ಗಜಲ್
ಸಿದ್ಧರಾಮ ಹೊನ್ಕಲ್
ದಿನಾರಾತ್ರಿ ನೆನಪುಗಳ ಕಾಡಾಟ ಅತಿಯಾಗಿ ನಾಳೆಯಿಂದವಳ ಮರೆಯಬೇಕು ಅನ್ಕೋತೇನೆ
ಇವಳಿಂದೆನಾಗಬೇಕಿದೆ ಈ ಮನಸಿಗರಾಯಳ ಸಹವಾಸವೇ ಬಿಟ್ಟು ಬಿಡಬೇಕು ಅನ್ಕೋತೇನೆ
ಸಿಟ್ಟು ಸೆಡವು ದು:ಖ ಸೊಕ್ಕು ಸ್ವಾಭಿಮಾನ ನೆನಪಾಗಿ ಕ್ಷಣ ಹೀಗಂದುಕೊಂಡಿರುತ್ತೇನೆ
ಅವಳು ಕೊಟ್ಟ ಕಂಫರ್ಟಲಿ ಶುಭರಾತ್ರಿ ಹೇಳಿ ಮನಸಾರೆ ಮರೆಯದಿರಬೇಕು ಅನ್ಕೋತೇನೆ
ಬೆಳಿಗ್ಗೆ ಎದ್ದೊಡನೆ ಹಿಂದಿನದೇನು ನೆನಪಿಡದೆ ಹೃದಯದಿ ಶುಭೋದಯ ಹೇಳಿರುತ್ತೇನೆ
ಮಾತು ಕಥೆ ಯಥಾ ರೀತಿ ಪ್ರೀತಿ ಮೂಗಿನ ತುದಿಯ ಕೋಪವಿರಬೇಕು ಅನ್ಕೋತೇನೆ
ಅನುನಯದ ಮಾತಿಗಿಂತ ಕೋಪತಾಪದ ಮಾತು ತುಸು ಜಾಸ್ತಿ ಆಗಿದೆಯೇನೋ
ಆದರೇಕೋ ಬಿಟ್ಟೆನೆಂದರೂ ಬಿಡದೀ ಮೋಹ ಸದಾ ಸಂಗದಲ್ಲಿರಬೇಕು ಅನ್ಕೋತೇನೆ
ಅವಳಿಗೆ ಏನಿವೆಯೋ ಸಂಕಟ ಹೇಳಲಾರಳು ಕೇಳಿ ಇರಲೆಂದು ಸಂತೈಸುವ ಹೃದಯವಂತೆ
ಹೊನ್ನಸಿರಿ’ಬದುಕಿರಲಾರ ಅನುರಾಗದಿ ಸದಾ ನೀನು ಜೊತೆಗಿರಲೇಬೇಕು ಅನ್ಕೋತೇನೆ
*********************************