ಗಝಲ್

ಗಝಲ್

ನೂರುಲ್ಲಾ ತ್ಯಾಮಗೊಂಡ್ಲು

brown leather boots

ನಿನ್ನ ಶಹರಿನಲಿ ಬೆಳಕಿಗೆ ಕಾಲು ಮೂಡಿದಾಗ ನೀನಿದ್ದೆ
ಆ ಬೃಂದಾವನದಲಿ ದುಂಬಿ ಮಕರಂದ ಹುಡುಕುವಾಗ ನೀನಿದ್ದೆ

ಕಣ್ಣ ಕೊಂಬೆಯ ಮೇಲೆ ನಕ್ಷತ್ರ ಮಿನುಗುವ ಹೊತ್ತು
ಭರವಸೆಯ ಕಿರಣವೊಂದು ರೆಪ್ಪೆ ಮೇಲೆ ಹರಿದಾಗ ನೀನಿದ್ದೆ

ಯಾವುದೊ ವಿಳಾಸವಿಲ್ಲದ ದಾರಿಯಲಿ ಕಾಲುಗಳು ಎಡವಿದವು ನಿಜ
ಆದರೆ ನೀ ಹೊರಳಿ ಹೋಗಿದ್ದ ದಾರಿಯಲಿ ಅತ್ತರು ಘಮಿಸಿದಾಗ ನೀನಿದ್ದೆ

ಯಾವುದದು ಮರೆಮಾಚುವ ವಚನ ಕಾಡಿತ್ತೊ ಅರಿಯೆ
ಆದರೂ ನಿನ್ನ ಆ ಮರೆಮಾಚಿಕೆ ವಿಫಲವಾದಾಗ ನೀನಿದ್ದೆ

ಗೊತ್ತು ನಿರೀಕ್ಷೆಗಳೆಲ್ಲ ಹುಸಿಯಾಗದು ಎಂದೂ ‘ಸಾಘರ್’
ಕಾಡುವಿಕೆಗೂ ಒಂದು ಮಿತಿಯಿದೆ ಅದು ಖಚಿತವಾದಾಗ ನೀನಿದ್ದೆ

*******************************************

One thought on “ಗಝಲ್

Leave a Reply

Back To Top