ಹುಯಿಲಗೋಳ ನಾರಾಯಣರಾಯ..!

ಲೇಖನ

ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು’ವಿನ ಹುಯಿಲಗೋಳ ನಾರಾಯಣರಾಯ..!

ಇಂದು ಹುಯಿಲಗೋಳ ನಾರಾಯಣರಾಯರ ಜನ್ಮದಿನ. ಆ ನೆನಪಲ್ಲಿ ಈ ಬರಹ…

ಹುಯಿಲಗೋಳ ನಾರಾಯಣರಾಯರು ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಕರ್ನಾಟಕ ನಾಡಗೀತೆಯೆನಿಸಿದ್ದ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’ ಗೀತೆಯನ್ನು ರಚಿಸಿದವರು.

೧೮೮೪ ಅಕ್ಟೋಬರ್ ೪ ರಂದು ಗದಗದಲ್ಲಿ ಜನಿಸಿದವರು. ಇವರ ತಂದೆ ಕೃಷ್ಣರಾಯರು, ತಾಯಿ ರಾಧಾಬಾಯಿ(ಬಹಿಣಕ್ಕ).

ಬಾಲ್ಯದ ಶಿಕ್ಷಣವನ್ನು ಗದಗ, ಗೋಕಾಕ ಹಾಗೂ ಧಾರವಾಡಗಳಲ್ಲಿ ಪೂರೈಸಿದರು. ೧೯೦೨ ರಲ್ಲಿ ಧಾರವಾಡದಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಮುಗಿಸಿ ಉಚ್ಚ ಶಿಕ್ಷಣಕ್ಕಾಗಿ ಪುಣೆಯ ಫರ್ಗ್ಯೂಸನ್ ಕಾಲೇಜನ್ನು (ಮುಂಬೈ ವಿಶ್ವವಿದ್ಯಾಲಯ) ಸೇರಿದರು. ೧೯೦೭ ರಲ್ಲಿ ಬಿ.ಎ. ಪದವಿಯನ್ನು ಪಡೆದ ಬಳಿಕ ಧಾರವಾಡದ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ಶಿಕ್ಷಕರಾದರು. ಕೆಲಕಾಲದ ನಂತರ ಶಿಕ್ಷಕ ವೃತ್ತಿಯನ್ನು ತ್ಯಜಿಸಿ, ಮುಂಬೈಗೆ ತೆರಳಿ, ಕಾನೂನು ಪದವಿಯನ್ನು ಪಡೆದು ೧೯೧೧ರಲ್ಲಿ ವಕೀಲಿ ವೃತ್ತಿಯನ್ನು ಗದಗದಲ್ಲಿಯೇ ಆರಂಭಿಸಿದವರು.

ಇಂತಹ ಹುಯಿಲಗೋಳ ನಾರಾಯಣರಾಯರು ‘ಕರ್ನಾಟಕ ಏಕೀಕರಣ’ದಲ್ಲಿ ಪ್ರಮುಖ ಪಾತ್ರ ವಹಿಸದವರಲ್ಲಿ ಒಬ್ಬರು. ಅಲ್ಲದೇ ಧಾರವಾಡದ ವಿದ್ಯಾವರ್ಧಕ ಸಂಘದ ಸ್ಥಾಪನೆಯಲ್ಲೂ ಪ್ರಮುಖರಲ್ಲೊಬ್ಬರಾಗಿದ್ದವರು.

ನಾರಾಯಣರಾಯರು ಮೂಲತಃ ನಾಟಕಕಾರರು. ಕನ್ನಡ ರಂಗಭೂಮಿಗಾಗಿ ಕಾಲ್ಪನಿಕ, ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಹೀಗೆ ವಿವಿಧ ಬಗೆಯ ನಾಟಕಗಳನ್ನು ರಚಿಸಿ ಪ್ರದರ್ಶಿಸಿದವರು. ಇವರ ಅನೇಕ ಕವನಗಳು ಅಂದಿನ ಪತ್ರಿಕೆಗಳಾದ ‘ಜೈ ಕರ್ನಾಟಕ ವೃತ್ತ’ , ‘ಪ್ರಭಾತ’ , ‘ಧನಂಜಯ’ ಮೊದಲಾದವುಗಳಲ್ಲಿ ಪ್ರಕಟವಾದವು.

ನಾರಾಯಣರಾಯರು ತಮ್ಮ ನಾಟಕಗಳಿಗಾಗಿ ಗೀತೆಗಳನ್ನೂ ರಚಿಸಿದರು. ನಾರಾಯಣರಾಯರು ‘ಮೂಡಲು ಹರಿಯಿತು’ ಎಂಬ ಕಾದಂಬರಿಯನ್ನೂ ಬರೆದಿದ್ದರೆಂದು ತಿಳಿದು ಬರುತ್ತದೆ. ಆದರೆ ಈ ಕಾದಂಬರಿಯ ಹಸ್ತಪ್ರತಿ ಈಗ ಲಭ್ಯವಿಲ್ಲ.

ನಾಟಕಗಳು–

ಹುಯಿಲಗೋಳ ನಾರಾಯಣರು ಐತಿಹಾಸಿಕ, ಪೌರಾಣಿಕ, ಸಾಮಾಜಿಕ, ಕಾಲ್ಪನಿಕ ನಾಟಕಗಳನ್ನು ರಚಿಸಿದವರು.

ಅವುಗಳು ಕೆಳಕಂಡಂತಿವೆ–

# ಕಾಲ್ಪನಿಕ

ವಜ್ರಮುಕುಟ (೧೯೧೦)

ಕನಕವಿಲಾಸ (೧೯೧೩)

# ಐತಿಹಾಸಿಕ

ಪ್ರೇಮಾರ್ಜುನ(೧೯೧೨)

ಮೋಹಹರಿ(೧೯೧೪)

ಅಜ್ಞಾತವಾಸ(೧೯೧೫)

ಪ್ರೇಮವಿಜಯ(೧೯೧೬)

ಸಂಗೀತ ಕುಮಾರರಾಮ ಚರಿತ(೧೯೧೭)

ವಿದ್ಯಾರಣ್ಯ(೧೯೨೧)

# ಪೌರಾಣಿಕ

ಭಾರತ ಸಂಧಾನ(೧೯೧೮)

ಉತ್ತರ ಗೋಗ್ರಹಣ(೧೯೨೨)

# ಸಾಮಾಜಿಕ

ಸ್ತ್ರೀ ಧರ್ಮ ರಹಸ್ಯ(೧೯೧೯)

ಶಿಕ್ಷಣಸಂಭ್ರಮ(೧೯೨೦)

ಪತಿತೋದ್ಧಾರ(೧೯೫೨)

ಅವರಿಗೆ ಸಂದ ಪ್ರಶಸ್ತಿ ಹಾಗೂ ಗೌರವಗಳು ಹೀಗಿವೆ–

ಆಗಿದ್ದ ಮುಂಬಯಿ ಸರಕಾರವು ಪತಿತೋದ್ಧಾರ ನಾಟಕಕ್ಕೆ ೧೯೫೪ರಲ್ಲಿ ಬಹುಮಾನ ನೀಡಿತು.

ಕಲೋಪಾಸಕ ಮಂಡಳಿಯಿಂದ ಸನ್ಮಾನ – ೧೯೫೨

ಗದಗ – ಬೆಟಗೇರಿ ನಾಗರಿಕರಿಂದ ಸನ್ಮಾನ – ೧೯೩೫

ಗದಗ ವಕೀಲರ ಸಂಗದಿಂದ – ೧೯೫೫

ಕರ್ನಾಟಕ ಸರ್ಕಾರ ಪ್ರಥಮ ರಾಜ್ಯೋತ್ಸವ – ೧೯೫೬

ಕನ್ನಡ ಸಾಹಿತ್ಯ ಪರಿಷತ್ತು – ೧೯೬೧

ಇನ್ನಿತರ ವಿಷಯಗಳು–

ಹುಲಗೋಳ ನಾರಾಯಣರಾಯರ ಸಂಗಡಿಗರು ಅಥವಾ ನಾಟ್ಯವಿಲಾಸಿಗಳು ಆಡಿದ ಇವರ ನಾಟಕಗಳ ಸಂಪಾದನೆಯನ್ನು ಸಮಾಜಶಿಕ್ಷಣ ಮತ್ತು ಸುಧಾರಣೆಗೆ ವಿನಿಯೋಗಿಸಲು ಇವರು ಉದ್ದೇಶಿಸಿದ್ದರು. ಅದರಂತೆಯೇ ಗದಗಿನಲ್ಲಿ ವಿಧ್ಯಾದಾನ ಸಮಿತಿಯಿಂದ ಪ್ರೌಢಶಾಲೆಯೊಂದು ನಿರ್ಮಾಣವಾಯಿತು.

ನಾರಾಯಣರಾಯರು ಅನೇಕ ಸಾಮಾಜಿಕ ಸಂಘಟನೆಗಳಲ್ಲಿಯೂ ಸೇವೆ ಸಲ್ಲಿಸಿದ್ದರು…

‘ಉದಯವಾಗಲಿ’ ಗೀತೆ ರಚಿಸಿದರು.

ಇಂತಹ ಹುಯಿಲಗೋಳ ನಾರಾಯಣರಾಯರು ೪, ಜುಲೈ ೧೯೭೧ರಂದು ಹುಬ್ಬಳ್ಳಿಯಲ್ಲಿ ನಿಧನರಾದರು…

ಇಂತಹ ಹುಯಿಲಗೋಳ ನಾರಾಯಣರಾಯರ ಪುಸ್ತಿಕೆಗಳನ್ನ ಮುಂದೆ ಕನ್ನಡ ಪುಸ್ತಕ ಪ್ರಾಧಿಕಾರವು “ಹುಯಿಲಗೋಳ ನಾರಾಯಣರಾಯರು ಜೀವನ ಸಾಧನೆ”ಯನ್ನು ಪುಸ್ತಕದಲ್ಲಿ ಪ್ರೊ.ಸಂಪದಾ ಸುಭಾಷ್‌, ಕನ್ನಡ ಪುಸ್ತಕ ಪ್ರಾಧಿಕಾರ, ೨೦೧೨.ರಲ್ಲಿ ಪ್ರಕಟಿಸಿತು.

ಹೀದ್ದರು ಹುಯಿಲಗೋಳ ನಾರಾಯಣರಾಯರು. ಮತ್ತು ಹೀಗಿತ್ತು ಹುಯಿಲಗೋಳ ನಾರಾಯಣರಾಯರ  ಸಾಹಿತ್ಯ ಸಾಧನೆ…

****************************

ಕೆ.ಶಿವು.ಲಕ್ಕಣ್ಣವರ

Leave a Reply

Back To Top