ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಕಾಫಿಯಾನ ಗಜಲ್

ಅಮೃತ ಎಂ ಡಿ

AMRUTHA MD

red heart sticker digital wallpaper

ಅಪ್ಯಾಯಮಾನ ಒಲವ ಹಂಚುವ ಸರದಿ ನನ್ನದು
ಅಭೂತಪೂರ್ವ ಸಾನಿಧ್ಯ ನೀಡುವ ಗುಣ ನಿನ್ನದು

ತುಸು ತುಂಟಾಟವ ಮರೆಮಾಚು ಲಜ್ಜೆ ಆವರಿಸುತ್ತದೆ
ನಡುವಿನ ಒನಪಿನಲ್ಲಿ ಕಾಡಿಸುವುದ ಯಾರು ಕಲಿಸಿದ್ದು.?

ಅಧರದಲ್ಲಿ ಏನು ಮಧು ಬಟ್ಟಲು ಅಡಗಿ ಕುಳಿತಿದ್ಯ..?
ಚುಂಬಿಸುವ ಪರಿಗೆ ಮೊಗವೆಲ್ಲ ಕೆಂಪೇರಿ ನಲಿಯುವುದು

ಶರಾಬಿನ ರಸವ ಹೀರಿದಂತೆ ಒಷ್ಠದಲ್ಲಿಯೂ ಇರುವುದ..?
ಪಾಪ ಮೊಗ್ಗಿನಂತೆ ಮೃದು ಆಕೆ, ಸೊರಗಿ ಬಿಟ್ಟಾದು.

ಅಮ್ಮು ಈ ಹೈದನ್ಯಾಕೋ ಬಿಡುಗಡೆ ನೀಡುವಂತಿಲ್ಲ
ಮನವು ಅವನ ಆಲಿಂಗನದಲ್ಲಿ ನಕ್ಕು ಕುಣಿಯುವುದು..

****************************************************

About The Author

6 thoughts on “ಕಾಫಿಯಾನ ಗಜಲ್”

Leave a Reply

You cannot copy content of this page

Scroll to Top