ಸಾಮಾಜಿಕಕ್ರಾಂತಿಸೂರ್ಯಜ್ಯೋತಿಬಾ_ಪುಲೆ

ಜನ್ಮದಿನಾಚರಣೆ 11/04/2021

ಸಾಮಾಜಿಕಕ್ರಾಂತಿಸೂರ್ಯಜ್ಯೋತಿಬಾ_ಪುಲೆ

What is Mahatma Jyotiba Phule Jayanti date?

[01:48, 11/04/2021] +91 95382 66593: ಭಾರತದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು ಜ್ಯೋತಿಬಾ ಪುಲೆ.ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು.

ಇವರು ಧರ್ಮ, ಪಂಥ, ಸಂಪ್ರದಾಯ ಈ ರೀತಿಯ ಕಟ್ಟುಪಾಡುಗಳಿಗೆ ಜೋತುಬೀಳದೆ,ಮಾನವ ಧರ್ಮವನ್ನು ಆಧರಿಸಿ ನಡೆಯಬೇಕೆಂದು ಅಪೇಕ್ಷೆ ಪಟ್ಟವರು.

ಜ್ಯೋತಿಬಾ ಪುಲೆ ಅವರು 11/04/1827 ರಂದು ಮಹಾರಾಷ್ಟ್ರದ ‘ಕಟಗುಣ’ ಎಂಬ ಹಳ್ಳಿಯಲ್ಲಿ ಜನಿಸಿದರು. ತಂದೆ ಗೋವಿಂದರಾವ್,ತಾಯಿ ಚಿಮಣಾಬಾಯಿ. ಜ್ಯೋತಿಬಾ ಅವರು ಇನ್ನೂ ಚಿಕ್ಕವರಿದಾಗಲೇ ತಾಯಿ ಚಿಮಣಾಬಾಯಿ ಅವರು ಸ್ವರ್ಗಸ್ತರಾಗುತ್ತಾರೆ.ನಂತರ ಜ್ಯೋತಿಬಾ ಅವರನ್ನು ಸಾಕಿ ಸಲುಹಿದ್ದು ತಾಯಿ ಚಿಮಣಾಬಾಯಿ ಅವರ ಸೋದರಿ ಸಗುಣಾಬಾಯಿ ಅವರು.ಸಗುಣಾಬಾಯಿ ಅವರು ಚಿಕ್ಕವಯಸ್ಸಿನಿಂದಲೇ ಜ್ಯೋತಿಬಾ ಅವರ ಮನಸ್ಸಿನಲ್ಲಿ ಸಮಾಜಸೇವೆ ಎಂಬ ಬೆಳಕಿನ ಜ್ಞಾನವನ್ನು ಬಿತ್ತುತ್ತಾರೆ.

ಜಾತಿಯ ಕಟ್ಟಲೆಗಳಿಂದ ಮಡುಗಟ್ಟಿದ್ದ ಸಮಾಜದಲ್ಲಿ ಶಿಕ್ಷಣವೆಂಬ ಸೇವೆಯ ಮೂಲಕ ಸಂಪೂರ್ಣ ಭಾರತದಲ್ಲಿ ಪ್ರಗತಿಪರ ನಡೆಯನ್ನು ಹುಟ್ಟುಹಾಕಿದ ಜ್ಯೋತಿಬಾ ಫುಲೆ ಅವರು,ಅಂಬೇಡ್ಕರರವರಿಗೂ ಹಲವು ವಿಚಾರಗಳಲ್ಲಿ ಆದರ್ಶವಾಗಿದ್ದರು.ಹೆಣ್ಣು ಮಕ್ಕಳ ಶಿಕ್ಷಣವನ್ನು ಸಂಪ್ರದಾಯದ ಹೆಸರಿನಲ್ಲಿ ನಿಷೇಧಿಸಿದ್ದ ಕಾಲದಲ್ಲಿ ಜ್ಯೋತಿಬಾರವರು ತನ್ನ ಪತ್ನಿ ಸಾವಿತ್ರಿಭಾಯಿ ಪುಲೆ ರವರಿಗೆ ಅಕ್ಷರ ಕಲಿಸಿ ಭಾರತದ ಮೊದಲ ಮಹಿಳಾ ಶಿಕ್ಷಕಿಯನ್ನಾಗಿ ರೂಪಿಸಿದ ಮಹಾನ್ ಚೇತನ.

ಆ ಕಾಲದಲ್ಲಿ ಮೇಲ್ಜಾತಿಯವರಿಗೆ ಮಾತ್ರ ಶಿಕ್ಷಣವೆಂಬ ಅನಿಷ್ಟ ಪದ್ಧತಿ ಇತ್ತು.ಹಳ್ಳಿಗಳಲ್ಲಿ ಪ್ರಾಥಮಿಕ ಶಿಕ್ಷಣದ ವಿದ್ಯಾಭ್ಯಾಸಕ್ಕೆ ಶಾಲೆಗಳಿದ್ದವು.ಆದರೆ ಆ ಶಾಲೆಗಳಲ್ಲಿ ಶ್ರೀಮಂತರ ಮಕ್ಕಳಿಗೆ ಮಾತ್ರ ಕಲಿಯುವ ಅವಕಾಶ ಇತ್ತು, ಆ ಎಲ್ಲಾ ಕಟ್ಟಲೆಗಳನ್ನು ಮೀರಿ 1848 ರಲ್ಲಿ ಪುಣೆಯಲ್ಲಿ ಶ್ರೀ ಬಿಡೇಯವರ ಭವನದಲ್ಲಿ ಹೆಣ್ಣು ಮಕ್ಕಳ ಶಾಲೆ ಆರಂಭಿಸಿ ಭಾರತದಲ್ಲಿ ಪ್ರಪ್ರಥಮ ಹೆಣ್ಣು ಮಕ್ಕಳ ಶಾಲೆ ಆರಂಭಿಸಿದ ಕೀರ್ತಿಯನ್ನು ಪುಲೆ ದಂಪತಿ ಪಡೆದರು.ಬಡವ,ಶ್ರೀಮಂತ, ಜಾತಿ ಧರ್ಮಗಳ ಬೇಧ ಮಾಡದೇ ಸಕಲ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಶ್ರಮಿಸಿದರು ಪುಲೆ ದಂಪತಿಗಳು,ಆ ಕಾಲದಲ್ಲಿ ಜ್ಯೋತಿಬಾ ಅವರು ಮನಸ್ಸು ಮಾಡಿದ್ದರೆ ಸರ್ಕಾರಿ ನೌಕರಿಗೆ ಹೋಗಬಹುದಿತ್ತು.ಆದರೆ ಅವರ ಇಚ್ಛೆ,ಗುರಿ ಒಂದೇ ಆಗಿತ್ತು ಸಮಾಜ ಸೇವೆ.ಶಿಕ್ಷಣದ ಕ್ರಾಂತಿಯ ಜೊತೆಗೆ ಜ್ಯೋತಿಬಾ ಪುಲೆ ಅವರು ವಿಧವೆಯರ ಮಕ್ಕಳಿಗಾಗಿ ಅನಾಥ ಶಾಲೆ,ವಿಧವಾ ವಿವಾಹ, ಸತ್ಯಶೋದಕ ಸಮಾಜದ ಸ್ಥಾಪನೆ ಮಾಡಿ ಬಸವ ಮಾರ್ಗದಲ್ಲಿ ಸಾಗಿದ ಮಹಾನ ಚೇತನ ಜ್ಯೋತಿಬಾ ಪುಲೆ.

ಇಂದಿನ ಯುವ ಸಮಾಜ ಪುಲೆ ದಂಪತಿಗಳ ಆದರ್ಶಗಳನ್ನ ಪಾಲಿಸಿಕೊಂಡು ಹೋಗಬೇಕಾಗಿದೆ.ನಟ ನಟಿಯರ ಜನ್ಮದಿನದವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಕಾರ್ಯದಲ್ಲಿ ಬಹುತೇಕ ಇಂದಿನ ಯುವ ಸಮಾಜ ಮುಳುಗಿದೆ.ಆದರೆ ಈ ರೀತಿಯ ಮಹಾನ ಚೇತನಗಳು ಯುವ ಸಮಾಜಕ್ಕೆ ನೆನಪಾಗದೆ ಇರುವುದು ವಿಪರ್ಯಾಸ,ಪುಲೆ ದಂಪತಿಗಳ ಜನ್ಮದಿನವನ್ನು ಅದ್ದೂರಿಯಾಗಿ ಮಾಡದೇ ಇದ್ದರೂ ಅವರ ಜೀವನದ ಕುರಿತು ತಿಳಿದುಕೊಂಡು ಅವರು ಸಾಗಿದ ಮಾರ್ಗದಲ್ಲಿ ಒಂದಿಷ್ಟಾದರೂ ಸಾಗುವ ಮನಸ್ಸು ನಾವುಗಳು ಮಾಡಬೇಕಿದೆ.

**************************************

ಹೊರನಾಡ ಕನ್ನಡಿಗ ಪ್ರಕಾಶ

(ಇಂದೋರ್- ಮಧ್ಯಪ್ರದೇಶ)

Leave a Reply

Back To Top