Day: April 10, 2021

ಅಂಕಣ ಬರಹ ಹೊಸ್ತಿಲಾಚೆಗಿನ ರಂಗಜೀವಿ ಬದುಕ ರಂಗವನ್ನು ಆತ್ಮ ತೊರೆದಿತ್ತು. ಮನೆಯ ಉದ್ದದ ಚಾವಡಿಯಲ್ಲಿ ಅತ್ತೆಯ ಶರೀರ  ಮಲಗಿತ್ತು. ತಲೆಯ ಬದಿಯಲ್ಲಿ ತೆಂಗಿನ ಕಾಯಿಯ ಒಂದು ಭಾಗದೊಳಗೆ ದೀಪ ಮೌನವಾಗಿ ಉರಿಯುತ್ತಿತ್ತು. ರಾಶಿ ಮೌನಗಳನ್ನು ದರದರನೆ ಎಳೆತಂದು ಕಟ್ಟಿ ಹಾಕಿದ ರಾಕ್ಷಸ ಮೌನ ಘೀಳಿಡುತ್ತಿತ್ತು. ಎದೆ ಒತ್ತುವ, ಕುತ್ತಿಗೆ ಒತ್ತುವ ನಿರ್ವಾತಕ್ಕೆ ಅಂಜಿ ಮುಂಬಾಗಿಲಿಗೆ ಬಂದೆ. ಶರೀರವನ್ನು ಉದ್ದಕ್ಕೆ ನೆಲಕಂಟಿಸಿ ಮುಖವನ್ನು ಅಡ್ಡಕ್ಕೆ ಬಾಗಿಸಿ ‘ಪೀಕು’ ಮಲಗಿದ್ದಾಳೆ. ನಾನು ಅಲ್ಲಿರುವುದು ತಿಳಿದಿಲ್ಲವೇ? ಯಾವಾಗಲೂ ನಡಿಗೆಯ ಪದತರಂಗವನ್ನು ಗಬಕ್ಕೆಂದು […]

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—20 ಆತ್ಮಾನುಸಂಧಾನ ಸಂಸ್ಕೃತವನ್ನು ಓದಗೊಡದ ಸಂಸ್ಕೃತ ಮೇಷ್ಟ್ರು ನಾನು ‘ಜೈಹಿಂದ್’ ಹೈಸ್ಕೂಲು ವಿದ್ಯಾರ್ಥಿಯಾಗಿ ಪ್ರವೇಶ ಪಡೆದ ಬಳಿಕ ವಿಷಯ ಆಯ್ಕೆಯ ಸಂದರ್ಭದಲ್ಲಿ ಒಂದು ತಪ್ಪು ಮಾಡಿದೆ. ಬಾಲ್ಯದಿಂದಲೂ ಯಕ್ಷಗಾನದ ಪ್ರಭಾವಕ್ಕೆ ಪಕ್ಕಾಗುವ ವಾತಾವರಣದಲ್ಲಿ ಬೆಳೆದ ನಾನು ಹಿರಿಯ ಅರ್ಥಧಾರಿಗಳು ಅರ್ಥ ಹೇಳುವಾಗ ಮಾತಿನ ಮಧ್ಯೆ ಅಲ್ಲಲ್ಲಿ ಬಳಸುವ ಸಂಸ್ಕೃತ ಶ್ಲೋಕಗಳನ್ನು ಕೇಳುವಾಗ ಅದು ತುಂಬ ಅದ್ಭುತವೆನ್ನಿಸುತ್ತಿತ್ತು. ಇಂಥ ಸಂಸ್ಕೃತ ಉಕ್ತಿಗಳನ್ನು ಮಾತಿನ ಮಧ್ಯೆ ಬಳಸುವವರು ತುಂಬಾ ಜಾಣರು, ಬಹಳಷ್ಟು […]

Back To Top