ಅನುಭವ

ಬೆಳಗಿನ ಚಹಾ ಹೀರುತ್ತಾ….

person standing on snowfield during daytime

ಎನ್.ಶಂಕರ್ ಗೌಡ

ಶರತ್ಕಾಲದ ಕಾತೀ೯ಮಾಸವಿದು. ಆರಂಭಿಕ ಚಳಿಗಾಲವಾದರೂ ನಿಧಾನವಾಗಿ ತಣ್ಣನೆಯ ಸುಳಿಗಾಳಿಯನ್ನು ಕೂಡ ತರುತ್ತದೆ.ಸಾದಾರಣ ಆಹ್ಲಾದಕರ ಹವಾಮಾನ ಹೊಂದಿದ ದಿನಗಳಿವು.
ದೈಹಿಕವಾಗಿ ಹಿಮ್ಮೆಟ್ಟಿಸುವ ಸಮಯವಿದು.ರಾತ್ರಿ ದೀರ್ಘ, ಹಗಲು ಕಡಿಮೆ.ಕೆಲವರಿಗೆ ಸೋಮಾರಿತನವನ್ನು ಹೆಚ್ಚಿಸುವ ಈ ಚಳಿಗಾಲ ,ಬೆಚ್ಚಗಿನ ನೆನಪುಗಳನ್ನು ಹೊಂದಿದವರವನ್ನು ತಂಪಾಗಿರಿಸುತ್ತದೆ. ವೃದ್ಧಾಪ್ಯರಿಗೆ ಪಾಪ ಚಳಿ ಹೊರೆಯಾದರೆ,ನವ ವಧು-ವರರಿಗೆ ವರವಿದು. ಹಿಮ ಭರಿತ ಪ್ರದೇಶಗಳು ಕವಿಗಳನ್ನು ಆಕಷಿ೯ಸುತ್ತವೆ.ಜಿ.ಪಿ.ರಾಜರತ್ನಂ ರವರ ಭೂಮಿ ತಬ್ಬಿದ್ ಮೋಡ್ ಇದ್ದಂಗೆ, ಬೆಳ್ಳಿ ಬಳಸಿದ್ ರೋಡ್ ಇದ್ದಂಗೆ…..”ಮಡಿಕೇರೀಲಿ ಮಂಜು”ಗ್ರಾಮ್ಯ ಸೊಗಡಿನ ಮನಸೆಳೆವ ಪದ್ಯ ನಾವು ಕೇಳಿದ್ದೀವಲ್ಲವೆ.

ಚಳಿಗಾಲದ ಹಿಮ ಸೂಯೋ೯ದಯವನ್ನು ಕೊಂಚ ಹೊತ್ತು ಕಾಡಿದರೂ ನಂತರ ರವಿಯ ಕಿರಣಗಳು ಎಷ್ಟೊಂದು ಬೆಚ್ಚಗಿನ ಅನುಭವ ಕೊಡುತ್ತವೆ.ನಮ್ಮ ಮನೆಯ ಮುಖ್ಯ ದ್ವಾರದಿಂದ ಬರುವ ಸೂಯೋ೯ದಯದ ಕಿರಣಗಳಿಗೆ ಮೈಯೊಡ್ಡಿ, ಕನ್ನಡ ಪತ್ರಿಕೆಯನ್ನು ಓದುತ್ತಾ..ಅಧಾ೯ಂಗಿ ಕೊಟ್ಟ ಚಹಾವನ್ನು ಹೀರುವ ಕ್ಷಣವನ್ನು ವಣಿ೯ಸಲಸಾಧ್ಯವಾದುದು.ಗೈರುಹಾಜ ರಾಗದಂತೆ ಪ್ರತಿನಿತ್ಯ ಸವಿಯಬೇಕೆನಿಸಿತು.ಕವಿ ಬೇಂದ್ರೆಯವರು “ಬೆಳಗು ಜಾವ”ಕವನದಲ್ಲಿ “ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯ ಕಣ್ಣ….. ಮಕ್ಕಳಿರ ಕೇಳಿ, ರಸ ಕುಡಿಯಲೇಳಿ, ಹುಸಿ ನಿದ್ದೆಗಿದ್ದೆ ಸಾಕು, ಈ ತುಂಬಿ ಬಾಳು ತುಂಬಿರುವ ತನಕ, ತುಂತುಂಬಿ ಕುಡಿಯಬೇಕು.. ಹೀಗೆ ಬೆಳಗಿನ ಸೌಂದರ್ಯವನ್ನು ವಣಿ೯ಸುತ್ತಾ ಸೂಯೋ೯ದಯ ಸುಂದರ ಸೊಬಗನ್ನು ಸವಿದು ಬದುಕನ್ನು ಸಾಥ೯ಕ ಪಡಿಸಿಕೊಳ್ಳಿ ಎಂದು ಕರೆ ಕೊಡುವರು.
ಈ ಸೊಬಗಿನ ಸೌಂದರ್ಯಕ್ಕೆ ಮನಸೋಲದವರಿಲ್ಲ.

ಈ ಸೌಂದರ್ಯವನ್ನು ಕೊಂಚ ಹೊತ್ತು ಬದಿಗಿಟ್ಟು ಚಳಿಗಾಲದ
ಬಾಲ್ಯದ ನೆನಪುಗಳ ಹಿಂತಿರುಗಿದರೆ ಸರಿಯಾದ ಬೆಚ್ಚಗಿನ ಹೊದಿಕೆಗಳಿಲ್ಲದೆ ನಿದ್ರೆ ಬರದೆ ಅಬ್ಬಬ್ಬಾ…ಚಳಿ ಎಂದು ನಡುಗಿ “ನಿ”ಆಕಾರದಲ್ಲಿ
ಮೈ ಮುದುರಿಕೊಂಡು ಮಲಗಿದ್ದು ಇನ್ನೂ ಅಚ್ಚ ಹಸಿರು.ತೀವ್ರ ಚಳಿಗೆ ಅಪ್ಪ ತಾಳಲಾರದೆ ಬೀಡಿಯನ್ನು ಚೂರು ಬಿಡದಂತೆ ಅಂಚಿನವರೆಗೂ ಸೇದಿ ಸೇದಿ ಬಿಸಾಡಿದ್ದು, ಅಮ್ಮ ಹಚ್ಚಿದ ಒಲೆ ಮುಂದೆ ಕೈಗಳನ್ನು ಬಿಸಿ ಮಾಡಿ ಕೆನ್ನೆಗಳನ್ನು ಬೆಚ್ಚಗೆ ಸವರಿಕೊಂಡಿದ್ದ ನೆನಪುಗಳು ಈಗಲೂ ಬೆಚ್ಚಗೆ ಕಾಡುತ್ತಲೇ ಇವೆ.

ಕೆ, ಎಸ್, ನ ರವರ “ಚಳಿಗಾಲ ಬಂದಾಗ ಎಷ್ಟು ಚಳಿ ಎಂಬರು, ಬಂತಲ್ಲಾ ಬೇಸಿಗೆ ಕೆಟ್ಟ ಬಿಸಿಲೆಂಬರು….. ಹೀಗೆ ಜೀವನಪೂತಿ೯ ನಮ್ಮ ಗೊಣಗಾಟ ವಿದ್ದದ್ದೆ ಅಲ್ಲವೇ!

ಏನೇ ಇರಲಿ ಪ್ರಕೃತಿಯ ಎಲ್ಲಾ ಕಾಲಮಾನಗಳ ಜತೆ ಹೊಂದಿಕೊಂಡು ಅದರ ಅನುಭವವನ್ನು ಸವಿದು ಬದುಕಿದಾಗಲೇ ಜೀವನಕ್ಕೆ ಒಂದು ಅಥ೯ವಿರುವುದು.

(ಭಾನುವಾರ ನಮಗೆ ಬಿಡುವಾದರೂ “ಭಾನು”ರಜೆ ಪಡೆಯುವಂತಿಲ್ಲ.ಪೂತಿ೯ ರಜೆ ಹಾಕಿದರೆ ಅದರ ಪರಿಣಾಮವೇ ಬೇರೆ)
ರಜೆ ಇದ್ದುದರಿಂದ ಬೆಳಗಿನ ಸೂಯೋ೯ದಯವನ್ನು ಸವಿಯುತ್ತಾ ಚಹಾ ಹೀರುತ್ತಾ ಒಂದಷ್ಟು ನೆನಪಿನ ಸಾಲುಗಳು.


Leave a Reply

Back To Top