ಗಝಲ್
ರೇಷ್ಮಾ ಕಂದಕೂರ.
ಮುಗ್ದ ಮನಸುಗಳು ನಾವು ಚಿವುಟದಿರಿ ನಮ್ಮನ್ನ
ಕಂಡ ಕನಸುಗಳು ನನಸಾಗ ಬೇಕಿದೆ ಇನ್ನ
ನೋವುಗಳ ಸಹಿಸದ ಹಸುಳೆಗಳು ನಾವು
ಕ್ರೌರ್ಯದ ದಾಳಿಗೆ ಸಿಲುಕಿಸದಿರಿ ತನುವನ್ನ
ಭರವಸೆಗಳ ಬೆಳಕಿನಡಿ ಸಾಗಬೇಕಿದೆ ಜೀವನ
ಎಸೆಯ ಬೇಡಿ ಮೃದುಲತೆಗೆ ಮೋಹದ ಜಾಲವನ್ನ
ಜ್ಞಾನದ ಹಂಬಲಕೆ ಕೈ ಚಾಚಿದೆ ಕರೆದಿದೆ ಮನವು
ವಿವಾಹ ಕೂಪಕೆ ವಶಪಡಿಸದಿರಿ ಕುಸುಮವನ್ನ
ನಿರ್ಮಲತೆಯ ನಾಜೂಕು ನನ್ನೊಡನಾಟ
ಹೊಸಕಿ ಹಾಕದಿರಿ ನಾಜೂಕು ರೇಷಿಮೆಯನ್ನ