ನಂಬಿಕೆ : ಮರು ಪ್ರಶ್ನೆ

ಸಣ್ಣ ಕಥೆ

 ನಂಬಿಕೆ : ಮರು ಪ್ರಶ್ನೆ

ರೇಷ್ಮಾ ನಾಯ್ಕ, ಶಿರಸಿ

ಯಾರು ಒಳ್ಳೆ ಕೆಲ್ಸ ಮಾಡ್ತಾರೋ ಅವ್ರ ಪರ ದೇವ್ರು ನಿಂತಿರ್ತಾನೆ ಯಾವುದೇ ರೀತಿಲಿ ಸಮಸ್ಯೆಗಳಿಗೆ ಪರಿಹಾರಾನೂ ಸೂಚಿಸುತ್ತಾನೆ ಎಂದ ಮಾತಿಗೆ; 

ಮಗಳು ,

” ಹಾಗಾದ್ರೆ ಜಗತ್ತಿಗೆ ಕರೋನ ಬಂದಿದೆ ಇಷ್ಟೆಲ್ಲ ಕಷ್ಟ ಪಡ್ತಿದೀವಿ ಶಾಲೆಗೂ ಹೋಗೋಕಾಗ್ತಿಲ್ಲ  ಯಾಕಮ್ಮ ದೇವ್ರು ಪರಿಹಾರಾನೇ ಸೂಚಿಸ್ತಿಲ್ಲ?”  ಎಂದಳು.

ಕಂದಾ,

” ದೇವ್ರು ಅನ್ನೋದು ಒಂದು ನಂಬಿಕೆ , ಧೈರ್ಯ. “

ನಿಂಗೆ ಜ್ವರ ಬಂದಾಗ ಹೆದ್ರಬೇಡ ನಾವ್ ನಿಂಜೊತೆಗೆ ಇರ್ತೀವಿ. ಹಾಸ್ಪಿಟಲ್ ಗೂ ಹೋಗ್ಬಂದಿವಿ. ನಿಂಗೇನು ಆಗಲ್ಲ ಅಂದಾಗ ;  ನಿಂಗೆ ಬಂದಿರೋ ಜ್ವರ ಸ್ವಲ್ಪ ಕಡಿಮೆ ಆದ ಹಾಗೆ ಅನ್ನಿಸುತ್ತಲ್ಲ….

 ಹಾಗೆ, ಮತ್ತೂ

ಇಲ್ಲಿ ”  ಜ್ವರ ಕಡಿಮೆ ಯಾಗದಿದ್ರೂ ನಾವ್ ಕೊಡೊ ಭದ್ರತೆ ಕೆಲ್ಸ ಮಾಡುತ್ತೆ ” ಎಂದೆ

ಹಾಗಾದ್ರೆ , ಒಂದ್ ಕೆಲ್ಸ ಮಾಡ್ತಿನಮ್ಮ ;  ” ದೇವಸ್ಥಾನಕ್ಕೆ ನಾವಿಬ್ಬರೂ ಹೋದ ಹಾಗೆ.. ಚಿತ್ರ ಬಿಡಿಸ್ತಿನಮ್ಮ …

ಆಗ ನಾವು ಅಲ್ಲಿಗೆ ಹೋದ ಹಾಗೆ ….

ಯಾಕಂದ್ರೆ ದೇವ್ರು ಮನಸಿನ ನಂಬಿಕೆ ಅಲ್ವಾ ”  ಅಂದಳು

ಈಗ

ಉತ್ತರಿಸಲಾಗದೆ ತಡವರಿಸುವ ಸರದಿ ನನ್ನದಾಯ್ತು..

*******************************************

Leave a Reply

Back To Top