ಮಕ್ಕಳ ದಿನ

ಅಣ್ಣ ಬಾರಣ್ಣ

ಸಿಂದು ಭಾರ್ಗವ್

ಅಣ್ಣ ಅಣ್ಣ ನನ್ನ ಜೊತೆಗೆ ಆಡಲು ಬಾರಣ್ಣ
ಬ್ಯಾಟು ಬಾಲು ತಂದು ಇಡುವೆನು ಬೇಗ ಬಾರಣ್ಣ
ಸ್ಕೂಲ್ ಗೆ ಹೋಗುವೆ ನನ್ನನು ಬಿಟ್ಟು ಏಕೆ ಹೇಳಣ್ಣ
ತಿರುಗಿ ಬರುವ ತನಕ ಕಾಯುವೆ ನಿನ್ನೀ ಹಾದಿಯನ್ನ

ಅಣ್ಣ ಅಣ್ಣ ನನ್ನ ಜೊತೆಗೆ ಅಂಗಡಿಗೆ ಬಾರಣ್ಣ
ಮಿಠಾಯಿ ಕೊಡಿಸು ಆಟಿಕೆ ಕೊಡಿಸು ಎಂದು ಕೇಳೆನಣ್ಣ.
ನಿನ್ನ ಕೈಹಿಡಿದೇ ಸಾಗುವೆ ಪೂರ ಬೀದಿಯನ್ನ

ಅಣ್ಣ ಅಣ್ಣ ನನ್ನ ಜೊತೆಗೆ ಊಟಕೆ ಬಾರಣ್ಣ
ನಾನೊಂದು ತುತ್ತು ನೀನೊಂದು ತುತ್ತು ಊಟವ ಮಾಡೋಣ‌
ಅಣ್ಣ ಬೇಗ ಬಾರಣ್ಣ ತಟ್ಟೆ ಹಾಕಿ ಕಾಯುತಲಿರುವೆ ನಾ.

———————-

Leave a Reply

Back To Top