ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
Man Wearing Orange Shirt Holding Black Umbrella

ಸಂಜಯ ಮಹಾಜನ್

ಅಳಿದು ಹೋಗುವ ಮಾನವ ನಿರ್ಮಿತ ಕಟ್ಟಡಗಳ ಮಧ್ಯ
ಅಳಿಯದೆ ಮುಂದೆ ಸಾಗಿದೆ ಹಸಿರೆಲೆಗಳ ಪಯಣ

ಸದ್ದಿಲ್ಲದೆ ಮಾಸಿ ಹೋಗುವ ದೇಹಕ್ಕೆ ಚೈತನ್ಯ
ತುಂಬುವ ಹೃದಯಾಂತರಾಳದ ನೆನಪುಗಳ ಪಯಣ

ಪಚ್ಚೆಯಾಗಸದಿ ಸುರಿವ ಮಳೆಹನಿ ಕಪ್ಪು ಹಂಚಿನ
ಹಸಿರ ಹಾಸಿನ ಮಧ್ಯ ಮಳೆಹನಿಗಳ ಪಯಣ

ಮೊಳಕೆಯೊಂದು ಬೇರೂರಿ ಆಗಸಕ್ಕೆ ಕೈಚಾಚಲು
ಗಟ್ಟಿ ಕಾಂಕ್ರೀಟು ಮೇಲೆ ನಡೆಸಿದೆ ಸೆನಸಾಟದ ಪಯಣ

ಭೂವಿಯಲ್ಲಿ ಹೆಜ್ಜೆಯುರಿದ ಕಬ್ಬಿಣದ ಸರಳುಗಳು
ಬಿಡುಗಡೆಗೆ ನಡೆಸಿವೇ ಕನಸುಗಳ ಪಯಣ

ಈ ಪಯಣಗಳ ಮಧ್ಯ ಚಂಚಲ ನನ್ನ ಮನಸೊಂದು
ಬಯಸಿದೆ ಎರಡು ಹೆಜ್ಜೆಯ ಪಯಣ.


About The Author

Leave a Reply

You cannot copy content of this page

Scroll to Top