ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಜಲ್

ಪ್ರಭಾವತಿ ಎಸ್ ದೇಸಾಯಿ

black heart printed concrete wall

ಮಾದಕ ಕಣ್ಣ ನೋಟ ಕಂಡು ಚಂದಿರ ಜೋಲಿ ಹೊಡೆಯುತಿದೆ
ಈ ಸೆರಗಿನ ಚೆಲ್ಲಾಟ ನೋಡಿ ಮೋಡವು ತೇಲಾಡುತಿದೆ

ಅವಳ ದೇಹ ಮಾಟ ಅರಿತು ಶಿಲ್ಪಿ ಶಿಲೆಯಲಿ ಕಲೆ ಅರಳಿಸಿದ
ಮೈ ತುಂಬಿದ ಮದದ ರಂಗಿಗೆ ಮದರಂಗಿ ಕೆಂಪು ನಾಚಿತಿದೆ

ಒಂದಾಗಿ ಬೆಸೆದ ಮಧುರ ಗಳಿಗೆಯು ಜೊತೆಯಾಗಿದೆ ಸದಾ
ವಿಧಿಯ ಆಟ ಬಲ್ಲವರಾರು ಅಳಿಯದ ನೆನಪು ಕಾಡುತಿದೆ

ಹರೆಯದ ವಯಸ್ಸು ಅವಳ ಪಡೆಯುವ ಕನಸು ಕಾಣುತ ಕಳೆದೆ
ಆ ಯೌವನದ ದಿನಗಳನ್ನು ಮುಸ್ಸಂಜೆ ಮೆಲುಕು ಹಾಕುತಿದೆ

“ಪ್ರಭೆ”ಯನು ಮರೆಯದ ಹೃದಯ ದಹಿಸುತಿದೆ ವಿರಹ ಜ್ವಾಲೆಯಲಿ
ಮನ ಚಕೋರವಾಗಿ ಬೆಳದಿಂಗಳ ಹನಿ ಕುಡಿಯ ಬಯಸುತಿದೆ

******************************

About The Author

2 thoughts on “ಗಜಲ್”

Leave a Reply

You cannot copy content of this page

Scroll to Top