ಅಂಕಣ ಬರಹ

ಸಾಧಕಿಯರ ಯಶೋಗಾಥೆ

ಸಿಸ್ಟರ್ ನಿರ್ಮಲಾ (1934-2015)

ಬ್ರಾಹ್ಮಣ್ಯ ದಿಂದ ಕ್ರಿಶ್ಚಿಯಾನಿಟಿಗೆ ಮತಾಂತರ

ನಿರ್ಮಲಾರವರು ಜುಲೈ 23, 1934 ರಂದು ರಾಂಚಿಯಲ್ಲಿ ಜನಿಸಿದರು. ನಿರ್ಮಲಾರವರು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿ ನಂತರ ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದರು. ನೋಬೆಲ್ ಶಾಂತಿ ಪುರಸ್ಕಾರ ವಿಜೇತೆ ಮದರ್ ತೆರೆಸಾರವರ ಅನಾಥಾಲಯಕ್ಕೆ ಸೇರಿಕೊಂಡರು. ಮದರ್ ತೆರೆಸಾರವರ ಸೇವೆಯನ್ನು ನೋಡಿದ ನಿರ್ಮಲಾರವರು ತಾವೂ ಕೂಡ ಜನರ ಸೇವೆಯಲ್ಲಿ ತೊಡಗಬೇಕೆಂದುಕೊಂಡು ನಿರ್ಗತಿಕರ ಸೇವೆಯಲ್ಲಿ ತೊಡಗಿದರು.

ನಿರ್ಮಲಾರವರ ಕುಟುಂಬದವರು ಹಿಂದೂಗಳಾಗಿದ್ದರು ಕೂಡ ಕಾರ್ಮೆಲ್ ಪರ್ವತದಲ್ಲಿ ಕ್ರಿಶ್ಚಿಯನ್ ಮಿಷಿನರಿಗಳಿಂದ ಶಿಕ್ಷಣ ಪಡೆದರು. ಅದೇ ಸಮಯದಲ್ಲಿ ಮದರ್ ತೆರೆಸಾರವರು ಮಾಡುತ್ತಿದ್ದ ಕೆಲಸಗಳನ್ನು ಕಲಿತರು. ನಂತರ ಕ್ಯಾಥೋಲಿಕ್ ಪಂಗಡಕ್ಕೆ ಮತಾಂತರ ಹೊಂದಿದ್ದರು. ನಿರ್ಮಲಾರವರು ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು, ನಂತರ ಕಲ್ಕತ್ತಾಗೆ ಕಾನೂನು ವಿಷಯದಲ್ಲಿ  ಡಾಕ್ಟರೇಟ್ ಪದವಿಯನ್ನು ಪಡೆಯಲು ಹೋದರು.

ತೆರೆಸಾರವರ ಮರಣದ ನಂತರ ಇವರು ಮಿಷನರಿ ಮತ್ತು ಚಾರಿಟಿಗಳ ಉತ್ತರಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ನಿರ್ಮಲಾರವರು 25 ವರ್ಷಗಳ ಕಾಲ ಸುಪೇರಿಯರ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಸಿಸ್ಟರ್ ನಿರ್ಮಲಾರವರು ಮಿಷನರೀಸ್ ಆಫ್ ಚಾರಿಟಿ ಸಂಘಟನೆಯ ಕೇಂದ್ರವನ್ನು ಅಫ್ಘಾನಿಸ್ತಾನ, ಇಸ್ರೇಲ್ ಮತ್ತು ಥೈಲ್ಯಾಂಡ್ ಸೇರಿದಂತೆ 134 ದೇಶಗಳಲ್ಲಿ ಸಂಸ್ಥೆಯ ಕಾರ್ಯ ಚಟುವಟಿಕೆಯನ್ನು ವಿಸ್ತರಿಸಿದರು. ನಂತರ ಅನಾರೋಗ್ಯದ ಕಾರಣದಿಂದ ಸ್ವಯಂ ನಿವೃತ್ತಿಯನ್ನು ಹೊಂದಿದರು. ಜೂನ್ 23, 2015 ರಂದು ತಮ್ಮ 81 ನೇ ವಯಸ್ಸಿನಲ್ಲಿ ಅನಾರೋಗ್ಯದ ಕಾರಣದಿಂದ ನಿಧನರಾದರು. ನಿರ್ಮಲಾರವರು ಬಡವರಿಗೆ ಮತ್ತು ನಿರ್ಗತಿಕರಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಭಾರತ ಸರ್ಕಾರವು 2009 ರಲ್ಲಿ ದೇಶದ ಎರಡನೇ ಅತ್ಯುತ್ತಮ ನಾಗರೀಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತು.


ಡಾ.ಸುರೇಖಾ ರಾಠೋಡ್

ಸುರೇಖಾ ರಾಠೋಡ್ ಎಂ.ಎ , ಎಂ.ಫಿಲ್,ಪಿಎಚ್ ಡಿ, ಪಿಡಿಎಫ್. ಪದವಿ ಪಡೆದು ವಿಜಾಪುರ ಮಹಿಳಾ ವಿವಿಯಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. “ಸಿದ್ದಿ ಸಮುದಾಯದ ಲಿಂಗ ಸಂಬಂಧಿ ಅದ್ಯಯನ ” ಎಂಬ ವಿಷಯದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಯಿಂದ ಎಂಫಿಲ್ ಪದವಿ ಪಡೆದಿದ್ದಾರೆ. “ವಿಜಯಪುರ ನಗರದ ಕೊಳಚೆ ನಿವಾಸಿ ಮಹಿಳೆಯರ ಬದುಕು ಬವಣೆ ಭರವಸೆ” ಎಂಬ ವಿಷಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರಯಿಂದ ಪಿಎಚ್ ಡಿ ಪದವಿ ಪಡೆದಿದ್ದಾರೆ. ಇದು ಅವರ ಮಹಿಳೆಯರ ಮೇಲೆ ಬೀರಿದ ಬೆಳಕಿಗೆ ಸಾಕ್ಷಿಯಾಗಿದೆ. “ಹರಣಶಿಕಾರಿ ಮಹಿಳೆಯರ ಸ್ಥಾನಮಾನ” ಎಂಬ ವಿಷಯದ ಕುರಿತು ಪಿಡಿಎಫ್ (ಸಂಶೋಧನೆ ) ಮುಂದುವರಿದಿದೆ. ಹೊರ ತಂದ ಪುಸ್ತಕಗಳು: ವಿಜಯಪುರ ನಗರದ ಕೊಳಚೆ ನಿವಾಸಿ ಮಹಿಳೆಯರ ಬದುಕು ಬವಣೆ ಭರವಸೆ, ದಲಿತ ಸಾಹಿತ್ಯ ಪರಿಷತ್ತಿ ಗದಗ ಪ್ರಕಟಿಸಿದೆ.೨. ದಲಿತ ಮಹಿಳಾ ಕಾರ್ಮಿಕರ ಸಮಸ್ಯೆಗಳು, ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಪ್ರಕಟಿಸಿದೆ ೩. ಮಹಿಳಾ ಅದ್ಯಯನ, ಯುಜಿಸಿ ನೆಟ್ -ಜೆಆರ್ ಎಫ್,ಕೆಸೆಟ್ ಪಠ್ಯ ಮತ್ತು ಪ್ರಶ್ನೆ ಪತ್ರಿಕೆಗಳು’ ಡಿವಿಕೆ ಪ್ರಕಾಶನ ಮೈಸೂರು ಪ್ರಕಟಿಸಿವೆ

Leave a Reply

Back To Top