ಕಾಡುವ ಹಾಡು

Image result for Karulina Kare

ಮೈಸೂರು ದಸರಾ

ಚಿತ್ರ-ಕರುಳಿನ ಕರೆ

ಗೀತರಚನೆ- ಆರ್.ಎನ್.ಜಯಗೋಪಾಲ್

ಸಂಗೀತ-ಎಂ.ರಂಗರಾವ್

ಗಾಯಕರು-ಪಿ.ಬಿ.ಶ್ರೀನಿವಾಸ್

Image result for images of pb srinivas singer

ಸುಜಾತ ರವೀಶ್

ಕಾಡುವ ಹಾಡು
ಮೈಸೂರು ದಸರಾ

ಮೈಸೂರು ಎಂದರೆ ದಸರಾ ಜಂಬೂ ಸವಾರಿ ಮೊದಲು ನೆನಪು ಬರುವುದು. ನಂತರ ಮೈಸೂರು ಪಾಕ್ ಮೈಸೂರು ಮಲ್ಲಿಗೆ ಮೈಸೂರು ರೇಷ್ಮೆ ಸೀರೆ ಮೈಸೂರು ಚಿಗುರು ವೀಳ್ಯದೆಲೆ ಹಾಗೂ ಶ್ರೀಗಂಧದ ಉತ್ಪನ್ನಗಳು ಮೈಸೂರು ವೀರನಗೆರೆ ಬದನೆಕಾಯಿ. ಅಂದಿನಿಂದ ಇಂದಿನವರೆಗೂ ಚುನಾವಣೆಯಲ್ಲಿ ಕೈಗೆ ಹಚ್ಚುವ ಮಸಿ ತಯಾರಾಗುವುದು ಮೈಸೂರಿನ ಬಣ್ಣ ಮತ್ತು ಅರಗು ಕಾರ್ಖಾನೆಯಲ್ಲೇ. ರಾಜ್ಯದ ರಾಜಧಾನಿ ಬೆಂಗಳೂರು ಆದರೂ ಸಾಂಸ್ಕೃತಿಕ ರಾಜಧಾನಿ ಮಾತ್ರ ನಮ್ಮ ಅರಮನೆ ನಗರಿಯೇ. ನಮ್ಮೂರು ಮೈಸೂರು ವೈಭವ ಹೊಗಳುತ್ತಾ ಕೂತರೆ ಪುಟಗಟ್ಟಲೆ ತುಂಬುತ್ತದೆ . ಬೇಡ ಈಗ ಹಾಡಿನಬಗ್ಗೆ ಮಾತ್ರ ಬರೀಬೇಕು. ಚಿಕ್ಕಂದಿನಿಂದ ಕಿವಿ ಮೇಲೆ ಬೀಳುತ್ತಿದ್ದ ಈ ಹಾಡಲ್ಲದೆ ನನ್ನನ್ನು ಕಾಡುವುದು ಬೇರ್ಯಾವುದು?”ಮೈಸೂರು ದಸರಾ ಎಷ್ಟೊಂದು ಸುಂದರ” ಕರುಳಿನ ಕರೆ ಚಿತ್ರದ ಪಿಬಿ ಶ್ರೀನಿವಾಸ್ ಅವರ ಮಧುರ ಕಂಠದ ಆರ್ ಎನ್ ಜಯಗೋಪಾಲ್ ರಚಿಸಿದ ಎಂ ರಂಗರಾವ್ ಸಂಗೀತದ ಈ ಹಾಡು ಮೈಸೂರು ಅಂದರೆ ದಸರಾ ಎನ್ನುವ ಮಾತಿಗೆ ಸುಂದರ ಪ್ರತಿಮೆ.ಪ್ರತಿ ನವರಾತ್ರಿಯ ಗೊಂಬೆ ಆರತಿಯ ದಿನ ಮಕ್ಕಳೆಲ್ಲ ಈ ಹಾಡನ್ನು ಕೋರಸ್ ಹಾಡೇ ಹಾಡುತ್ತಿದ್ದೆವು . ಕೇಳುತ್ತಿದ್ದವರ ಕಿವಿಯ ಗತಿ ಪಾಡು ನಿಮ್ಮ ಊಹೆಗೆ ಬಿಟ್ಟಿದ್ದು.😁😁😁😁😁 ಆ ನನ್ನ ಪ್ರೀತಿಯ ಹಾಡಿನ ಬಗ್ಗೆ ಬರೆಯಲು ಸಿಕ್ಕ ಸುವರ್ಣಾವಕಾಶಕ್ಕೆ ಸಾಹಿತ್ಯೋತ್ಸವಕ್ಕೆ ತುಂಬಾ ತುಂಬಾ ಧನ್ಯವಾದಗಳು .

ಡಾಕ್ಟರ್ ರಾಜಕುಮಾರ್ ಕಲ್ಪನಾ ಮತ್ತು ಸಂಗಡಿಗರು ಸೇರಿ ದಸರೆಯ ಸಡಗರವನ್ನು ಸಂಭ್ರಮಿಸಿ ಹಾಡಿ ಕುಣಿವ ಹಾಡು ಇದು. ಮೊದಲಿಗೆ ಧಾರ್ಮಿಕ ಹಿನ್ನೆ ವಿವರಿಸುವ ಹಾಡು ಮಧ್ಯಮ ವರ್ಗದವರ ಹಬ್ಬದ ಆಚರಣೆಯ ರೀತಿಯನ್ನು ಕಣ್ಣಿಗೆ ಕಟ್ಟಿಕೊಡುತ್ತದ .ಮೈಸೂರು ನಗರ ಅಧಿದೇವತೆ ಚಾಮುಂಡಿಯ ಮಹಿಮೆಯನ್ನು ವರ್ಣಿಸುತ್ತದೆ .

ನಂತರ ಮಹಾನವಮಿಯ ಬಗ್ಗೆ ಹೇಳುತ್ತಾ ಆ ತಾಯಿಯ ವರ್ಚಸ್ಸು ಅವಳಿಗೆ ಶರಣಾಗೋಣ ಎಂಬ ಆಶಯವನ್ನು ಬಿಂಬಿಸುತ್ತದೆ. ಕಡೆಗೆ ಚರಣದಲ್ಲಿ ಶತ್ರುವನ್ನು ಅಳಿಸಿ ಧರ್ಮ ಸಂಸ್ಥಾಪಿಸಿದ ನಾವು ಶಸ್ತ್ರ ಹೂಡಬೇಕು.
ಬಡತನವನ್ನು ಅಳಿಸಲು ಪರಸ್ಪರ ಸಹಕಾರದಿಂದ ಆ ತಾಯಿಯ ಹೆಸರಲ್ಲಿ ಒಂದಾಗಿ ದುಡಿಯಬೇಕು ಎಂಬ ಸಂದೇಶವನ್ನು ಕೊಡುತ್ತದೆ.

ಮುಖ್ಯವಾಗಿ ಎಲ್ಲ ಧಾರ್ಮಿಕ ಆಚರಣೆಗಳು ಸಾಮಾಜಿಕ ಉತ್ಸವದ ರೂಪ ತಾಳಿ ಆಚರಿಸಲ್ಪಡುವ ಉದ್ದೇಶವೇ ಅದು. ಸಾಮಾಜಿಕ ಸಮಾನತೆಯ ಸ್ಥಾಪನೆ ಪರಸ್ಪರ ಸಹಕಾರ ಮನೋಭಾವನೆ ಒಂದಾಗಿ ದುಡಿಯುವ ಸೇರಿ ನಲಿಯುವ ಈ ಉದ್ದೇಶ ಇಂತಹ ಹಾಡುಗಳಿಂದ ನೆರವೇರುತ್ತದೆ. ಪುಟ್ಟಣ್ಣ ಕಣಗಾಲರಂತಹ ಧೀಮಂತ ನಿರ್ದೇಶಕರು ಈ ತರಹದ ಸಾಮಾಜಿಕ ಕಳಕಳಿಯನ್ನು ಸಂದೇಶವನ್ನು ಈ ಹಾಡಿನ ಮೂಲಕ ಎತ್ತಿ ಹಿಡಿದಿದ್ದಾರೆ. ಹಿಂದಿನ ಚಿತ್ರಗಳಲ್ಲಿ ಇರುತ್ತಿದ್ದ ಒಳ್ಳೆಯ ವಿಷಯಗಳು ಇವೇ. ಮನರಂಜನೆಯ ಮೂಲಕ ಒಳಿತು ಕೆಡುಕಿನ ಬೋಧನೆ ಹಾಗೂ ಕೂಡಿ ದುಡಿಯುವ ಒಂದಾಗಿ ನಲಿಯುವ ಪಾಠ. “ಸ್ವಾಮಿ ಕಾರ್ಯದೊಂದಿಗೆ ಸ್ವಕಾರ್ಯ” ಎಂಬಂತೆ ಇಂತಹ ಚಿತ್ರಗಳು ಹಾಡುಗಳು ಈಗ ಮರೆಯಾಗಿರುವುದು ಕಾಲ ಧರ್ಮ ಪ್ರಭಾವ ಎನ್ನೋಣವೇ? ಕಾಲಾಯ ತಸ್ಮೈ ನಮಃ!

Leave a Reply

Back To Top