ಹಿಮಾಲಯ ಪರ್ವತ ಶ್ರೇಣಿಗಳು”

ಲೇಖನ

ಹಿಮಾಲಯ ಪರ್ವತ ಶ್ರೇಣಿಗಳು”

ಆಶಾ ಸಿದ್ದಲಿಂಗಯ್ಯ

group of children standing near house

ಸಿಂಧೂ ನದಿಯ ಬಯಲಿನಲ್ಲಿ ಸಂಸ್ಕೃತಿ ರೂಪುಗೊಳ್ಳುವ ಮೊದಲೇ ಗೊಂಡಿ ಭಾಷೆಯಿತ್ತು ಎನ್ನುವ ಮಾತು ಹೆಚ್ಚು ಮುಖ್ಯವಾಗುತ್ತದೆ. ಹಲವು ಲಕ್ಷ ವರ್ಷಗಳ ಹಿಂದೆ ಈಗಿನ ದಕ್ಷಿಣ ಅಮೆರಿಕ, ದಕ್ಷಿಣ ಆಫ್ರಿಕಾ, ಏಷ್ಯಾ ಖಂಡದ ದಕ್ಷಿಣ ಭಾಗ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಅಂಟಾರ್ಟಿಕಾಗಳು ಕೂಡಿದ್ದ ಭೂಭಾಗವಿತ್ತು. ಅದನ್ನು ಗೊಂಡ್ವಾನ ಎಂದು ಕರೆಯುತ್ತಿದ್ದರು. ಭಾರತದ ವಿಂಧ್ಯ ಪರ್ವತ ಶ್ರೇಣಿಯ ದಕ್ಷಿಣ ಭಾಗ ಅಂದರೆ ದಕ್ಷಿಣ ಭಾರತದ ಪ್ರಸ್ಥಭೂಮಿ ಗೊಂಡ್ವಾನ ಪ್ರದೇಶದ ಭಾಗವಾಗಿತ್ತು.

ಅಲ್ಲಿ ವಾಸಿಸುತ್ತಿದ್ದ ಗೊಂಡರು ಸಿಂಧೂ ನದಿ ಬಯಲಿನ ನಾಗರಿಕತೆಯ ಜನರಿಗಿಂತ ಹಿಂದಿನವರು. ಅವರು ಆಡುತ್ತಿದ್ದ ಭಾಷೆ ದ್ರಾವಿಡ ವರ್ಗಕ್ಕೆ ಸೇರಿತ್ತು. ಅದು ಈಗಲೂ ಬಳಕೆಯಲ್ಲಿದೆ ಎಂಬುದು ಕುತೂಹಲದ ವಿಚಾರ.

ಹಿಮಾಲಯ ಭೂಮಿಯ ಅತ್ಯಂತ ನವೀನ ಪರ್ವತ ಶ್ರೇಣಿಗಳಲ್ಲಿ ಒಂದು. ಸುಮಾರು ೨೫ ಕೋಟಿ ವರ್ಷಗಳ ಹಿಂದೆ “ಪ್ಯಾಂಜಿಯ” ಭೂಭಾಗ ಒಡೆದು ಇಂಡೋ-ಆಸ್ಟ್ರೇಲಿಯನ್ ಭೂಭಾಗ ಯೂರೇಷ್ಯನ್ ಭೂಭಾಗದತ್ತ ತೇಲಲಾರಂಭಿಸಿತು. ಸುಮಾರು ೪-೭ ಕೋಟಿ ವರ್ಷಗಳ ಹಿಂದೆ ಈ ಎರಡು ಭೂಭಾಗಗಳು ಒಂದಕ್ಕೊಂದು ಗುದ್ದಿದಾಗ ಹಿಮಾಲಯ ಪರ್ವತಗಳು ಸೃಷ್ಟಿಯಾದವು. ಸುಮಾರು ೨-೩ ಕೋಟಿ ವರ್ಷಗಳ ಹಿಂದೆ ಇಂದಿನ ಭಾರತದ ಪ್ರದೇಶದಲ್ಲಿದ್ದ ಟೆತಿಸ್ ಸಾಗರ ಸಂಪೂರ್ಣವಾಗಿ ಮುಚ್ಚಿ ಹೋಯಿತು

.

ಇಂಡೋ-ಆಸ್ಟ್ರೇಲಿಯನ್ ಭೂಭಾಗ ಇಂದಿಗೂ ನಿಧಾನವಾಗಿ ಟಿಬೆಟ್ ಭೂಭಾಗದ ಅಡಿಯಲ್ಲಿ ಚಲಿಸುತ್ತಿದೆ (ಸುಮಾರು ವರ್ಷಕ್ಕೆ ೨ ಸೆಮೀ), ಮತ್ತು ಮುಂದಿನ ಕೋಟಿ ವರ್ಷಗಳಲ್ಲಿ ಸುಮಾರು ೧೮೦ ಕಿಮೀ ನಷ್ಟು ಚಲಿಸಿರುತ್ತದೆ! ಈ ಚಲನೆಯಿಂದ ಹಿಮಾಲಯ ಶ್ರೇಣಿ ವರ್ಷಕ್ಕೆ ಅರ್ಧ ಸೆಮೀ ನಷ್ಟು ಬೆಳೆಯುತ್ತಿದೆ. ಇದೇ ಚಲನೆಯಿಂದ ಈ ಪ್ರದೇಶ ಸಾಕಷ್ಟು ಭೂಕಂಪಗಳನ್ನು ಸಹ ಕಂಡಿದೆ.

ಹಿಮಾಲಯ ಶ್ರೇಣಿ ಪಶ್ಚಿಮದಲ್ಲಿ “ನಂಗಾ ಪರ್ಬತ್” ಇಂದ ಪೂರ್ವದಲ್ಲಿ “ನಾಮ್ಚೆ ಬರ್ವಾ” ದ ವರೆಗೆ ಸುಮಾರು ೨೪೦೦ ಕಿಮೀ ಉದ್ದವಿದೆ. ಅಗಲ ೨೫೦-೩೦೦ ಕಿಮೀ.

ಹಿಮಾಲಯ ಶ್ರೇಣಿಯಲ್ಲಿ ಸಮಾನಾಂತರವಾಗಿ ಸಾಗುವ ಮೂರು ವಿಭಿನ್ನ ಶ್ರೇಣಿಗಳನ್ನು ಕಾಣಬಹುದು:

“ಉಪ-ಹಿಮಾಲಯ”: ಇದನ್ನು ಭಾರತದಲ್ಲಿ “ಶಿವಾಲಿಕ್ ಹಿಲ್ಸ್ “ಎಂದು ಕರೆಯಲಾಗುತ್ತದೆ. ಈ ಶ್ರೇಣಿ ಅತ್ಯಂತ ಇತ್ತೀಚೆಗೆ ಸೃಷ್ಟಿಯಾದದ್ದು ಮತ್ತು ಸರಾಸರಿ ೧೨೦೦ ಮೀ ಎತ್ತರ ಹೊಂದಿದೆ. ಮುಖ್ಯವಾಗಿ, ಇನ್ನೂ ಬೆಳೆಯುತ್ತಿರುವ ಹಿಮಾಲಯ ಪರ್ವತಗಳಿಂದ ಜಾರುವ ಭೂಭಾಗದಿಂದ ಈ ಶ್ರೇಣಿ ಸೃಷ್ಟಿಯಾಗಿದೆ.

“ಕೆಳಗಿನ ಹಿಮಾಲಯ”: ಸರಾಸರಿ ೨೦೦೦-೫೦೦೦ ಮೀ ಎತ್ತರವಿದ್ದು ಇದು ಭಾರತದ ಹಿಮಾಚಲ ಪ್ರದೇಶ, ನೇಪಾಳದ ದಕ್ಷಿಣ ಪ್ರದೇಶಗಳ ಮೂಲಕ ಸಾಗುತ್ತದೆ. ಡಾರ್ಜೀಲಿಂಗ್, ಶಿಮ್ಲಾ, ನೈನಿತಾಲ್, ಮೊದಲಾದ ಭಾರತದ ಅನೇಕ ಪ್ರಸಿದ್ಧ ಗಿರಿಧಾಮಗಳು ಈ ಶ್ರೇಣಿಯಲ್ಲಿಯೇ ಇರುವುದು.

“ಮೇಲಿನ ಹಿಮಾಲಯ”: ಈ ಶ್ರೇಣಿ ಎಲ್ಲಕ್ಕಿಂತ ಉತ್ತರದಲ್ಲಿದ್ದು ನೇಪಾಳದ ಉತ್ತರ ಭಾಗಗಳು ಮತ್ತು ಟಿಬೆಟ್ ನ ದಕ್ಷಿಣ ಭಾಗಗಳ ಮೂಲಕ ಸಾಗುತ್ತದೆ. ೬೦೦೦ ಮೀ ಗಿಂತಲೂ ಹೆಚ್ಚಿನ ಸರಾಸರಿ ಎತ್ತರವನ್ನು ಹೊಂದಿರುವ ಈ ಶ್ರೇಣಿ ಪ್ರಪಂಚದ ಅತಿ ಎತ್ತರದ ಮೂರು ಶಿಖರಗಳನ್ನು ಒಳಗೊಂಡಿದೆ – ಎವರೆಸ್ಟ್, ಕೆ-೨, ಮತ್ತು ಕಾಂಚನಗಂಗಾ.

ಹವಾಮಾನದ ಮೇಲಿನ ಪ್ರಭಾವ

ಭಾರತೀಯ ಉಪಖಂಡ ಮತ್ತು ಟಿಬೆಟ್ ಪ್ರಸ್ಥಭೂಮಿಗಳ ಹವಾಮಾನದ ಮೇಲೆ ಹಿಮಾಲಯ ಶ್ರೇಣಿ ಆಳವಾದ ಪ್ರಭಾವವನ್ನು ಬೀರುತ್ತದೆ. ಆರ್ಟಿಕ್ ಪ್ರದೇಶದಿಂದ ಚಳಿ ಗಾಳಿ ಭಾರತದೊಳಕ್ಕೆ ಬೀಸುವುದನ್ನು ಹಿಮಾಲಯ ಶ್ರೇಣಿ ತಡೆಯುತ್ತದೆ. ಇದರಿಂದಾಗಿ ದಕ್ಷಿಣ ಏಷ್ಯಾ – ಟಿಬೆಟ್ ಮೊದಲಾದ ಪ್ರದೇಶಗಳಿಗಿಂತ ಬೆಚ್ಚಗಿರುತ್ತದೆ. ಹಾಗೆಯೇ ಮಾನ್ಸೂನ್ ಮಾರುತಗಳನ್ನು ತಡೆದು ಭಾರತದ ಪೂರ್ವ ರಾಜ್ಯಗಳಲ್ಲಿ (ಮಿಜೋರಂ, ಮೇಘಾಲಯ, ಇತ್ಯಾದಿ) ಬಹಳಷ್ಟು ಮಳೆಯಾಗುವಂತೆ ಮಾಡುತ್ತದೆ.

ಮಾನ್ಸೂನ್ ಮಾರುತಗಳು ಹಿಮಾಲಯವನ್ನು ದಾಟಲಾಗದೆ ಇರುವುದೂ ಸಹ ಟಿಬೆಟ್/ಚೀನಾಗಳಲ್ಲಿನ ಗೋಬಿ ಮರುಭೂಮಿ ಮತ್ತು ತಕ್ಲಮಕಾನ್ ಮರುಭೂಮಿಗಳ ಸೃಷ್ಟಿಗೆ ಒಂದು ಕಾರಣ ಎಂದು ಊಹಿಸಲಾಗಿದೆ. ಚಳಿಗಾಲದಲ್ಲಿ ಪಶ್ಚಿಮದ ಇರಾನ್‍ನ ಕಡೆಯಿಂದ ಉಂಟಾಗುವ ಹವಾಮಾನದ ಪ್ರಕ್ಷುಬ್ಧತೆಗಳನ್ನು ಈ ಶ್ರೇಣಿಗಳು ಮುನ್ನುಗ್ಗದಂತೆ ತಡೆಯುತ್ತವೆ.

ಈ ರೀತಿಯ ತಡೆಯುವಿಕೆಯಿಂದಾಗಿ ಕಾಶ್ಮೀರದಲ್ಲಿ ಹಿಮಪಾತವುಂಟಾಗುತ್ತದೆ ಹಾಗೂ ಉತ್ತರ ಭಾರತದ ಮತ್ತು ಪಂಜಾಬ್‍ನ ಕೆಲವು ಭಾಗಗಳಲ್ಲಿ ಮಳೆ ಬೀಳುತ್ತದೆ. ಹಿಮಾಲಯ ಶ್ರೇಣಿಗಳು ಉತ್ತರದಿಂದ ಆರ್ಕ್‍ಟಿಕ್ ಕಡೆಯಿಂದ ಬೀಸುವ ಚಳಿಗಾಳಿಯನ್ನು ಬಹುಮಟ್ಟಿಗೆ ತಡೆದರೂ, ಬ್ರಹ್ಮಪುತ್ರ ಕಣಿವೆಯಲ್ಲಿ ಈ ಚಳಿಗಾಳಿಯ ಸ್ವಲ್ಪ ಪಾಲು ನುಸುಳಿ ಬರುತ್ತದೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಮತ್ತು ಭಾರತದ ಈಶಾನ್ಯ ರಾಜ್ಯಗಳಲ್ಲಿ ಚಳಿಗಾಲದ ಉಷ್ಣತೆ ಸಾಕಷ್ಟು ಮಟ್ಟಿಗೆ ಕೆಳಗಿಳಿಯುತ್ತದೆ. ಇದೇ ಗಾಳಿಯು ಈ ಈಶಾನ್ಯ ಪ್ರಾಂತ್ಯಗಳಲ್ಲಿ ಈಶಾನ್ಯ ಮುಂಗಾರನ್ನೂ ಉಂಟುಮಾಡುತ್ತದೆ.

***********************************

Leave a Reply

Back To Top