ಲಂಕೇಶ-೭೮

ಲಂಕೇಶ-೭೮

ಸಿದ್ಧರಾಮ ಹೊನ್ಕಲ್

Gauri Lankesh: 'Intolerant Voices Find Strength in our Silence'

ಯಾರಿಗೂ ಏನನ್ನೂ ಬೇಡಲಿಲ್ಲ,ಬಯಸಲಿಲ್ಲ ಈ ಲಂಕೇಶ
ಎಲ್ಲರಿಗೂ ಪಾಪಪ್ರಜ್ಞೆಯಾಗಿ ಕಾಡದೇ ಬಿಡಲಿಲ್ಲ ಈ ಲಂಕೇಶ

ತಾನು ನಡೆದದ್ದು ಬರೀ ದಾರಿಯಲ್ಲ ಈ ಲಂಕೇಶನಿಗೆ
ಅದು ರಾಜಮಾರ್ಗವೆಂದು ತೋರಿದನಲ್ಲ ಈ ಲಂಕೇಶ

ಕನ್ನಡದ ಮೇರು ಲೇಖಕ ಮೇಲಾಗಿ ನಿರ್ಭೀತ ಪತ್ರಕರ್ತ
ಶತಮಾನದ ದೃಷ್ಟಿಕೋನ ಬದಲಿಸಿದನಲ್ಲ ಈ ಲಂಕೇಶ

ಕಥೆ,ಕವಿತೆ,ಪತ್ರಿಕೆ,ಸಿನೆಮಾ ನಿರ್ದೇಶನ ಹೀಗೆ ನಡೆದಂತೆಲ್ಲಾ ದಾರಿಗಳು
ನಡೆದ ದಾರಿಯಗುಂಟ ಬರೀ ಮುಳ್ಳುಗಳೇ ಹಸನಾದವಲ್ಲ ಈ ಲಂಕೇಶ

ಯಾರಿಗೂ ಅಂಜಲಿಲ್ಲ ಅಳುಕಲಿಲ್ಲ ಯಾರ ಬಿಢೆಗೂ ಬೀಳಲಿಲ್ಲ
“ಹೊನ್ನಸಿರಿ”ಕರ್ನಾಟಕಕ್ಕೆ ಹೊಸ ಮನ್ವಂತರ ಸೃಷ್ಟಿಸಿದರಲ್ಲ ಈ ಲಂಕೇಶ

******************************

Taking Lankesh legacy forward

Leave a Reply

Back To Top