ಹೀಗೆ ಗೇರು ಹಕ್ಕಲಿನಲ್ಲಿ ಹಾಕಿದ ಹೆಜ್ಜೆಗಳು ಮೆಲ್ಲಮೆಲ್ಲನೆ ತಾಳ ಗತಿಯ ಲಯಕ್ಕೆ ಹೊಂದಿಕೆಯಾಗುತ್ತಿದ್ದಂತೆಯೇ ಯಕ್ಷರಂಗದ ಆಸಕ್ತಿ ಹೆಚ್ಚುತ್ತ ಹೋಯಿತು. ಅದೇ ಸಮಯದಲ್ಲಿ ನಮ್ಮ ತಂದೆಯವರು ಸುತ್ತಲಿನ ಹಳ್ಳಿಯ ಹವ್ಯಾಸಿ ತಂಡಗಳಿಗೆ ಯಕ್ಷಗಾನ ಕಲಿಸಲು ಹೋಗುತ್ತಿದ್ದರು.
ವಿಕ್ರಮಶಿಲಾ” ಮೂರು ಮಹಡಿಯ ಕಟ್ಟಡದ ಮೆಟ್ಟಲುಗಳನ್ನು ಏರುತ್ತಿದ್ದೆ. ಹಂಚಿನ ಮಾಡಿನ ಶಾಲೆಯ ಆಂಗಳದಿಂದ ಮಂಗಳನ ನೆಲದತ್ತ ಹಾರಿ ಹೊರಟ ಉಪಗ್ರಹದ ಏಕಾಂಗೀ ಹೆಜ್ಜೆಗಳವು.