Day: April 17, 2021

ಬದರ್

ಪುಸ್ತಕ ಸಂಗಾತಿ ಬದರ್ (ಅಬಾಬಿಗಳ ಸಂಕಲನ) ಮೂಲ ಲೇಖಕರ ಪರಿಚಯ ಇವರ ಪೂರ್ಣ ಹೆಸರು ಷೇಕ್ ಕರೀಮುಲ್ಲಾ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವಿನುಕೊಂಡ ಪಟ್ಟಣದಲ್ಲಿ ಜೂನ್ 01, 1964ರಲ್ಲಿ ಜನಿಸಿದರು. ವೃತ್ತಿಯಿಂದ ಶಿಕ್ಷಕರಾಗಿದ್ದಾರೆ. ಕಾವ್ಯವೇ ಇವರ ಅಚ್ಚುಮೆಚ್ಚಿನ ಸಾಹಿತ್ಯ ಪ್ರಕಾರ. 2006ನೇ ಇಸವಿಯಲ್ಲಿ ಮುಸ್ಲಿಂ ಬರಹಗಾರರ ಸಂಘವನ್ನು ಸ್ಥಾಪಿಸಿ ವ್ಯವಸ್ಥಾಪಕರಾಗಿ ಮುಸ್ಲಿಂ ಸಾಹಿತಿಗಳನ್ನು ಒಂದೇ ವೇದಿಕೆಗೆ ಕರೆದುತರುವ ಮಹತ್ವವಾದ ಕಾರ್ಯಕ್ಕೆ ನಾಂದಿ ಹಾಡಿದರು. ಪ್ರಗತಿಪರ ಮುಸ್ಲಿಂ ಬರಹಗಾರರಾಗಿ ಇವರು ಜನಮಾನಸವನ್ನು ಸೂರೆಗೊಂಡಿದ್ದಾರೆ. ಕೆಳ ಮತ್ತು ಮಧ್ಯಮ ವರ್ಗದ […]

ಆತ್ಮ ಚೈತನ್ಯ

ಕವಿತೆ ಆತ್ಮ ಚೈತನ್ಯ ವಸುಂಧರಾ ಕದಲೂರು ಹೌದು,ಸದಾ ಚೈತನ್ಯಶೀಲರಾಗಿರುವನಾವು ಆಗಾಗ್ಗೆ ಮಂಕಾಗುತ್ತೇವೆ. ಚೈತನ್ಯವು ಬೇರುಬಿಟ್ಟ ಆಲದಮರದ ಬಿಳಲುಗಳೇನಲ್ಲ! ಆಗಸದ ವಿಸ್ತಾರದ ಕ್ಯಾನ್ವಸ್ಸಿನಹಿನ್ನೆಲೆಯಲಿ ರಂಗು ರಂಗಿನೋಕುಳಿಆಡುವ ಚಿತ್ತಾರದ ಮೇಘಮಾಲೆ;ಕ್ಷಣ ಕ್ಷಣವೂ ಬದಲಾಗುವಗಡಿಯಾರದ ಮುಳ್ಳಿನ ಚಲನೆ; ಹಕ್ಕಿ ಗೂಡೊಳಗಿನ ಜೀವಂತಿಕೆಯಕಾವಿಗೆ ಕಾದು ಕೂತ ಪುಟ್ಟ ಮೊಟ್ಟೆ.ರೆಕ್ಕೆ ಬಲಿತ ಮೇಲೆ ಗಗನ ಗಾಮಿ. ಚೈತನ್ಯವು ನಿತ್ಯ ನೂತನವೂ ನಿರಂತರತಾರುಣ್ಯಪೂರ್ಣವೂ ಆಗಿರಲುಸಾಧ್ಯವಿಲ್ಲ. ಸತ್ಯದ ಒಳ ಹೂರಣದಮೇಲೆ ಹುಸಿ ಸುಳ್ಳಿನ ಹೊರಕವಚ. ಚೈತನ್ಯದ ವಾಸ್ತವತೆ ಸಾವಿನಂತೆ.ಮರುಹುಟ್ಟಿನ ನಿರೀಕ್ಷಣೆಯಲ್ಲಿಅಲೆವ ಆತ್ಮಜ್ಯೋತಿ! ಜನ್ಮಾಂತರಗರ್ಭದೊಳಗಿನ ಭ್ರೂಣ ಪ್ರಣತಿ! ******************************************

ಮಕ್ಕಳಿಗಾಗಿ ಅನುಭವ ಕಥನ ಕಾಡಂಚಿನಊರಿನಲ್ಲಿ….. ವಿಜಯಶ್ರೀ ಹಾಲಾಡಿ ವಿಜಿ ಸಣ್ಣವಳಿರುವಾಗ, ಅಜ್ಜಿ ಅಂದಿಗೆ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದೆ (ಅಂದರೆ ಇವತ್ತಿಗೆ ತೊಂಬತ್ತು-ತೊಂಬತ್ತೈದು ವರ್ಷಗಳ ಹಿಂದೆ) ನಡೆದ ಘಟನೆಯನ್ನು ಹೇಳುತ್ತಿದ್ದರು. ಅಜ್ಜಿಯ ಮಾವ ಮುಂತಾದ ಹಿರಿಯರಿದ್ದ ಸಮಯವದು. ಆಗ ನಮ್ಮೂರು `ಮುದೂರಿ’ಯ ಸುತ್ತಲಿನ ಕಾಡುಗಳಲ್ಲಿ ಹುಲಿಯಿತ್ತಂತೆ! ಎಷ್ಟು ಹುಲಿಗಳಿದ್ದವೋ, ತಿಳಿಯದು, ಆದರೆ ಊರಿಗೆ ಬಂದು ದನಗಳನ್ನು ಕೊಂಡೊಯ್ದ ಅನೇಕ ಪ್ರಸಂಗಗಳಿದ್ದವು. ಹಟ್ಟಿಯ ಗೋಡೆಯನ್ನು ಮಣ್ಣಿನಿಂದ ಗಟ್ಟಿಯಾಗಿ ನಿರ್ಮಿಸಿ ಬಂದೋಬಸ್ತು ಮಾಡಿದ್ದರೂ ಬಾಗಿಲು ಸ್ವಲ್ಪ ಸದರ ಇದ್ದರೆ ಅದರ […]

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—21 ಆತ್ಮಾನುಸಂಧಾನ ವಿದ್ಯಾರ್ಥಿ ನಿಲಯದಲ್ಲಿ ಪ್ರಪ್ರಥಮ ರಂಗಪ್ರವೇಶ ಅಂಕೋಲೆಯ ಲಕ್ಷ್ಮೇಶ್ವರ ಭಾಗದ ವಿದ್ಯಾರ್ಥಿ ನಿಲಯದಲ್ಲಿ ಮೊದಲ ಮಳೆಗಾಲ ಕಳೆದಿತ್ತು. ನವೆಂಬರ್ ತಿಂಗಳಲ್ಲಿ ವಿದ್ಯಾರ್ಥಿ ನಿಲಯವು ಅಂಬಾರಕೊಡ್ಲ ರಸ್ತೆಗೆ ಹೊಂದಿಕೊಂಡಿದ್ದ ಎರಡಂತಸ್ತಿನ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ವಿಶಾಲವಾದ ಕಂಪೌಂಡಿನಲ್ಲಿರುವ ಕಟ್ಟಡದ ನೆಲ ಅಂತಸ್ತಿನಲ್ಲಿ ಸಾಕಷ್ಟು ವಿಶಾಲವಾದ ಕೋಣೆಗಳು, ಮೊದಲ ಮಹಡಿಯಲ್ಲಿಯೂ ಅಷ್ಟೇ ವಿಶಾಲ ಕೋಣೆಗಳು ತುಂಬಾ ಅನುಕೂಲಕರವಾಗಿದ್ದವು. ಈ ಕಟ್ಟಡದ ಮಾಲಿಕರು ಯಾರೋ ನಮಗೆ ತಿಳಿದಿರಲಿಲ್ಲ. ಆದರೆ ಬಹುಕಾಲದಿಂದ ಈ ಭವ್ಯ […]

Back To Top