Day: January 31, 2021

ಕೇಂದ್ರ ಕೃಷಿ ಕಾಯ್ದೆ ರೈತರಿಗೆ ಮಾರಕ ಹೇಗೆ?

ಕೃಷಿ ರಂಗದ ಸಮಸ್ಯೆಗಳಿಗೆ ಪರಿಹಾರವಿರುವುದು ವಿಕೆಂದ್ರೀಕೃತ ಅರ್ಥ ನೀತಿಯಲ್ಲಿ ; ಸಹಕಾರಿ ತತ್ವದಲ್ಲಿ. ಬೇಸಾಯ, ಉತ್ಪಾದನೆ , ಸಂಗ್ರಹಣೆ ಮತ್ತು ಮಾರಾಟ ವ್ಯವಸ್ಥೆಯನ್ನು ಸಹಕಾರಿ ರಂಗದಲ್ಲೇ ಕೈಗೊಳ್ಳುವುದು. ಕೃಷಿ ಪೂರಕ ಮತ್ತು ಕೃಷಿ ಆಧಾರಿತ ಉದ್ದಿಮೆಗಳನ್ನು ಗ್ರಾಮೀಣ ಭಾಗದಲ್ಲಿ ಪ್ರಾರಂಭಿಸಲು ಪ್ರೋತ್ಸಾಹ ನೀಡುವುದರಿಂದ. ಕೇಂದ್ರೀಕೃತ ಅರ್ಥವ್ಯವಸ್ಥೆಯಾದ ಬಂಡವಾಳವಾದಿ ನೀತಿಯನ್ನು ಕೈಬಿಡದೇ ರೈತರ ಬದುಕನ್ನು ಹಸನಾಗಿಸಲು ಸಾಧ್ಯವಾಗದು

ಆವರ್ತನ

ಇದು ಗುರುರಾಜ್ ಸನಿಲ್ ಅವರ ‘ಆವರ್ತನ’ ಎಂಬ ಸಾಮಾಜಿಕ ಕಾದಂಬರಿ. ಪ್ರಸ್ತುತ ಕಾಲಘಟ್ಟದ ಸಮಾಜದಲ್ಲಿ ನಮ್ಮ ಕೆಲವು ನಂಬಿಕೆ, ಆಚರಣೆಗಳು ಯಾವ ಯಾವ ರೀತಿಗಳಲ್ಲಿ ಜನಜೀವನ ಶೋಷಣೆಗೂ, ಹಸಿರು ಪರಿಸರ ಮತ್ತು ವನ್ಯಜೀವರಾಶಿಗಳ ಮಾರಣಹೋಮಕ್ಕೂ ಕಾರಣವಾಗುತ್ತಿವೆ ಎಂಬುದನ್ನು ಬಹಳ ಸಮೀಪದಿಂದ ಕಾಣುತ್ತ ಬಂದವರು ಇವರು.. ಹಾಗಾಗಿ ಅದೇ ಕಥಾವಸ್ತುವನ್ನು ಕಾದಂಬರಿ ಪ್ರಕಾರದಲ್ಲೂ ಆಯ್ದುಕೊಂಡು ಜನಜಾಗ್ರತಿ ಮೂಡಿಸುವುದು ಅಗತ್ಯ ಎಂದು ತೋರಿ ಈ ಕೃತಿಯನ್ನು ರಚಿಸಿದ್ದಾರೆ. ಇದು ಪುಸ್ತಕರೂಪದಲ್ಲಿ ಪ್ರಕಟವಾಗುವ ಮುನ್ನ ಸಂಗಾತಿಯ ಓದುಗರನ್ನು ತಲುಪಲೆಂದು ಪ್ರತಿ ಬಾನುವಾರ ಇದನ್ನು ಕಂತುಗಳಲ್ಲಿ ಪ್ರಕಟಿಸಲಾಗುತ್ತಿದೆ. ದಾರಾವಾಹಿ ಕ್ಷೇತ್ರದಲ್ಲಿ ಇದು ಸಂಗಾತಿಯ ಮೊದಲ ಪ್ರಯತ್ನ ಓದುಗರು ತಮ್ಮ ಅನಿಸಿಕೆ ತಿಳಿಸಬೇಕೆಂದು ಕೋರುತ್ತೇವೆ

ವಚನಚಳುವಳಿಗೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಸ್ಥಾನವಿದೆ. ವಚನಗಳಲ್ಲಿ ಆಡಿದ, ಸಾರಿದ, ಸಾಧಿಸಿ ತೋರಿಸಿದ ಮೌಲ್ಯಗಳು ಕೇವಲ ಘೋಷಣೆಗಳಾಗದೆ ನಡೆ ನುಡಿಯಲ್ಲಿ ಒಂದಾಗಿ ಏಕವನ್ನು ಸ್ಥಾಪಿಸಿದ ಕಾರಣದಿಂದ ವಚನಕಾರರು ಈ ನೆಲದಲ್ಲಿ ಮಾನ್ಯ ಮತ್ತು ಮುಖ್ಯರಾಗುತ್ತಾರೆ.

ಪ್ರೇಮಪತ್ರ ಸ್ಪರ್ದೆ

ಪ್ರೇಮಪತ್ರ ಸ್ಪರ್ದೆ ಪಂಜು ಅಂತರ್ಜಾಲ ವಾರಪತ್ರಿಕೆ ವತಿಯಿಂದ 2021 ರ ಪ್ರೇಮ ಪತ್ರ ಸ್ಪರ್ಧೆಗೆ ನಿಮ್ಮ ಪ್ರೇಮ ಪತ್ರಗಳನ್ನು ಆಹ್ವಾನಿಸಲಾಗಿದೆ. ನಿಯಮಗಳು: ಪ್ರೇಮ ಪತ್ರ ನಿಮ್ಮ ಸ್ವಂತ ಬರಹವಾಗಿರಬೇಕುಕನಿಷ್ಟ 500 ಪದಗಳ ಬರಹವಾಗಿರಬೇಕುಫೇಸ್ ಬುಕ್ ಮತ್ತು‌ ಬ್ಲಾಗ್ ಸೇರಿದಂತೆ ಬೇರೆಲ್ಲೂ ಪ್ರಕಟವಾಗಿರಬಾರದು.ನಿಮ್ಮ ಬರಹವನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಪ್ರೇಮ ಪತ್ರ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. ಮಿಂಚಂಚೆಯಲ್ಲಿ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ನಿಮ್ಮ ಕಿರು ಪರಿಚಯ ಹಾಗು […]

Back To Top