ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – ೨೦೨೦

ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ –

೨೦೨೦ ಬಿದಲೋಟಿ ರಂಗನಾಥ್ ಮತ್ತು ಡಾ.

ಶೋಭಾ ನಾಯಕ್ ಗೆ

೨೦೨೦ ರ ಸಾಲಿನ ಕವಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ರಾಜ್ಯಮಟ್ಟದಲ್ಲಿ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿತ್ತು. ಈ ಸಲ ಒಟ್ಟು ೫೬ ಹಸ್ತಪ್ರತಿಗಳು ಬಂದಿದ್ದವು. ಕೊನೆಯ ಹಂತದಲ್ಲಿ ಅಂಕಗಳು ಸಮ ಬಂದ ಕಾರಣ ಇಬ್ಬರು ಕವಿಗಳ ಹಸ್ತಪ್ರತಿಗಳನ್ನು ಆಯ್ಕೆ ಮಾಡಲಾಗಿದೆ.

ಉತ್ತರ ಕನ್ನಡ ಮೂಲದ ಶೋಭಾ ನಾಯಕ್ ರ ‘ಶಯ್ಯಾಗೃಹದ ಸುದ್ದಿಗಳು’ ಮತ್ತು ತುಮಕೂರು ಜಿಲ್ಲೆಯ ಮಧುಗಿರಿಯ ಬಿದಲೋಟಿ ರಂಗನಾಥರ ‘ದೇವರಿಲ್ಲದ ಸಾಕ್ಷಿಗೆ ರುಜು ಹಾಕಿ’ ಹಸ್ತಪ್ರತಿಗಳು ಈ ಸಲದ ಕಾವ್ಯಪ್ರಶಸ್ತಿಗೆ ಆಯ್ಕೆಯಾಗಿವೆ.

ಹಿರಿಯ ಕವಿಗಳಾದ ಸತೀಶ ಕುಲಕರ್ಣಿ ಮತ್ತು ಈಶ್ವರ್ ಹತ್ತಿ ತೀರ್ಪುಗಾರ ರಾಗಿದ್ದರು

ವಿಜೇತ ಕವಿಗಳಿಬ್ಬರಿಗೂ ಪ್ರತ್ಯೇಕವಾಗಿ ೫,೦೦೦ ರೂ. ನಗದು ಬಹುಮಾನ ಮತ್ತು ಫಲಕಗಳನ್ನು ಡಿಸೆಂಬರ್ ತಿಂಗಳು ಕೊಪ್ಪಳದಲ್ಲಿ ನಡೆಯುವ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ವಿತರಿಸಲಾಗುವುದೆಂದು
ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಮತ್ತು ತಳಮಳ ಪ್ರಕಾಶನದ ಪರವಾಗಿ ಮಹೇಶ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

**************************

Leave a Reply

Back To Top