ಗಝಲ್

ಗಝಲ್

ಗಝಲ್

ಕೆ.ಸುನಂದಾ.

ಸುಂದರ ವದನಕೆ ಕುಂದಾಗುವ ಬಣ್ಣ ಬಳಿಯಬೇಡ ಗೆಳೆಯ
ಅದೆಷ್ಟೋ ಅಂದದ ಕನಸುಗಳಿಗೆ ಕಲ್ಲು ಹೊಡೆಯಬೇಡ ಗೆಳೆಯ

ಸಾಧಿಸಬೇಕೆಂಬ ಹಂಬಲದಿ ಆಸರೆಯ ಎಳೆ ಹಿಡಿದಿರುವೆನು
ಕಷ್ಟಗಳಮೆಟ್ಟಿ ಕಟ್ಟಿರುವ ಭಾವಗಳ ಭವನಕೆ ಕಿಚ್ಚಾಗಬೇಡ ಗೆಳೆಯ

ಹೆಣ್ಮನ ಮೃದುವೆಂದು ಮಧುರವಾಗಿ ನುಡಿದು
ಮೋಸ ಮಾಡಿದಿರು ಹೃದಯ ಗೆದ್ದೆನೆಂಬ ಹಮ್ಮಿಂದ ಹದವಾದಮೇಲೆ ಒದೆಯಬೇಡ ಗೆಳೆಯ

ಮುನಿಯುವ ಮೊದಲು ಒಲಿದು ಬರುವಳು ಹೆಣ್ಣು ಘಾಸಿಗೊಳಿಸದಿರು
ಕೂಸಿನಂತಾಕೆ ಪೊರೆದಿಹಳು ನಿನ್ನಾಸೆಗಳನು ಮನ ನೋಯಿಸಬೇಡ ಗೆಳೆಯ

ತುಸು ಕಣ್ಣಲ್ಲಿ ಕಣ್ಣಾಗಿ ನೋಡು ಮಮತೆ ಹರಿದೀತು ನಿನ್ನೊಡಲೊಳು
ನಂದೆಯ ಆನಂದಕೆ ಮಂದಸ್ಮಿತ ಸಾಕು ನಕ್ಕು ಹಂಗಿಸಬೇಡ ಗೆಳೆಯ

***********************************

ಕೆ.ಸುನಂದಾ

One thought on “ಗಝಲ್

Leave a Reply

Back To Top