ಯುಗಾದಿ ವಿಶೇಷ ಬರಹ

ಯುಗಾದಿಯ ಸವಿ

Low Angle View of Pink Flowers Against Blue Sky

ಅಲ್ರಿ..ನನಗೊಂದು ಹೊಸ ಸೀರಿಬೇಕು.ಯಾಕಂದ್ರ ಹೊಸ ವರ್ಷದ ಸಂಭ್ರಮಕ ಎಲ್ಲವೂ ಹೊಸದಾಗಿರಬೇಕು ಅನ್ನು ತ್ತಿದ್ದರು ಅವನೇನು ತಲಿ ಕೆಡಸಿಕೊಂಡಿರಲಿಲ್ಲ. ಅಲ್ಲೆ ಕಪಾ ಟ ತುಂಬ ಇರೋ ಸಾರಿ ಮೊದಲ ಉಟ್ಟ ಹರಿ,ಆ ಮ್ಯಾಲೆ ಹೊಸಾದು ತಗೊಳಾಕಂತ. ಸುಮ್ಮನ ಯಾಕ ಖರ್ಚು ಎಷ್ಟ ರ ಜಿಪುಣ‌ ಅದಿರಿ ನೀವು? ನಾ ಎನಾರ ಬಂಗಾರ ಕೇಳಿನೇ ನು? ಅದನಂತೂ ಹಾಕ್ಕೊಂಡು ಅಡ್ಡಾಡೋ ಯೋಗ ಇಲ್ಲ ನನಗ.ಬರಿ ಸೀರಿವಳಗಾದ್ರೂ ಖುಷಿ ಪಡೋಣ‌ ಅಂದ್ರ ಅದಕೂ ಹಿಂಗ ಅಂತಿರಿ. ಗೆಳತೆರ ಮುಂದ ಮರ್ಯಾದಿ ತಗಿಬ್ಯಾಡ್ರಿ? ಹಾಂಗಲ್ಲ ಮಾರಾಯ್ತಿ, ನನ್ನ ಅಂಗಿ ಪ್ಯಾಂಟ್ ನಮ್ಮ ಮದವ್ಯಾಗಿಂದು. ಇನ್ನು  ಹಾಂಗ ಅದಾವ ನಾ ಎನ ರ ಹೊಸಾದು ಇಷ್ಟವರ್ಷದಾಗ ಹೊಲಸಿನೇನ? ಇದ್ದುದ ರಾಗ ಮಾಡಕೊಂಡ ಹೊಂಟಿಲ್ಲೆನ ಅದಕ ಎಲ್ಲ ಹಬ್ಬ, ಅಮಾಸಿ,ಹುಣ್ಣಮಿಗೆ ಅರಬಿ ತಗೊಳ್ಳೊದು ಕಡಮಿ ಮಾ ಡು ನನ್ನ ಕಿಸೆ ಮೊದಲ ಹರದೈತಿ.

ಆತ ಬಿಡ್ರಿ? ಹೆಚ್ಚ ಮಾತ ಬೇಡ.ನಿಮಗ ಕೊಡಸಾಕ ಮನ ಸಿಲ್ಲ‌ ಅಂತ ಡೈರೆಕ್ಟ ಹೇಳಿಬಿಡ್ರಿ.ಎಲ್ಲರ ಮನಿಯಾಗ ಹಬ್ಬಕ್ಕ ಬಟ್ಟಿ,ಬಂಗಾರ ಹಾಕ್ಕೊಂಡು ಹಬ್ಬ ಮಾಡಿದ್ರ,ನಮ್ಮ ಮನಿ ಯಾಗ ಹಳೆ ಸೀರ್ಯಾಗ ಹೊಸವರ್ಷಾನ ಬರಮಾಡಕೋ ಭಾಗ್ಯ ಸಿಕ್ಕಿದ್ದು ನನ್ನ ಹಣೆಬರ ಇಷ್ಟ ಅಂತಾತು.ಉಡಾಂಗಿ ಲ್ಲ,ತೊಡಾಂಗಿಲ್ಲ ಎನ್ನುತ್ತ ಬಿರುಸಿಲೆ ಒಳನಡೆದೆ. ಹಬ್ಬ ಅಂದ ಮ್ಯಾಲೆ ಸ್ವಲ್ಪರ ತಯಾರಿಬೇಕು.ಬೆಲ್ಲ,ಬೇವು,ಕಬ್ಬು ಮಾವು ಹೊಸ ಫಲಗಳ ಪೂಜಿಸಾಕ ರೆಡಿ ಮಾಡತಿದ್ದೆ.

ಅವನು ನಾನು ಬೆರೆತಿದ್ದು ಕಷ್ಟದ ಸಮಯದಾಗ. ಬದುಕಿಗೆ ಯಾರ ಆಶ್ರಯವಿಲ್ಲದೇ ಇರುವೆಯಂತೆ ಹಗುರಾದ ಆನೆ ಯಂತೆ ಭಾರವಾದ ಎಲ್ಲ ಸುಖವ ಸಮನಾಗಿ ಹಂಚಿಕೊಂ ಡು ಹೆಜ್ಹೆಯಿಟ್ಟವರು. ದೈವದ ಸಂಕಲ್ಪವೇ ಕೈ ಹಿಡಿದು ಮುನ್ನಡೆಸಿದೆ. ಕಷ್ಟ ಸುಖಗಳಿಗೆ ಸಮನಾಗಿ ಬೆರೆಯುವ ಮನೋಭಾವ ಎಲ್ಲರಲ್ಲಿ ಬರಲೆಂದು, ಚಾಂದ್ರಮಾನ ಯುಗಾದಿ ಹೊಸ ಸಂವತ್ಸರಕ್ಕೆ ಪಾದಾರ್ಪಣೆ  ಮಾಡುವಾ ಗ ನಮ್ಮಲ್ಲಾಗುವ ಬದಲಾವಣೆಗಳು ಇಡೀ ಜೀವನದ ಮೇಲೆ ಪರಿಣಾಮ ಬಿರುವಂತಹ ಸುಸಂದರ್ಭ.ಇದೆಲ್ಲ ಗೊತ್ತಿದ್ದು ಎಲ್ಲ ಬೇಡವೆನ್ನುವವನ ಕಂಡು ಮಾತಾಡಿ ಉಪಯೋಗವಿಲ್ಲವೆಂದು ಸುಮ್ಮನಾದೆ.

ಮಕ್ಕಳು ಅಪ್ಪನೊಂದಿಗೆ ತಳಿರುತೋರಣ ಕಟ್ಟುವಲ್ಲಿ ಬ್ಯೂಜಿ.ನಾನು ಅಡಿಗೆ ತಯಾರಿಯಲ್ಲಿ ಮನೆಯೋ ನವ ಮದುಮಗಳಂತೆ ಶೃಂಗಾರ ಮಾಡಿದ್ದು ಖಷಿ ತಂದಿತ್ತು. ಎಲ್ಲವಿದ್ದರೂ ಅವನ ಪ್ರೇಮದ ಮಾತುಗಳು ಸುಳಿಯದಿ ದ್ದರೆ,ಬೇವು ಮಾತ್ರ ಒಡಲ ಸೇರಿ ಬೆಲ್ಲದ ಸವಿಯ ಇಲ್ಲವಾ ಗಿಸಿದಂತೆ. ಹೊಸ ಪಂಚಾಂಗದ ಮುನ್ನುಡಿ ನಂಬುವವರ ರಾಶಿಗಳ ಬಲಾಬಲದ ಪಠಣ.ನಲಿವೆಂಬುದು ನಮ್ಮಲ್ಲಿ ಸದಾ ಜೇನುಗೂಡು ಕಟ್ಟಿದಂತೆ.

ಪೂಜೆಯ ಸಿದ್ದತೆ‌ ಮುಗಿದ ಮೇಲೆ ರೆಡಿಯಾಗಲು ಇದ್ದುದ ರಲ್ಲೆ ಸೀರೆಗಾಗಿ ಹುಡುಕಾಟ. ಎದುರಿಗೊಂದು ಪಾಕೀಟು. ಆಶ್ಚರ್ಯ ಇದೇನೆಂದು ಬಿಚ್ಚಿದರೆ ‘ಸೀರೆ’ನನಗಿಷ್ಟವಾದ “ತಿಳಿನೀಲಾಕಾಶ” ಆಗಿಂದ ಅಂದಿದ್ದೆಲ್ಲ ಬರಿ ತಮಾಷೆ, ರೇಗಿಸುವ..ಬುದ್ದಿ ಇನ್ನು ಹೋಗಿಲ್ಲ. ಅದೆಲ್ಲ ಸತ್ಯ ಅಂತ ಬೈದೆನಲ್ಲ ಎನ್ನುತ ಸೀರೆ ಕವರ್ ಸಮೇತ ರೀ…ಇದು ನನಗಾ? ಮತ್ತೆ ಹೇಳಲೇ ಇಲ್ಲ? ಅಯ್ಯೋ  ಗುಂಡಿ ನಿನ್ನ ಗುಣ ನನಗಲ್ಲದೆ ಇನ್ನಾರಿಗೆ ಗೊತ್ತಾಗೊದು?

ಮನೆಯ ಮಹಾಲಕ್ಷ್ಮಿ ಕಣೇ ನೀನು.ಸದಾ ನಗುನಗುತಾ ಓಡಾಡಿಕೊಂಡಿದ್ದರೆ ಅದೇ ನನಗೆ ಸ್ವರ್ಗ. ಯುಗಾದಿಯು ಕಹಿ ನೆನಪುಗಳ ಮರೆಸಲಿ, ಸಿಹಿನೆನಪುಗಳನ್ನು ಹಚ್ಚಿಸಲಿ. ನಮ್ಮಿಬ್ಬರ ಬಾಳಲಿ ವಿರಸಗಳು ಸುಳಿಯದಿರಲಿ ಚಿನ್ನಾ. ಬೇವು-ಬೆಲ್ಲದಂತೆ ಎನ್ನುತ ಮುದ್ದಿಸಿದವನ ಪ್ರೀತಿಯಲಿ ಯುಗಾದಿಯ ಸವಿಯ ಮೆಲ್ಲುತ್ತಿದ್ದೆ….

*********

ಶಿವಲೀಲಾ ಹುಣಸಗಿ

6 thoughts on “

  1. ಬರೆಹದಲ್ಲಿ ಸಡಗರ ಸಂಭ್ರಮ ಹಬ್ಬ ಆಚರಿದಷ್ಟೆ ದಾವಂತ ಗೊಂಡಿದೆ

  2. ಯುಗಾದಿಯ ಚಿತ್ರಣ ಸೊಗಸಾಗಿ ಮೂಡಿ ಬಂದಿದೆ.

  3. ನಿನ್ನ ಮುನಸಿಗೆ ಮನಸೋತು ಹಬ್ಬ ಕ್ಕೆ ಹೊಸ ಸೀರೆ ತಂದ ಬಿಟ್ಟಿದ್ದಾರೆ ….ಆಪ್ತತೆಯ ಲೇಖನ

Leave a Reply

Back To Top