ಅಂಕಣ ಬರಹ02

ಶಾಂತಿ ವಾಸು

All India Radio - Wikipedia

ಹೋದ ಅಂಕಣದಲ್ಲಿ ರೇಡಿಯೋ ನಮ್ಮ ಜೀವನವನ್ನು ಆಕ್ರಮಿಸಿದ ಕಾಲ ಹಾಗೂ ರೀತಿಯನ್ನು ನೋಡಿದೆವು. ನಮ್ಮನ್ನು ಆಧುನಿಕ ಕಾಲದ ಪ್ರತಿನಿಧಿಗಳನ್ನಾಗಿಸಿದ ರೇಡಿಯೋ ಬಗ್ಗೆ ಈಗ ಇನ್ನಷ್ಟು ವಿಷಯಗಳನ್ನು ತಿಳಿಯೋಣ ಬನ್ನಿ. ಸಂಶೋಧನೆಗಾಗಿ ನೋಬಲ್ ಪ್ರಶಸ್ತಿ ಪಡೆದ ಇಟಲಿಯ  ಗೂಗ್ಮಿಯೆಲ್ಮೋ ಮಾರ್ಕೋನಿಯಿಂದ 1885 ರಲ್ಲಿ ತಂತಿರಹಿತ ಸಂದೇಶ ರವಾನಿಸುವ ಮೂಲಕ ಕಂಡುಹಿಡಿಯಲ್ಪಟ್ಟ ರೇಡಿಯೋ ಎಂಬ ಒಂದು ಅದ್ಭುತವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ ಭೌತವಿಜ್ಞಾನಿ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ, ದೂರಸಂಪರ್ಕ ಹಾಗೂ ರೇಡಿಯೋ ವಿಜ್ಞಾನಿ ಸರ್. ಜಗದೀಶ್ ಚಂದ್ರ ಬೋಸ್ ಅವರ ಕೊಡುಗೆ ರೇಡಿಯೋ ಹಾಗೂ ದೂರ ಸಂಪರ್ಕದ ಬೆಳವಣಿಗೆಯಲ್ಲಿ ಅತ್ಯಂತ ಮಹತ್ತರವಾದದ್ದು. ಭಾರತ ಕಂಡ ಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರಾದ ಹಾಗೂ ತಮ್ಮ ಸಂಶೋಧನೆಗಳಿಗೆ ಅಗತ್ಯವಾದ ಉಪಕರಣಗಳನ್ನು ತಾವೇ ಸ್ವತಃ ಕಂಡು ಹಿಡಿದುಕೊಂಡಿದ್ದ ಮಹಾಜ್ಞಾನಿ, ಅಧ್ಯಾತ್ಮ ಚಿಂತಕ, ನಮ್ಮ ಭಾರತದ ಹೆಮ್ಮೆಯ ಪುತ್ರ “ಜ್ಞಾನ ಯಾರ ಸ್ವತ್ತೂ ಅಲ್ಲ. ಅವರವರ ಶ್ರಮದ ಪ್ರತಿಫಲ ಅವರವರಿಗೆ” ಎಂದು ಜಗತ್ತಿಗೆ ಸಾರಿದ, ಪ್ರತಿಷ್ಠಿತ ನೈಟ್ ಹುಡ್ ಪ್ರಶಸ್ತಿಯೊಂದಿಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿ, ಕಲ್ಕತ್ತಾದಲ್ಲಿ “ಬೋಸ್ ಇನ್ಸ್ಟಿಟ್ಯೂಟ್” ಆರಂಭಿಸಿದ ನಮ್ಮ ಭಾರತದ ಹೆಮ್ಮೆಯ ಸಸ್ಯ ವಿಜ್ಞಾನಿ ಇವರು ಎಂಬುದು ಹೆಮ್ಮೆ ಪಡತಕ್ಕ ವಿಷಯ.

10 FM towers to come up along Indo-Nepal border: SSB | India.com

ರೇಡಿಯೋದ ಕಾರ್ಯವಿಧಾನ, ಉಪಯೋಗಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸಲುವಾಗಿ 1932ರಲ್ಲಿ ಮಂಗಳೂರಿನ ವಿದ್ವಾನ್. ಹೊಸಬೆಟ್ಟು ರಾಮರಾವ್ ಅವರು “ಆಕಾಶವಾಣಿ” ಎಂಬ ಹೆಸರಿನ ಸುಮಾರು 20 ಪುಟಗಳ ಒಂದು ಪುಸ್ತಕವನ್ನು ಬರೆದಿದ್ದರು

Doordarshan brings back old classics & my favourite DD1 shows | by  The_Marketing_Mane | Medium

.

ಮೈಸೂರು ವಿಶ್ವವಿದ್ಯಾನಿಲಯದ ಮನಃಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾಕ್ಟರ್ ಎಂ.ವಿ.ಗೋಪಾಲಸ್ವಾಮಿಯವರು ದೇಶಕ್ಕೆ ಹೊಸತನ್ನು ಪರಿಚಯಿಸುವ ಸಲುವಾಗಿ ಲಂಡನ್ನಿನಿಂದ ಕಡಿಮೆ ವಿದ್ಯುತ್ ಬಳಕೆಯ “ಟಾಲ್” ಎಂಬ ಟ್ರಾನ್ಸಮೀಟರನ್ನು ತಂದು 1935 ಸೆಪ್ಟೆಂಬರ್ 10ರಂದು, ರಾಷ್ಟಕವಿ ಕುವೆಂಪುರವರಿಂದ ಕವನವಾಚನ ಮಾಡಿಸುವ ಮೂಲಕ ಭಾರತ ದೇಶದ ಮೊದಲ ಬಾನುಲಿ ಕೇಂದ್ರವನ್ನು ಮೈಸೂರಿನ ತಮ್ಮ ವಿಠ್ಠಲವಿಹಾರ ಮನೆಯಲ್ಲಿ ಸ್ಥಾಪಿಸಿದರು. ಆಗಿನ ಮೈಸೂರಿನ ಮಹಾರಾಜರು ಸ್ವತಃ ಕಾಲೇಜಿನ ಅಸೆಂಬ್ಲಿಯಲ್ಲಿ ಹಾಜರಿದ್ದು ಅದನ್ನು ಆಲಿಸಿದ್ದರು ಎಂಬುದು ವಿಶೇಷ. ಬಾನಿನಿಂದ ತರಂಗಗಳು ಹೊತ್ತು ತಂದ ಉಲಿಯನ್ನು ರೇಡಿಯೋದಲ್ಲಿ ಕೇಳಬಹುದಾದ ಅದ್ಭುತವನ್ನು ಅಂದಿನ ಮೈಸೂರು ಆಕಾಶವಾಣಿ ಸಹಾಯಕ ನಿರ್ದೇಶಕ, ಸಾಹಿತಿ ನಾ. ಕಸ್ತೂರಿಯವರು “ಆಕಾಶವಾಣಿ” ಎಂದು ಕರೆದರು.

Doordarshan ||dd1|| doordarshan network || dd national - YouTube

ಭಾನುವಾರ ಹೊರತು ಪಡಿಸಿ, ಮಿಕ್ಕ ದಿನಗಳಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಬಾನುಲಿ ಭಾಷಣವನ್ನು ಪ್ರಸಾರ ಮಾಡುತ್ತಿದ್ದ ಬಾನುಲಿ ಕೇಂದ್ರವನ್ನು ಸ್ವಾತಂತ್ರ್ಯಾ ನಂತರ ಅಂದರೆ 1950 ರಲ್ಲಿ ಸಂವಿಧಾನ ಅಳವಡಿಕೆಯೊಂದಿಗೆ ದೇಶದ ಎಲ್ಲ ಪ್ರಸಾರ ಸೇವೆಗಳನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡಿಸಲಾಯಿತು. ಹಾಗೂ 1956 ರಲ್ಲಿ ಕೇಂದ್ರಸರ್ಕಾರವು “ಆಕಾಶವಾಣಿ” ಎಂಬ ಹೆಸರನ್ನೇ ಅಧಿಕೃತವಾಗಿ ಘೋಷಣೆ ಮಾಡಿತು.

ದಾಖಲೆಗಳ ಪ್ರಕಾರ 1954 ರಲ್ಲಿ ಭಾರತದ ಮೊದಲ ವ್ಯಾಪಾರಿ ರೇಡಿಯೋ ಅಂದರೆ ಆಂಟೆನೋ ಇದ್ದ ಕಮರ್ಷಿಯಲ್ ಟ್ರಾನ್ಸಿಸ್ಟರ್  ಮಾರಾಟವಾಯಿತು. ಇದನ್ನು ಹೋದ ಕಡೆಯಲ್ಲೆಲ್ಲ ಹೊತ್ತು ಹೋಗಬಹುದಾದರಿಂದ, ಹಾಗೂ ದರದ ದೃಷ್ಟಿಯಿಂದ ಅಗ್ಗವಾಗಿದ್ದ ಟ್ರಾನ್ಸಿಸ್ಟರ್ ಎಂಬುದು ಆ ದಿನಗಳಲ್ಲಿ ಒಂದು ಮನರಂಜನಾ ವಸ್ತುವಾಗಿ ಬಹುದೊಡ್ಡ ಮಾರುಕಟ್ಟೆಯೊಂದಿಗೆ ಬಹು ಜನಪ್ರಿಯತೆಯ ಕೇಂದ್ರ ಬಿಂದುವಾಯಿತು. ಪೂರ್ಣ ಪ್ರಮಾಣದಲ್ಲಿ ವಾಣಿಜ್ಯ ದೃಷ್ಟಿಯಿಂದ ಆರಂಭವಾದ ರೇಡಿಯೋ ಎಂಬ ಆ ಕಾಲದ ಆಧುನಿಕ ತಂತ್ರಜ್ಞಾನವು, ಜಾಹೀರಾತು ಪ್ರಪಂಚಕ್ಕೆ ಭದ್ರವಾದ ಅಡಿಗಲ್ಲನ್ನು ನೆಟ್ಟಿತು.

ಜಾಹೀರಾತುಗಳನ್ನು ಕೇವಲ ಕೇಳಬಹುದಾಗಿದ್ದ ಆ ಕಾಲಘಟ್ಟದಲ್ಲಿ ಆಲ್ ಇಂಡಿಯಾ ರೇಡಿಯೋ (A.I.R)ದ ಭಾಗವಾಗಿ 1959ರಲ್ಲಿ ದೂರದರ್ಶನವನ್ನು ಆರಂಭಿಸಲಾಯಿತು. ಇದು ಕೂಡ ವಾಣಿಜ್ಯ ದೃಷ್ಟಿಯಿಂದಲೇ ಸ್ಥಾಪಿತವಾದದ್ದೆಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಹಾಗಾಗಿ ಮೊದಲೇ ಹೇಳಿದ ಜಾಹೀರಾತಿನೊಂದಿಗೆ ದೂರದರ್ಶನದಲ್ಲಿ ಡಾಬರ್ ಚವನ್ ಪ್ರಾಶ್, ನಿರ್ಮಾ ವಾಷಿಂಗ್ ಪೌಡರ್ ವಿಕೋ ಟರ್ಮರಿಕ್ ಕ್ರೀಮ್, ಲಿರಿಲ್ ಸೋಪು ಹಾಗೂ ಸಿಯಾರಾಂ ಸೂಟಿಂಗಿನ ಜಾಹೀರಾತು ಕೂಡ ಸೇರಿಕೊಂಡದ್ದು ಹೌದಲ್ಲವೇ?

ಆಗಿನ ಜನರಿಗೆ ಆದ ಹೊಸ ಹೊಸ ಅವಿಷ್ಕೃತ ವಸ್ತುಗಳ ಪರಿಚಯ, ನೋಡುವ ಮುಟ್ಟುವ ಉತ್ಸಾಹ,  ಉಪಯೋಗಿಸುವಾಗಿನ ಪುಳಕ ಈಗೊಂದೂ ಇಲ್ಲ. ಏಕೆಂದರೆ ಕೆಲವೇ ಕೆಲವನ್ನು ಹೊರತುಪಡಿಸಿ ಮಿಕ್ಕೆಲ್ಲವೂ ಆಗಿನದ್ದರ ಸುಧಾರಿತ ವ್ಯವಸ್ಥೆ ಹಾಗೂ ರೂಪಾಂತರ ಅಷ್ಟೇ ಆಗಲೀ ಯಾವುದೂ ಹೊಸತಲ್ಲ.  ಶ್ರೀಸಾಮಾನ್ಯರಿಗಾಗಿಯೇ, ರೇಡಿಯೋಗಳ ನಿಗದಿತ ಕಾರ್ಯಕ್ರಮಗಳ ಏಕತಾನತೆಯನ್ನು ಹೋಗಲಾಡಿಸವ ಸಲುವಾಗಿ, ಸುಧಾರಿತ ಹಾಗೂ ಉತ್ತಮಗುಣಮಟ್ಟದ ಕಾರ್ಯಕ್ರಮ ರೂಪಿಸುವ ಹಾಗೂ ಸರ್ಕಾರದ ವರಮಾನವನ್ನು ಹೆಚ್ಚುಮಾಡುವ ಹೆಚ್ಚು ಸ್ಪಷ್ಟತೆಯ ಎಫ್. ಎಂ (frequency modulation ಆವರ್ತನ ಮಾಡ್ಯುಲೇಶನ್) ಕೇಂದ್ರಗಳು ಸ್ಥಾಪಿತವಾದವು. MHz(ಮೆಗಾಹರ್ಡ್ಜ್) ತರಂಗಾಂತರದ ಮೇಲೆಯೇ ಇಂದಿಗೂ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ ಎಫ್.ಎಂ. ರೇಡಿಯೋಗಳು ಹಾಗೂ ದೂರದರ್ಶನದ ಹಲವಾರು ಚಾನೆಲ್ಲುಗಳಿಗೆ ಜಾಹೀರಾತುಗಳಿಂದ ಬರುವ ಹಣವೇ ಜೀವಾಳ ಹಾಗೂ ಹಿರಿಮೆ.

********************************************************

Leave a Reply

Back To Top