗಿಲ ತೆರೆವರಿಲ್ಲ; ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು ಭಕ್ತರೆಂಬುವವರಿನ್ನು ಬದುಕಲೆಬಾರದು ೧ ಅಗ್ಘವಣಿಯ ಹಂಪಯ್ಯ ವಚನ ಚಳುವಳಿಯ ಕೊನೆಯ ಹಂತದಲ್ಲಿ ಬಂದವನು. ವಿಜಯನಗರದ ದೇವರಾಯ (ಕ್ರಿ.ಶ. ೧೨೮೬-೧೩೨೮) ನೆಂಬ ಅರಸನ ಕಾಲದಲ್ಲಿ ಇದ್ದವನೆಂದು, ರಾಘವಾಂಕ ಕವಿಯು ತನ್ನ ಹರಿಶ್ಚಂದ್ರ ಚಾರಿತ್ರ‍್ಯವನ್ನು ಈ ರಾಜನ ಆಸ್ಥಾನದಲ್ಲಿ ಓದಿದ್ದೆಂದೂ ತಿಳಿದುಬರುತ್ತದೆ ಎಂದು ಡಿ. ಎಲ್. ನರಸಿಂಹಾಚರ‍್ಯರು ಹೇಳಿದ್ದಾರೆ.೨ ಪ್ರಕೃತ ವಚನಕ್ಕೆ ಪಾಠಾಂತರವೂ ಇದ್ದು ಡಿ ಎಲ್ ಎನ್ ಶಕಟರೇಫೆಯನ್ನು ಎರಡು ಕಡೆ ಬಳಸಿದ್ದರೆ, ಎಂ. ಎಂ. ಕಲಬರ‍್ಗಿಯವರು ಸಾಮಾನ್ಯರಿಗಾಗಿ ಸಂಪಾದನೆ ಮಾಡುತ್ತಿರುವ ಕಾರಣದಿಂದ ರೇಫೆಯನ್ನು ಉಳಿಸಿಕೊಂಡು, ಶಕಟರೇಫೆಯನ್ನು ತೆಗೆದು ಹಾಕಲಾಗಿದೆ ಎಂದು ಸಂಪಾದಕೀಯದಲ್ಲಿ ಹೇಳಿದ್ದಾರೆ. ಜನಪ್ರಿಯ ಪ್ರತಿಯದನ್ನೇ ಈ ಲೇಖನಕ್ಕೆ ಬಳಸಿಕೊಳ್ಳಲಾಗಿದೆ. ಕುಂತಳದೇಶದಲ್ಲಿನ ಶಿವಭಕ್ತನಾದ ಹಂಪಯ್ಯನು, ಹದಿನಾರು ದಿಕ್ಕಿಗೂ ಹೋಗಿ ಪತ್ರಪುಷ್ಪಗಳನ್ನು ತಂದು ಶಿವನಿರ‍್ಪಿಸುವ ನಿಯಮವನ್ನು ಪಾಲಿಸುತ್ತಿದ್ದ. ಅದಲ್ಲದೆ ಶೀಲವಂತರಿಗೆ ಚಿಲುಮೆಯ ಅಗ್ಘವಣಿಯನ್ನು ತಂದುಕೊಡುವ ಕಾಯಕವನ್ನು ನಡೆಸುತ್ತಿದ್ದನೆಂದು ಇವನ ಶಿವಭಕ್ತಿಯ ಬಗೆಗೆ ಶಾಂತಲಿಂಗ ದೇಶಿಕನು ತನ್ನ ಭೈರವೇಶ್ವರ ಕಥಾಸೂತ್ರ ರತ್ನಾಕರ ಕೃತಿಯಲ್ಲಿ ತಿಳಿಸಿದ್ದಾನೆ.೩ ಅಗ್ಘವಣಿ ಹಂಪಯ್ಯನ ವಚನಗಳ ಅಂಕಿತ ‘ಹಂಪೆಯ ವಿರುಪಯ್ಯ’ ನೆಂದು ಎಲ್ಲ ವಿದ್ವಾಂಸರೂ ಹೇಳಿದ್ದಾರೆ. ಅವನ ನಾಲ್ಕು ವಚನಗಳು ಇದುವರೆವಿಗೂ ದೊರೆತಿವೆ.೪ ಡಾ. ಆರ್. ಚಲಪತಿಯವರು ‘ಪಂಚಾಕ್ಷರಿ, ಗುರು ಪಂಚಾಕ್ಷರಿ’ ಎಂಬೆರಡು ಹೊಸ ಅಂಕಿತಗಳನ್ನೂ ತಮ್ಮ ಕೃತಿಯಲ್ಲಿ ಅಗ್ಘವಣಿಯ ಹಂಪಯ್ಯನದೆಂದು ಸೂಚಿಸಿದ್ದಾರೆ.೫ ಶಿವಶರಣರ ವಚನ ಚಳುವಳಿಯಿಂದ ಗಾಢವಾಗಿ ಪ್ರಭಾವಿತನಾಗಿದ್ದ ಅಗ್ಘವಣಿಯ ಹಂಪಯ್ಯ, ಕಲ್ಯಾಣಕ್ರಾಂತಿಯ ನಂತರ ಪಲ್ಲಟವಾದ ಒಟ್ಟೂ ಚಳುವಳಿಯ ಉದ್ದೇಶ, ಅಧೋಗತಿಗೆ ಇಳಿದ ಸಾಮಾಜದ ಸ್ಥಿತಿಗತಿ ಮತ್ತು ರಾಜಪ್ರಭುತ್ವದ ನಡೆ ನುಡಿಗಳನ್ನು ತನ್ನ ವಚನದಲ್ಲಿ ಖೇದ, ಸಿಟ್ಟು ಮತ್ತು ವ್ಯಂಗ್ಯದಲ್ಲಿ ಹೊರಹಾಕಿದ್ದಾನೆ. ಅಗ್ಘವಣಿಯ ಹಂಪಯ್ಯನ ವಚನದ ‘ದೇವರಾಯ ಮಹಾರಾಯನ ಅರಸುತನ ಹೊಸತು’ ಸಾಲಿನ ಓದಿನಿಂದ ಅವನ ಕಾಲದ ಬಗೆಗೆ ಕೆಲವು ಅನುಮಾನಗಳು ಮೂಡುತ್ತವೆ. ಡಿ. ಎಲ್. ನರಸಿಂಹಾಚರ‍್ಯರು ವಚನಕಾರರ ನಂತರದವನು ಎಂದೂ, ಅವನ ಕಾಲವನ್ನು ಕ್ರಿಶ ೧೩೦೦ ಎಂದು ಹೇಳಿದ್ದಾರೆ.೬ ಕವಿಚರಿತಾಕಾರರು ಮತ್ತು ಇತರರು ಇದೇ ಅಭಿಪ್ರಾಯವನ್ನು ಹೊಂದಿದ್ದಾರೆ.೭ ಹಂಪಯ್ಯ ತನ್ನ ವಚನದಲ್ಲಿ ನೇರವಾಗಿ ಸಂಬೋಧಿಸುವ ‘ದೇವರಾಯ’ ಕರ್ನಾಟಕವನ್ನಾಳಿದ ಪ್ರಖ್ಯಾತ ರಾಜಮನೆತನವಾದ ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿ ಆಳಿದ ನಾಲಕ್ಕು ವಂಶಗಳಾದ ಸಂಗಮ, ಸಾಳುವ,  ತುಳುವ ಮತ್ತು ಅರವೀಡು ವಂಶಗಳಲ್ಲಿನ ಮೊದಲನೆಯ ವಂಶವಾದ ಸಂಗಮ ವಂಶದ ದೊರೆ ೧ ನೇ ದೇವರಾಯ. ಸಂಗಮ ವಂಶದಲ್ಲಿಯೂ ಇಬ್ಬರು ದೇವರಾಯರ ಎಂಬ ಹೆಸರಿನ ರಾಜರು ಬೇರೆ ಬೇರೆ ಕಾಲಘಟ್ಟದಲ್ಲಿ ಆಳ್ವಿಕೆ ಮಾಡಿದ್ದಾರೆ. ೧ ನೇ ದೇವರಾಯ ಸಾ.ಶ ೧೪೦೬ – ೧೪೧೨-೧೩ ವರೆವಿಗೂ, ೨ ನೇ ದೇವರಾಯ ಸಾ.ಶ ೧೪೧೪ ರಿಂದ ೧೪೪೪ ರ ವರೆವಿಗೂ ವಿಜಯನಗರವನ್ನು ಆಳ್ವಿಕೆಯನ್ನು ಮಾಡಿದ್ದಾರೆ.೮ ದೇಸಾಯಿ ಪಾಂಡುರಂಗರಾಯರು ಇದೇ ಶತಮಾನದಲ್ಲಿಯೇ ದೇವರಾಯನ ಕಾಲವನ್ನು ತಿಳಿಸಿದರೂ ಸ್ವಲ್ಪ ಭಿನ್ನವಾದ ಕಾಲವನ್ನು ಕೊಟ್ಟಿದ್ದಾರೆ.೯ ೧ ನೇ ದೇವರಾಯನು ಸಿಂಹಾಸನಾರೂಢನಾದ ಕಾಲವನ್ನು ಸಾ.ಶ ೧೪೦೬ ಎಂದು ಕೊಟ್ಟಿದ್ದಾರೆ.೧೦ ಅಗ್ಘವಣಿಯ ಹಂಪಯ್ಯನ ವಚನವನ್ನು ಸೂಕ್ಷ್ಮವಾಗಿ ಗಮನಿಸಿದರೆ ಮತ್ತು ವಿಜಯನಗರದ ಅರಸರ ಇತಿಹಾಸವನ್ನು  ಅವಲೋಕಿಸಿದರೆ, ಹಂಪಯ್ಯನು ೧ ನೇ ದೇವರಾಯನ ಆಸ್ಥಾನವನ್ನು ನೋಡಿರುವ, ಅವನ ಆಡಳಿತದಿಂದ ಬೇಸರವಾಗಿರು ಸಾಧ್ಯತೆಯೇ ಹೆಚ್ಚೆನಿಸುತ್ತದೆ. ಕವಿಚರಿತಾಕಾರರರು ಮಿ. ರ‍್ಬೌ ರವರು ಹೇಳುವ ದೇವರಾಯ ಇವನೇ ಆಗಿದ್ದಲ್ಲಿ ಇವನ ಕಾಲ ಸಾ.ಶ ೧೨೮೬-೧೩೨೮ ಆಗುತ್ತದೆ ಎಂದು ಕಾಲವನ್ನು ಆವರಣ ಚಿಹ್ನೆಯಲ್ಲಿ ಸೂಚಿಸಿದ್ದಾರೆ ಮತ್ತು ಡಿ ಎಲ್ ನರಸಿಂಗಾಚರ‍್ಯರೂ ಇದೇ ಅಭಿಪ್ರಾಯವನ್ನು ಹೊಂದಿದ್ದಾರೆ.೧೧ ಅದರಂತೆ ಮತ್ತಿನ್ನೊಂದು ದಾರಿಯಲ್ಲಿ ಅವಲೋಕಿಸುವುದಾದರೆ, ವಚನದಲ್ಲಿ ಬರುವ ‘ದೇವರಾಯ’ಎಂಬ ಪದವು ಸಾಂಕೇತಿಕವಾಗಿ ಪುರಾಣಪ್ರತೀಕವಾಗಿ ಬಳಕೆಯಾಗಿದ್ದು ಎಂದಿಟ್ಟುಕೊಂಡರೆ ದೇವತೆಗಳ ರಾಜನಾದ ‘ಇಂದ್ರ’ನ ಬಗೆಗಿನ ರ‍್ಥವನ್ನೂ ಧ್ವನಿಸುತ್ತದೆ. ಆದರೆ ಎರಡನೆಯದನ್ನ ಒಪ್ಪುವುದು ಕಷ್ಟ ಮತ್ತು ವಾಸ್ತವವಾಗಿ ಬದುಕಿದ ವಚನಕಾರರಿಗೆ ಮಾಡಿದ ದ್ರೋಹವಾಗುವ ಸಾಧ್ಯತೆ ಇರುವುದರಿಂದ ಮೊದಲನೆಯದನ್ನೇ  ಒಪ್ಪಬಹುದು. ರಾಜರ ಎದುರಿಗೇ ಅವರ ಮತ್ತವರ ಪ್ರಭುತ್ವದ ಸಮಸ್ಯೆಗಳನ್ನು ಎತ್ತಿ ಮಾತನಾಡಿರುವುದಕ್ಕೆ ವಚನಕಾರರಲ್ಲಿ ಬಹಳಷ್ಟು ಸಾಕ್ಷಿಗಳು ದೊರೆಯುತ್ತವೆ. ಬಸವಾದಿ ಪ್ರಮಥರ ಪ್ರಭಾವದಿಂದ ಕೇವಲ ಪುರಾಣಪ್ರತೀಕವಾಗಿ ಮೇಲಿನ ‘ದೇವರಾಯ’  ಎಂಬುದನ್ನು ಅಗ್ಘವಣಿಯ ಹಂಪಯ್ಯ ಬಳಸಿರಲಾರನು. ಹಂಪಯ್ಯನ ಕಾಲದ ಬಗೆಗೆ ನಿಖರ ಮಾಹಿತಿ ನೀಡದಿದ್ದರೂ ಕವಿಚರಿತಾಕಾರರು ಮತ್ತು ಡಿ ಎಲ್ ನರಸಿಂಹಾಚರ‍್ಯರು ಊಹಿಸಿರುವ ‘ದೇವರಾಯನ ಕಾಲದವನು’ ಎನ್ನುವ ಮಾತನ್ನು ಹಾಗೂ ಸದ್ಯ ವಚನವೇ ಸ್ಪುರಿಸುವ ‘ದೇವರಾಯ ಮಹಾರಾಯನ ಆಸ್ಥಾನ ಹೊಸತು’ ಎನ್ನುವ ಸಾಲಿನ ‘ಆಸ್ಥಾನ ಹೊಸತು’ ಎನ್ನುವ ಪದದ ಮೂಲಕ ೧ ನೇ ದೇವರಾಯನ ಆರಂಭಿಕ ಕಾಲವನ್ನು ಸ್ಪಷ್ಟವಾಗಿ ಈ ವಚನ ಸೂಚಿಸುತ್ತಿದೆ. ಈ ಎಲ್ಲಾ ಕಾರಣಗಳಿಂದ ಮತ್ತು ಪಠ್ಯದ ಬಹುಮುಖ್ಯ ಪದಗಳ ಆಧಾರದ ಮೇಲೆ ಅಗ್ಘವಣಿಯ ಹಂಪಯ್ಯನು ವಿಜಯನಗರ ಸಾಮ್ರಾಜ್ಯವನ್ನು ಆಳಿದ ಸಂಗಮ ವಂಶದ ದೊರೆ ೧ ನೇ ದೇವರಾಯನ ಕಾಲದಲ್ಲಿ ಅಂದರೆ ಸಾ.ಶ ೧೪೦೬ – ೧೪೧೨-೧೩ ರಲ್ಲಿ ಇದ್ದನೆಂದು ಹೇಳಬಹುದು. ಇವನು ೧ ನೇ ದೇವರಾಯನ ನೈತ್ತಿಕ ಅಧಃಪತನವನ್ನು ಗಮನಿಸಿದ್ದನೆಂದು ವಚನದಲ್ಲಿನ ‘ಸ್ತ್ರೀಲಂಪಟನಾಗಿ ಅಂತಃಪುರ ಬಿಟ್ಟು ಹೊರವಡ’ ‘ತರೆದ ಬಾಗಿಲ ಮುಚ್ಚುವರಿಲ್ಲ; ಮುಚ್ಚಿದ ಬಾಗಿಲ ತೆರೆವರಿಲ್ಲ’ ಸಾಲುಗಳಿಂದ ತಿಳಿದು ಬರುತ್ತದೆ. ಇದೇ ವಿಷಯವನ್ನೂ ಇತಿಹಾಸಕಾರ ರಾಬರ್ಟ್ ಸಿವಿಲ್ಲರು ಫರಿಸ್ತಾ ಹೇಳಿದನೆಂದು ತಮ್ಮ ಕೃತಿಯಲ್ಲಿ ರಾಯನು ಹೆಣ್ಣಿಗಾಗಿ ಇಳಿದ ಅಧಃಪತನವನ್ನು ಕುರಿತು ಪ್ರಸ್ತಾಪಮಾಡಿದ್ದಾರೆ.೧೨ ಮೇಲಿನ ಅಭಿಪ್ರಾಯವನ್ನು ಭಾರತೀಯ ಇತಿಹಾಸಕಾರರಾದ ನೀಲಕಂಠ ಶಾಸ್ತ್ರಿಗಳೂ ದಾಖಲಿಸಿದ್ದಾರೆ.೧೩ ರಾಬರ್ಟ್ ಸಿವಿಲ್ಲರು ಫೆರಿಸ್ತಾ ಬರೆದಿರುವುದನ್ನು ತಮ್ಮ ಪುಸ್ತಕದಲ್ಲಿ ದಾಖಲಿಸಿರುವಂತೆ ರಾಯನು ಹುಡುಗಿಯನ್ನು ಪಡೆಯಲೋಸುಗ ನಡೆಸಿದ ಹುಚ್ಚುತನದ ಯಾತ್ರೆಯಲ್ಲಿ ಸಿಕ್ಕಿಹಾಕೊಕೊಂಡ ‘ರೈತ’ ಮನೆತದ ಹುಡುಗಿಯೆಂದು ಹೇಳಿದ್ದರೆ, ನೀಲಕಂಠ ಶಾಸ್ತ್ರಿಗಳು ‘ಚಿನ್ನಗೆಲಸ ಮಾಡುವ ಅಕ್ಕಸಾಲಿಗ’ ನ ಮಗಳೆಂದು ಹೇಳಿದ್ದಾರೆ. ಉಳಿದ ಅಭಿಪ್ರಾಯಗಳಲ್ಲಿ ಸಮಾನತೆಯಿದೆ. ನೈತ್ತಿಕತೆಯನ್ನೇ ಬುನಾದಿಯಾಗಿಟ್ಟು ಸಮಾಜವನ್ನ ಕಟ್ಟುವ ಕರ‍್ಯ ನರ‍್ವಹಿಸಿದ ವಚನಕಾರರ ಮರ‍್ಗವನ್ನು ಅಗ್ಘವಣಿಯ ಹಂಪಯ್ಯ ಮೆಚ್ಚಿದ್ದದ್ದನೆಂದು ಅವನ ವಚನದ ಗುರುವೆಂಬ ತಳವಾರನಾಜ್ಞೆ ಕೆಟ್ಟಿತ್ತು ಸಾಲಿನಿಂದಲೂ, ವಚನಕಾರರ ನಡೆ ನುಡಿಗೆ ವಿರುದ್ಧವಾದದ್ದನ್ನೂ ತನ್ನ ಕಣ್ಣಾರೆ ಕಂಡುದರ ಬಗೆಗೆ ಬೇಸರ, ಹಿಂಸೆಯಲ್ಲಿ ವಚನದ ‘ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು, ಭಕ್ತರೆಂಬುವವರಿನ್ನು ಬದುಕಲೆಬಾರದು’ ಎಂಬ ಮಾತುಗಳು ಬಂದಿವೆ. ಪ್ರಭುತ್ವದ ಮೇಲಿನ ಬೇಸರ, ಸಿಟ್ಟು, ವ್ಯಂಗ್ಯ ಅಭಿವ್ಯಕ್ತಿಯೇ ಪ್ರಸ್ತುತ ವಚನದ ಭಾವಕೇಂದ್ರವಾಗಿದೆ. ವಚನಕಾರರ ನಂತರ ವೈಶ್ಣವಪಂಥ ಬಂದ ನಂತರವು ವಚನಗಳು ರಚನೆಯಾಗುತ್ತಿದ್ದುದಕ್ಕೆ ಪ್ರಸ್ತುತ ವಚನವು ಸಾಕ್ಷಿಯಾಗಿದೆ. ಬದಲಾದ ಪ್ರಭುತ್ವ ಅದರ ನಾಯಕನಾದವನ ವೈಯುಕ್ತಿಕ ತರ‍್ತಿಗೆ ಅನುಗುಣವಾಗಿ ಪಲ್ಲಟವಾಗುವ ಸಾಮಾಜಿಕ ಉದ್ದೇಶ, ಮೌಲ್ಯಗಳ ಪಲ್ಲಟತೆಯ ಬಹುದೊಡ್ಡ ಸ್ಥಿತಿಯನ್ನ ವಾಚ್ಯವಾಗಿಯೇ ವಚನದಲ್ಲಿ ತಿಳಿಸುತ್ತಿದ್ದಾನೆ. ‘ಹಂಸಪತಿ’, ‘ಗರುಡಪತಿ’, ‘ವೃಷಭಪತಿ’ ಎಂದು ವಾಹನದ ಮೇಲೆ ಆರೂಢರಾಗುವ ಬ್ರಹ್ಮ, ವಿಷ್ಣು ಮತ್ತು ಶಿವನನ್ನ ಹೇಳುತ್ತಲೇ-ಪ್ರಭುತ್ವದಲ್ಲಿನ ಸೃಷ್ಟಿ, ಸ್ಥಿತಿ ಮತ್ತು ಲಯವನ್ನ ಹೇಳುತ್ತಿದೆ. ವಚನದ ನಂತರದ ಸಾಲಾದ ‘ರ‍್ವಜೀವಾಧಿಪತಿ’ ಪದವು  ಬಹುದೊಡ್ಡ ವ್ಯಂಗ್ಯವಾಗಿ ರ‍್ವಹಿಸುತ್ತಿದೆ. ಮಾನವ ಜಾತಿಯನ್ನು ಒಂದೆಂದು ಬಗೆದ ವಚನಕಾರರ ಅನಂತರ ಪ್ರಭುತ್ವವು ತನ್ನ ಇರುವಿಕೆಯನ್ನು ರ‍್ಪಡಿಸುತ್ತಿರುವಾಗ ಹಂಪಯ್ಯ ವ್ಯಂಗ್ಯವಾಡುತ್ತಲೇ ಪ್ರಭುತ್ವಕ್ಕೆ ವಿರುದ್ಧವಾಗಿ ತನ್ನ ಅಭಿಪ್ರಾಯವನ್ನು ತಿಳಿಸುತ್ತಿದ್ದಾನೆ. ‘ದೇವರಾಯನ ಆಸ್ಥಾನ ಹೊಸತು’ ಎನ್ನುವಾಗ ಆಗತಾನೆ ಪ್ರಾರಂಭದ ಹಂತದಲ್ಲಿದ್ದ ಸಾಮ್ರಾಜ್ಯವನ್ನ ಅಥವಾ ಸಿಂಹಾಸನಾರೂಢನಾದ ೧ ನೇ ದೇವರಾಯನ ಬಗೆಗೆ ನೇರವಾಗಿಯೆ ಮಾತನಾಡುತ್ತಿದ್ದಾನೆ. ‘ಬಾರ’ ‘ಕುಳ್ಳಿರ’  ಅನ್ನುವ ನಿಧಿಷ್ಟ ಕ್ರಿಯಾಪದಗಳು ಮುಂದಿನ ಸಾಲು ಅತೀವ್ಯಂಗ್ಯವಾಗಿ ಕೆಲಸ ಮಾಡುತ್ತ, ರಾಜನಲ್ಲಿದ್ದ ‘ಸ್ತ್ರೀಲಂಪಟತೆ’ ಯ ಬಗೆಗೆ ನೇರವಾಗಿ ಹೇಳಿ ‘ಅಂತಃಪುರಬಿಟ್ಟು ಹೊರವಡ’ ಎನ್ನುವ ಪದವನ್ನ ಬಳಸಿ ಸ್ಪಷ್ಟವಾಗಿ ಆ ಕಾಲಘಟ್ಟದ ೧ ನೇ ದೇವರಾಯನ ರಾಜನ ಬಗೆಗೆ ಹೇಳುತ್ತಿದ್ದಾನೆ. ರಾಜ್ಯದ ಪ್ರಮುಖ ಆದಾಯದ ಹೊಣೆಯನ್ನೂ ನಿಭಾಯಿಸಲಾರದ ರಾಯನ ಹೀನಸ್ಥಿತಿಯನ್ನ ‘ಕಪ್ಪ ಕಾಣಿಕಯನ್ನೊಪ್ಪಿಸಿಕೊಂಬವರಿಲ್ಲ’ ಎನ್ನುವುದನ್ನ ಹೇಳಿದಾಗಲೇ, ರಾಜ್ಯ ಮತ್ತದರಲ್ಲಿನ ಪ್ರಭುತ್ವ ನೈತ್ತಿಕವಾಗಿ ಮತ್ತು ರ‍್ಥಿಕವಾಗಿ ದಿವಾಳಿತನಕ್ಕೆ ಮುಖಮಾಡಿರುವುದನ್ನ ಕಾಣಿಸುತ್ತಿದ್ದಾನೆ. ನಂತರದ ‘ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು’ ಸಾಲಿನ ಮೂಲಕ ಬಹುಮುಖ್ಯವಾದ ಒಂದು ಅಂಶದ ಬಗೆಗೆ ಗಮನ ಸೆಳೆಯುತ್ತಾನೆ. ತನ್ನ ಹಿಂದಿನ ವಚನ ಚಳುವಳಿಯಲ್ಲಿನ ಗುರುವಿನ ಮಹತ್ವದ ಬಗೆಗೆ, ‘ಅರಿವೇ ಗುರು’ ವಾದ ಸ್ಥಿತಿಯಿಂದ ಕೆಳಗಿಳಿದಿರುವುದರಿಂದಲೇ ಆದ ಬಹುದೊಡ್ಡ ಸಂಚಲನದ ಬಗೆಗೆ ಗಮನವಿದ್ದೇ ‘ಕೆಟ್ಟಿತ್ತು’ ಎನ್ನುವಾಗ ನಿದಿಷ್ಟ ರ‍್ತಮಾನ ಕ್ರಿಯಾಪದಗಳನ್ನ ಬಳಸಿದ್ದಾನೆ. ‘ತೆರೆದ ಬಾಗಿಲ’ ಅನ್ನುವ ಪದ ದೇಹದ ಅರಿಷಡ್ರ‍್ಗಗಳನ್ನ ತಿಳಿಸುತ್ತಿದೆ (ಗಮನಿಸಿ- ದೇಹವೇ ದೇಗುಲ ಅನ್ನುವುದರ ಪ್ರಭಾವವಿದೆ.) ‘ಮುಚ್ಚುವರಿಲ್ಲ’ ಅನ್ನುವ ಪದವೂ ಸಹಾ ನಿದಿಷ್ಟ ಕ್ರಿಯಾ ಪದವಾಗಿದ್ದು ಇದರಲ್ಲಿ ಒಂದು ವ್ಯಥೆಯ ಧ್ವನಿ ಹೊಮ್ಮುತ್ತಿದೆ. ‘ಮುಚ್ಚಿದ ಬಾಗಿಲ’ ಅನ್ನುವುದು ಜ್ಞಾನವನ್ನ, ನೈತ್ತಿಕತೆಯ ಪ್ರಜ್ಞೆಯನ್ನ ಸಂಕೇತಿಸುತ್ತಲೇ ಇಲ್ಲೂ ರ‍್ಧಿಷ್ಟ ಕ್ರಿಯಾಪದವನ್ನ ತಿಳಿಸುತ್ತಲೇ ‘ತೆರೆವರಿಲ್ಲ’ ಅನ್ನುವಾಗ ತನ್ನ ಅಸಹಾಯಕತೆಯನ್ನ ಜೊತೆಗೆ ಪ್ರಭುತ್ವದ ಅಧೋಗತಿಯನ್ನ ತಿಳಿಸುತ್ತಲೇ ಮುಂದಿನ ಕೆಟ್ಟಿರುವ ‘ಅರಸುತನ’ ವನ್ನ ಹೇಳುತ್ತಿದ್ದಾನೆ. ಅದರಲ್ಲಿಯೂ ಆ ಸಾಲಿನ ಬಹುಮುಖ್ಯ ಪದವೂ ‘ಕೆಟ್ಟಿತ್ತು’ ಇಂದಿಗೆ ಓದಿದರೆ ಭೂತಕಾಲ ಕ್ರಿಯಾಪದ ಮತ್ತೆ ರ‍್ತಮಾನಕಾಲದಲ್ಲಿಯೂ ಸ್ಪಷ್ಟವಾದ ಕೆಲಸ ಮಾಡುತ್ತ ‘ಕೆಟ್ಟ ಅರಸುತನ’ ವನ್ನ ಧ್ವನಿಸಿ, ಕೊನೆಗೆ ಈ ಹೀನಾವಸ್ಥೆಯನ್ನ ಕಂಡು ತನ್ನ ಒಟ್ಟೂ ಉದ್ದೇಶವಾದ ಬದುಕಿಯೂ ಪ್ರಯೋಜನವಿಲ್ಲವೆಂಬುದನ್ನ ಹೇಳುತ್ತಿದ್ದಾನೆ. ಕೊನೆಯ ಸಾಲಿನಲ್ಲಿನ ‘ಬದುಕಲೆ’ ಅನ್ನುವಾಗ ಅವನಲ್ಲಿನ ಒಳಗುದಿಯ ಕಾವನ್ನ ಹೇಳುವಲ್ಲಿ ಸಾಮಾನ್ಯವಾದ ಇಂದಿನ ದುಖಃದ ಸ್ಥಿತಿಯನ್ನೂ ಧ್ವನಿಸುವ ಹಾಗೆ ಮಾಡುತ್ತಿದೆ.  ಆಶ್ಚರ್ಯದ ಸಂಗತಿ ಎಂದರೆ ರಾಜನ ಅಥವಾ ಪ್ರಭುತ್ವದ ವಿರುದ್ಧ ಆ ಕಾಲದಲ್ಲಿಯೇ ಬಹಳ ನೇರವಾಗಿ ಖಂಡಿಸುವ ಗುಣ ಮೆಚ್ಚಲೇಬೇಕಾದುದು. ಅದೇ ರಾಜ್ಯದಲ್ಲಿದ್ದು. ಈ ಗುಂಡಿಗೆಗೆ ಪ್ರಭಾವ ಬಸವಣ್ಣನ ನಡೆ ಇದ್ದರೂ ಇರಬಹುದು (ಊರಮುಂದೆ ಹಾಲಹಳ್ಳ ಹರಿಯುತಿರಲು ಬಿಜ್ಜಳನ ಭಂಡಾರವೆನಗೇಕಯ್ಯಾ, ನೆಲನಾಳ್ದನ ಹೆಣನೆಂದೊಡೆ ಒಂದಡಿಕೆಗೆ ಕೊಂಬರಿಲ್ಲ … ಇತ್ಯಾದಿ ಬಸವಣ್ಣನ ವಚನ ಮತ್ತು ನಡೆಯ ಪ್ರಭಾವ ಇದ್ದರೂ ಇರಬಹುದು) ಎಲ್ಲಕಾಲದಲ್ಲಿಯೂ ಬಂಡಾಯವನ್ನ ನಡೆಸುವವನ ಒಳ ಹೊರ ಸ್ಥಿತಿಯ ಶುಚಿತ್ವದ ದ್ಯೋತಕವಾಗಿ ಈ ವಚನ ನಿಂತಿದೆ. ಅಧಿಕಾರದಲ್ಲಿರುವವನ ನೈತ್ತಿಕ ಅಧಃಪತನ ಮತ್ತು ಅವನನ್ನಾಶ್ರಯಿಸಿರುವ ಎಲ್ಲರ ಪತನಕ್ಕೂ ನಾಂದಿ. ಕೊನೆಗೆ ಅದರ ಪರಿಣಾಮ ಸಮಾಜದಲ್ಲಿ ಕ್ಷುದ್ರತೆಯ ಅನಾವರಣಕ್ಕೆ ನಾಂದಿ. ವಚನಕಾರರಿಗೆ ಇದ್ದ ಭಾಷೆಯ ಬಳಕೆಯಲ್ಲಿನ ಬಹುಸೂಕ್ಷ್ಮತೆ ಬೆರಗಾಗಿಸುತ್ತದೆ. ಒಂದು ಕ್ರಿಯಾಪದವನ್ನ ಬಳಸುವಾಗಲಂತೂ ಅವರಲ್ಲಿನ ಸದ್ಯ-ಶಾಶ್ವತವನ್ನ ಹಿಡಿದಿಡುವಲ್ಲಿ ಅನುಭವ-ಅನುಭಾವ ಅಥವಾ ಭವಿಷ್ಯವನ್ನು ನುಡಿಯುವ ಮುಂಗಾಣ್ಕೆ, ಎಲ್ಲ ಕಾಲದಲ್ಲಿಯೂ ಅವರನ್ನು ಸಲ್ಲುವಂತೆ ಮಾಡಿದೆ. ಅಡಿಟಿಪ್ಪಣಿ ೦೧. ಬಸವಯುಗದ ವಚನ ಮಹಾಸಂಪುಟ. ಸಂ. ಡಾ. ಎಂ ಎಂ ಕಲಬುರಗಿ. ಪು ೯೭೩ ಮತ್ತು ೯೭೪ (೨೦೧೬) ೦೨. ಪೀಠಿಕೆಗಳು ಲೇಖನಗಳು. ಡಿ ಎಲ್ ನರಸಿಂಹಾಚಾರ್. ಪುಟ ೪೬೯. (೧೯೭೧) ೦೩. ಶಿವಶರಣ ಕಥಾರತ್ನಕೋಶ. ತ ಸು ಶಾಮರಾಯ. ಪುಟ ೦೪. (೧೯೬೭) ೦೪.  ಬಸವಯುಗದ ವಚನ ಮಹಾಸಂಪುಟ. ಸಂ. ಡಾ. ಎಂ ಎಂ ಕಲರ‍್ಗಿ. ಪು ೯೩೫. (೨೦೧೬) ೦೫. ಪ್ರಾಚೀನ ಕನ್ನಡ ಸಾಹಿತ್ಯದ ಸಮಗ್ರ ಸೂಚಿ-೧. ಡಾ. ಆರ್.

Read Post »

You cannot copy content of this page

Scroll to Top