ಮಲ್ಲಿಕಾರ್ಜುನ ಕಡಕೋಳ ಅವರ ‘ಯಡ್ರಾಮಿ ಸೀಮೆ ಕಥನಗಳು’ ಪುಸ್ತಕಕ್ಕೆ ಕಲ್ಯಾಣ ಕರ್ನಾಟಕ ಪ್ರಶಸ್ತಿ

ಮಲ್ಲಿಕಾರ್ಜುನ ಕಡಕೋಳ ಅವರ

‘ಯಡ್ರಾಮಿ ಸೀಮೆ ಕಥನಗಳು’

ಪುಸ್ತಕಕ್ಕೆ ಕಲ್ಯಾಣ ಕರ್ನಾಟಕ ಪ್ರಶಸ್ತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರ್ಗಿ ವಿಶ್ವವಿದ್ಯಾಲಯ ನೀಡುವ ಕಲ್ಯಾಣ ಕರ್ನಾಟಕ ಪ್ರದೇಶದ ಪುಸ್ತಕ ಬಹುಮಾನ ಹಾಗೂ ಲೇಖಕ/ ಪ್ರಕಾಶಕರ ಗೌರವ ಪ್ರಶಸ್ತಿಯನ್ನು ಇಂದು ಘೋಷಿಸಲಾಗಿದೆ.

ಹಿರಿಯ ಸಾಹಿತಿ ಮಲ್ಲಿಕಾರ್ಜುನ ಕಡಕೋಳ ಅವರ ‘ಯಡ್ರಾಮಿ ಸೀಮೆ ಕಥನಗಳು’ ಪುಸ್ತಕಕ್ಕೆ ಕಲ್ಯಾಣ ಕರ್ನಾಟಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ ಎಂದು ಕಲಬುರ್ಗಿ ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾದ ಎಚ್ ಟಿ ಪೋತೆ ಅವರು ತಿಳಿಸಿದರು. ಕಡಕೋಳ ಅವರೊಡನೆ ಅವಧಿ’ಯ ಲೇಖಕ ವಿಜಯಭಾಸ್ಕರ ರೆಡ್ಡಿ ಅವರ ‘ನೆನಪಿನ ಪಡಸಾಲೆ’ ಕವನ ಸಂಕಲನ, ಕಪಿಲ ಪಿ ಹುಮನಾಬಾದೆ ಅವರ ‘ಹಾಣಾದಿ’ ಕಾದಂಬರಿಯೂ ಕೂಡ ಪ್ರಶಸ್ತಿಗೆ ಅಯ್ಕೆ ಆಗಿದೆ ಎಂದು ಪೋತೆ ತಿಳಿಸಿದರು.

ಕನ್ನಡ ಸೃಜನ, ಸೃಜನೇತರ ಲೇಖಕರ ಕೃತಿಗಳಿಗೆ, ಜೀವನ ಕಥನ ಹಾಗೂ ಕನ್ನಡ ಪುಸ್ತಕ ಪ್ರಕಾಶಕರಿಗೆ, ಅನುವಾದ ಲೇಖಕರ ಕೃತಿಗೆ, ಸಮಾಜ ವಿಜ್ಞಾನ, ಜನಪದ ಕಲಾವಿದರಿಗೆ, ಚಿತ್ರ/ಶಿಲ್ಪಕಲಾವಿದರಿಗೆ, ಹಿಂದಿ, ಮರಾಠಿ, ಇಂಗ್ಲಿಷ ಹಾಗೂ ಉರ್ದು ಭಾಷಾ ಲೇಖಕರಿಗೆ ಈ ಗೌರವ ನೀಡಲಾಗುತ್ತದೆ.

ನವೆಂಬರ್ ಕೊನೆಯ ವಾರದಲ್ಲಿ ವಿಶ್ವವಿದ್ಯಾಲಯದ ಕಾರ್ಯಸೌಧದ ‘ಮಹಾತ್ಮಾಗಾಂಧಿ ಸಭಾಂಗಣದಲ್ಲಿ’ ಆಚರಿಸಲಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕುಲಪತಿಗಳಾದ ಪ್ರೊ. ಚಂದ್ರಕಾಂತ ಯಾತನೂರ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಪ್ರೊ ಪೋತೆ ಅವರು ತಿಳಿಸಿದರು

**************************************

Leave a Reply

Back To Top