ಬದಲಾಗಲಿ ಕರ್ನಾಟಕದ ಸನ್ನಿವೇಶ

ಬದಲಾಗಲಿಕರ್ನಾಟಕದಸನ್ನಿವೇಶ

ಇರಾಜ ವೃಷಭ ಎ

ಎಲ್ಲರೂ ಹಬ್ಬಗಳನ್ನು ಆಚರಿಸುತ್ತಾರೆ. ಹಬ್ಬ ಅಂದರೆ ಎಲ್ಲರೂ ಹೇಳೋದು ದೀಪಾವಳಿ, ದಸರಾ, ಗಣೇಶ ಚತುರ್ಥಿ, ನಾಗರಪಂಚಮಿ ಇತ್ಯಾದಿ. ಆದರೆ ಇದು ಅವರ ಪಾಲಿಗೆ ಹಬ್ಬಗಳಲ್ಲಿ ದೊಡ್ಡದಾದ ಹಬ್ಬ. ಪಟಾಕಿ ಶಬ್ದ, ಮೆರವಣಿಗೆ, ಡ್ಯಾನ್ಸ್, ಡಿಜೆ, ಕೋಲಾಟ, ಹಾಡು ಇತ್ಯಾದಿ ಆದರೆ ಸಮಯ ಮತ್ತು ಆಚರಿಸುವ ವಿಧಾನಗಳು ಎರಡು ಜಾಸ್ತಿನೇ.  ಅದೇನೊ ಖುಷಿ ಮತ್ತು ಸ್ವಾಭಿಮಾನ  ಈ ಹಬ್ಬವನ್ನು ಹೆಚ್ಚಾಗಿ ವಿಜ್ರಂಭಣೆಯಿಂದ ಆಚರಿಸುವಂತೆ ಮಾಡುತ್ತವೆ. ಆ ಹಬ್ಬವೇ ಕರ್ನಾಟಕ ರಾಜ್ಯೋತ್ಸವ.

ಕನ್ನಡಿಗರ ಪಾಲಿಗೆ ಅದರಲ್ಲೂ ಬೆಳಗಾವಿಯಲ್ಲಿ ಅತಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ಕನ್ನಡ ರಾಜ್ಯೋತ್ಸವವು ಒಂದು. ಹಳದಿ-ಕೆಂಪು ಬಾವುಟ, ಬಣ್ಣಬಣ್ಣದ ತೋರಣ, ತಾಯಿ ಭುವನೇಶ್ವರಿಗೆ ಮಾಡುವ ಸುಂದರ ಅಲಂಕಾರ, ಕಿತ್ತೂರರಾಣಿ ಚೆನ್ನಮ್ಮನ ಪ್ರತಿಮೆಗೆ ಸುತ್ತುವರೆದು ಹೂ ಗುಚ್ಚ ಅರ್ಪಿಸುವುದು,  ಭಿನ್ನ  ಮತ್ತು ವಿಭಿನ್ನ ರೀತಿಯಲ್ಲಿ ಸಂದೇಶ ಸಾರುವ ಕನ್ನಡದ ಘೋಷವಾಕ್ಯಗಳು, ಪರಿಸರ, ನೆಲ-ಜಲ ರಕ್ಷಿಸಿದ ಮಹಾತ್ಮರ ಭಾವಚಿತ್ರವಿಟ್ಟು ಪೂಜಿಸುವುದು, ಇದೆಲ್ಲದರ ಜೊತೆಗೆ ಕನ್ನಡ ನಾಡು ನುಡಿಗೆ ಗೌರವ ಕೊಡುವ ಕನ್ನಡ ನುಡಿಯ ಡಿಜೆ ಸಾಂಗ್ಸ್! ಅಬ್ಬಬ್ಬಾ!! ಮನಸ್ಸು ಮತ್ತು ಮೈ ಹೇಳದೆ, ಕೇಳದೆ ಕುಣಿದು ಬಿಡುತ್ತದೆ. ಅಲೆಗಳಂತೆ ಬರುವ ಜನಸಾಗರದಲ್ಲಿ ನೂಕುನುಗ್ಗಲು ಸಾಮಾನ್ಯ. ಅದರಲ್ಲಿ ನಾಮುಂದು, ತಾಮುಂದು ಎಂದು ಕುಣಿಯುವುದನ್ನು  ನೋಡುವುದು ಮತ್ತು ಅದರಲ್ಲಿ ಭಾಗಿಯಾಗುವುದಕ್ಕೆ ನಿಜಕ್ಕೂ ಅದೃಷ್ಟ ಮಾಡಿರಬೇಕು. ಕರ್ನಾಟಕದ ಮೂಲೆ ಮೂಲೆಗಳಿಂದ ಜನ ರಾಜ್ಯೋತ್ಸವ ನೋಡಲೆಂದೇ ಬರುತ್ತಾರೆ.

ಮದ್ರಾಸ್, ಹೈದರಾಬಾದ್, ಮೈಸೂರು ಮತ್ತು ಮುಂಬೈ ಪ್ರಾಂತ್ಯಗಳಾಗಿ ಕರ್ನಾಟಕ ಹರಿದು ಹಂಚಿಹೋಗಿತ್ತು. ಅದನ್ನು ಸರಿಪಡಿಸಲು ಕಾರಣೀಭೂತರಾದ ನಿಜಲಿಂಗಪ್ಪ, ಬೆಳಗಲ್ ರಾಮರಾಯರು, ಹುಲ್ಲೂರು ಶ್ರೀನಿವಾಸ ಜೋಯಿಸ ಇನ್ನು ಮುಂತಾದ ಕೈಗಳಿಂದ ಭವ್ಯ ಮತ್ತು ಅಖಂಡ  ಕರ್ನಾಟಕವಾಗಿ ನಿರ್ಮಾಣವಾಗಿದೆ.  ೧೯೫೬ ರ ನವೆಂಬರ್ ೧ ರಂದು ಭಾಷಾವಾರು ಪ್ರಾಂತ್ಯಗಳಿಗೆ ಅನುವು ಕೊಟ್ಟಿದ್ದರಿಂದ, ಭಾಷೆಗಳ ಆಧಾರದ ಮೇಲೆ ರಾಜ್ಯಗಳು ರಚನೆಯಾದವು ಎನ್ನುವುದು ಗೊತ್ತಿರುವ ಇತಿಹಾಸ.

      ರಾಜ್ಯೋತ್ಸವದ ದಿನ ಬೆಳಗಾವಿಯಲ್ಲಿರುವ ಕನ್ನಡ ಬರದವನು/ ಬರದವಳು ಕೂಡ ಆಟೋಮೆಟಿಕ್ ಆಗಿ ಕನ್ನಡ ಮಾತನಾಡುತ್ತಾರೆ.  ಅದು ಹೇಗೆ ಅಂತ ತಿಳ್ಕೊಬೇಕು ಅಂದ್ರೆ, ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಜೀವನದಲ್ಲಿ ಒಂದು ಸಲನಾದರೂ ನೀವು ನೋಡಲೇಬೇಕು ಮತ್ತು ಆಚರಿಸಲೇಬೇಕು ಆದರೆ ಇನ್ನೊಂದು ಕಡೆ ಕರಾಳ ದಿನ ಆಚರಿಸುವ ಮೂರ್ಖರು ಕೂಡ ಅಲ್ಲೇ ತಂಗಿದ್ದಾರೆ. ಇತ್ತ ಕನ್ನಡ ರಾಜ್ಯೋತ್ಸವನ್ನು ಕನ್ನಡಿಗರು ಆಚರಿಸುತ್ತಿದ್ದರೆ ಅಲ್ಲೇ ಹುಟ್ಟಿ ಬೆಳೆದು ಕನ್ನಡ ನಾಡಿಗೆ ಕೇಡು ಬಗೆಯುವ ಜನರು ಕಪ್ಪುಬಟ್ಟೆ ಮತ್ತು ಧ್ವಜದ ಜೊತೆ ಕನ್ನಡದ ವಿರುದ್ಧ ಮಾತುಗಳನ್ನು ಆಡುತ್ತಾ ಪ್ರತಿಭಟನೆ ಮಾಡುತ್ತಾ ಇರುವುದು ನೋವಿನ ಸಂಗತಿ. ಈ ಘಟನೆ ಇಂದು ನಿನ್ನೆಯದಲ್ಲ. ಹೆಚ್ಚು ಕಮ್ಮಿ ಕರ್ನಾಟಕ ಏಕೀಕರಣವಾದಾಗಿನಿಂದ ನಡೆಯುತ್ತಾ ಬಂದಿದೆ. ಎಲ್ಲ ಸೌಲತ್ತುಗಳನ್ನು ಕರ್ನಾಟಕ ಸರ್ಕಾರದಿಂದ ಪಡೆದುಕೊಂಡು; ಅದೇ ನಾಡಿನ ವಿರುದ್ಧ ಘೋಷಣೆ ಕೂಗುವ ದ್ರ
ೋಹಿಗಳನ್ನು ಈಗಲೂ ಕಾಣಬಹುದು. ಇದೆಲ್ಲವೂ ಬದಲಾಗಬೇಕಿದೆ. ನಾಡು-ನುಡಿಗೆ ಸರ್ಕಾರ ಮಾಡಬೇಕಾಗಿರೋದು ಬಹಳಷ್ಟಿದೆ.

* ಕರ್ನಾಟಕ ರಾಜ್ಯೋತ್ಸವ ಮತ್ತು ಕನ್ನಡದ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸುತ್ತಿಲ್ಲ.  ಈ ಸಮಯದಲ್ಲಿ ದೇಶದ ತ್ರಿವರ್ಣಧ್ವಜ ಹಾರಿಸುತ್ತಿದ್ದಾರೆ. ಈ ಸಮಯದಲ್ಲಿ ತ್ರಿವರ್ಣಧ್ವಜದ ಅವಶ್ಯಕತೆ ಇಲ್ಲ ಮತ್ತು ಬೇಕಾಗಿಲ್ಲ.

* ನಾಡಗೀತೆಯನ್ನು ಎಲ್ಲಿ, ಯಾವಾಗ, ಎಷ್ಟು ಸಮಯ ಬಳಸಬೇಕು ಎನ್ನುವುದು ಕಾನೂನಿನಲ್ಲಿ ಬದಲಾವಣೆಯಾಗಬೇಕು ಮತ್ತು ಅದು ರೂಢಿಕೃತ ವಾಗಬೇಕು.

* ಮಕ್ಕಳಿಂದ ಹಿಡಿದು ಮುದುಕರ/ಮುದುಕಿಯರ ವರೆಗೆ ನಾಡ ಗೀತೆ, ನಾಡ  ದ್ವಜಕ್ಕೆ ಗೌರವ ನೀಡುವುದು ಕಡ್ಡಾಯವಾಗಬೇಕು( ಅಂದರೆ ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಕ್ಕೆ ನೀಡುವ ಗೌರವದ  ಹಾಗೆ ನಾಡ ಗೀತೆ, ಮತ್ತು ನಾಡ ಧ್ವಜಕ್ಕೆ ನೀಡಬೇಕು)

* ಗಡಿಜಿಲ್ಲೆಗಳಲ್ಲಿ ಕನ್ನಡಿಗರಿಗೆ ಮತ್ತು ಕನ್ನಡ ನಾಡಿಗೆ ಹಾನಿ ಉಂಟಾಗದಂತೆ ಅತಿ ಹೆಚ್ಚಿನ ಭದ್ರತೆಯನ್ನು ಸರ್ಕಾರ ಒದಗಿಸಬೇಕು. ರಾಜ್ಯ ಒಡೆಯುವ, ಕೆಡಕು ಬಯಸುವ ಮತ್ತು ಮಾಡುವ ವ್ಯಕ್ತಿ ಅಥವಾ ರಾಜಕಾರಣಿ ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು.

*  ಕರ್ನಾಟಕ ರಾಜ್ಯಕ್ಕೆ ಸೇರಿರುವ ಪ್ರತಿ ಶಾಲೆ-ಕಾಲೇಜು ಮತ್ತು ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವನ್ನು ಕಡ್ಡಾಯವಾಗಿ ಆಚರಿಸಬೇಕು. ತಪ್ಪಿದ್ದಲ್ಲಿ ದಂಡ ವಸೂಲಾತಿ ಮತ್ತು ಶಿಕ್ಷೆಗೆ ಒಳಪಡಿಸಬೇಕು.

*  ಕನ್ನಡ ಭಾಷಾ ಶಿಕ್ಷಣಕ್ಕೆ ಹೆಚ್ಚಿನ ಒತ್ತುಕೊಟ್ಟು ಕನ್ನಡ ವಿಷಯದಲ್ಲಿ ಹೆಚ್ಚು ಪರಿಣಿತ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು ಮತ್ತು ಅದಕ್ಕೆ ತಕ್ಕಂತೆ ಇರುವ ಉದ್ಯೋಗಗಳನ್ನು ನೀಡಬೇಕು.

ಈ ಮೇಲಿನವುಗಳನ್ನೆಲ್ಲಾ ಚಾಚೂತಪ್ಪದೆ ಪಾಲಿಸುವುದರಿಂದ ಮತ್ತು ರೂಢಿಕರಿಸುವುದರಿಂದ ಕರ್ನಾಟಕದಲ್ಲಿ ಕನ್ನಡಕ್ಕೆ ಯಾವುದೇ ಕೊರತೆ ಬರುವುದಿಲ್ಲ. ಕನ್ನಡರಾಜ್ಯ ಒಂದು ಬಲಿಷ್ಠ ರಾಜ್ಯವಾಗಿ ಎದ್ದು ನಿಲ್ಲುತ್ತದೆ. ಈ ತರಹದ ಬಲಿಷ್ಠ ರಾಜ್ಯವನ್ನು ಕಣ್ತುಂಬಿಕೊಳ್ಳಲು ಕನಸು ಕಟ್ಟಿದ ಅದೆಷ್ಟು ಕನ್ನಡ ಅಭಿಮಾನಿಗಳಲ್ಲಿ ನಾನೂ ಒಬ್ಬ.

ಎಲ್ಲ ಕನ್ನಡಿಗರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.

“ಜೈ ಕರ್ನಾಟಕ, ಜೈ ಕನ್ನಡ “


Leave a Reply

Back To Top