Day: April 13, 2021

ಅಂಬೇಡ್ಕರ್ ವಿಶೇಷ ಬರಹ ಭಾರತದ ಸಂವಿಧಾನದ ಪೀಠಿಕೆಯೂ..! ಭಾರತದ ಸಂವಿಧಾನದ ಪೀಠಿಕೆಯೂ..! ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (೧೯೭೬ರಲ್ಲಿ ಇಂದಿರಾಗಾಂಧಿಯವರಿಂದ ಸೇರಿಸಲ್ಪಟ್ಟದ್ದು). ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ– ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ; ಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ […]

ಅಂಬೇಡ್ಕರ್ ಜಯಂತಿ ವಿಶೇಷ ಬರಹ ಅಸ್ಪೃಶ್ಯತೆಯ ವಿರುದ್ದ ಅಂಬೇಡ್ಕರ್ ರವರ ಹೋರಾಟ ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ. ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರು. ನ್ಯಾಯಾಲಯದ ಕಟ್ಟೆ […]

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-5 ಹ್ಯಾವ್ಲೊಕ್ ಲ್ಲಿ ನಮ್ಮ ರೆಸಾರ್ಟ್ ಹಿಂಭಾಗದ ಸಣ್ಣ ಖಾಸಗಿ ಬೀಚ್ ನ ಉದ್ದಕ್ಕೂ ಸರಸ್ವತಿ ಮತ್ತು ನಾನು ಎಷ್ಟು ದೂರ ನಡೆದೆವೋ ವಾಪಸ್ಸು ಬರಬೇಕೆಂದೇ ಅನಿಸಲಿಲ್ಲ.  ಮಕ್ಕಳು ಅಲ್ಲಿ ಇಲ್ಲಿ ಓಡಾಡಿಕೊಂಡು ಮೊಬೈಲಲ್ಲಿ, ಕ್ಯಾಮರಾದಲ್ಲಿ ಫೋಟೊ ತೆಗೆದುಕೊಳ್ಳುವುದರಲ್ಲೇ ಮಗ್ನರಾಗಿದ್ದರು. ಗಣೇಶಣ್ಣ ಸತೀಶ್ ಇಬ್ಬರೂ ಅಲ್ಲಿದ್ದ ಬೆಂಚ್ ಮೇಲೆ ಆರಾಮಾಗಿ ಅಲೆಗಳನ್ನು ನೋಡುತ್ತಾ ಕೂತರು. ನಾವು ತಿರುಗಿ ಬಂದರೂ ಮಕ್ಕಳಿಗೆ […]

Back To Top