… ಆದರೂ… ಯೋಚನೆಗಳ ಗೊಂದಲದಲ್ಲಿ ಬಿದ್ದಿರುವಾಗಲೇ ಅವಳ ಜೀವನಕ್ಕೆ ಈ ಹೊಸ ತಿರುವೂ ಸಿಕ್ಕಿತ್ತು… ಇದು ಎಲ್ಲಿಗೆ ಹೋಗಿ ಕೊನೆ ಮುಟ್ಟತ್ತೋ… ಮೂರ‍್ನಾಲ್ಕು ದಿನಗಳಾದರೂ ಮತ್ತೆ ವೆಂಕಟೇಶಯ್ಯನವರು ಈ ಬಗ್ಗೆ ಏನೂ ಮಾತಾಡಿಲ್ಲ. ಇದೂ ಒಂದು ತರಹ ಹೆದರಿಕೆ ಹುಟ್ಟಿಸಿ, ಈ ಮೌನ ಯಾವುದಕ್ಕೆ ಪೀಠಿಕೆಯೋ ಎನ್ನಿಸಿಬಿಟ್ಟಿತು…
ಜನರ ನಡುವೆಯೇ ಇರುವ, ಅವರಿಂದ ಉಪಕೃತರಾಗುವ ಅವರಿಗೂ ಉಪಕರಿಸುವ ಶಾಸಕಾಂಗ ರಚನಕಾರರಾದ ಮಂತ್ರಿ- ಮಹೋದಯರು ಜನಪ್ರಿಯತೆಯ ಹಿಂದೆ ಬಿದ್ದರೆ ಮತದಾನ ಪ್ರಕ್ರಿಯೆಯಲ್ಲಿ ಅವರಿಗೆ ಅಗತ್ಯ ಇರಬಹುದು ಎಂದು ಒಂದು ಪಕ್ಷ ಒಪ್ಪಬಹುದೇನೋ.. ಆದರೆ ಶಾಸನಗಳನ್ನು ನ್ಯಾಯವಾಗಿ ಜಾರಿಗೊಳಿಸಿ ಪಾಲಿಸಬೇಕಾದ ಕಾರ್ಯಾಂಗ ವ್ಯವಸ್ಥೆಯಲ್ಲಿ ಕೆಲಸ ಮಾಡುವವರು ಹೀಗೆ ಜನಪ್ರಿಯತೆಯ ಬೆನ್ನು ಹಿಡಿದರೆ, ಅವರಿಂದ ನಿಷ್ಪಕ್ಷಪಾತ ಸೇವೆಯನ್ನು ನಿರೀಕ್ಷೆ ಮಾಡುವುದು ಸಾಧ್ಯವೇ?