ಗಜಲ್
(ಸಂಪೂರ್ಣ ಮತ್ಲಾ ಗಜಲ್)
ಸಿದ್ಧರಾಮ ಹೊನ್ಕಲ್


ಮನಸ್ಸೇಕೋ ಮತ್ತೆ ನೊಂದು ಮೌನದಿ ಕಮರಿಹೋಗಿದೆ
ಯಾಕೋ ಸುಮ್ಮನೇ ಮನಸಲ್ಲೆ ಬೆಂದು ಲೀನವಾಗಿದೆ
ಯಾಕೆ ಏನು ಯಾರಿಗಾಗಿ ಇದೆಲ್ಲ ಒಂದು ತಿಳಿಯದಾಗಿದೆ
ಕಾರಣವಿಲ್ಲದೇ ಸಂಕಟ ಆಗುವದೇಕೋ ಅರಿಯದಾಗಿದೆ
ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರುಚಿ ಸಿಗದಾಗಿದೆ
ಭರಪುರ ಬೆಳೆದ ರೈತನ ಫಸಲು ಹೊಲವೇ ಕದ್ದಂತಾಗಿದೆ
ಬಿತ್ತುವದು ಅವನ ಧರ್ಮ ಬೆಳೆ ಪಡೆವುದು ಕರ್ಮವಾಗಿದೆ
ಉಂಡು ಕೊಂಡು ಹೋದ ಲಂಡರದೇ ಬಲು ಹಿತವಾಗಿದೆ
ಕೊಚ್ಚೆಯಲ್ಲಿ ಬಿದ್ದ ಮಾಣಿಕ್ಯಕ್ಕೆ ತನ್ನ ಬೆಲೆ ತಿಳಿಯದಾಗಿದೆ
ಹೊನ್ನಸಿರಿ’ ಇರಲಿ ನೋಯಬೇಡ ಈ ಭೂಮಿ ಗುಂಡಾಗಿದೆ
*****************************
ಸುಂದರ ಗಜಲ್
ತುಂಬಾ ಚೆನ್ನಾಗಿದೆ