ಶ್ರದ್ದಾಂಜಲಿ

Image result for photos of chidanandamurthy books

ನಮ್ಮನ್ನಗಲಿದ ಸಾಹಿತಿ, ಸಂಶೋಧಕ, ಪ್ರೋ. ಎಂ.ಚಿದಾನಂದಮರ್ತಿ..!

ಕೆ.ಶಿವು ಲಕ್ಕಣ್ಣವರ

ಪ್ರೋ. ಎಂ.ಚಿದಾನಂದಮರ್ತಿ..!

ಸಾಹಿತಿ, ಸಂಶೋಧಕ ಪ್ರೋ. ಎಂ.ಚಿದಾನಂದಮೂರ್ತಿ ಅವರ ಬಗೆಗೆ ಇತ್ತೀಚಿನ ಎಡಪಂಥೀಯರ ಏನೇ ತಕರಾರಿದ್ದರು. ಅದನ್ನೆಲ್ಲ ಬದಿಗಿರಿಸಿ ಅವರು ಕೊನೆ ಉಸಿರೆಳದ ಈ ಗಳಿಗೆಯಲ್ಲಿ ಅವರ ಕುರಿತು ಈ ಪುಟ್ಟ ಲೇಖನ ಸ್ಮರಣೆ…

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು…

ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟದ್ದರು ಎಂ. ಚಿದಾನಂದಮೂರ್ತಿಯವರು…

Image result for photos of chidanandamurthy books

ಇಂದು ನಿಧನರಾದ ಹಿರಿಯ ಸಂಶೋಧಕ, ವಿದ್ವಾಂಸ, ಬರಹಗಾರ ಡಾ. ಎಂ.ಚಿದಾನಂದಮೂರ್ತಿ ಅವರು
1931ರ ಮೇ 10ರಂದು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೆಕೋಗಲೂರಿನಲ್ಲಿ ಜನಿಸಿದ್ದರು. ಡಾ. ಎಂ.ಚಿದಾನಂದಮೂರ್ತಿ ಅವರು‌‌ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಕೋಗಲೂರು, ಸಂತೆಬೆನ್ನೂರಿನಲ್ಲಿ ಪಡೆದಿದ್ದರು. ಇಂಟರ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ಸ್ಥಾನಗಳಿಸಿದ್ದ ಅವರು, ಕನ್ನಡ ಆನರ್ಸ್ ಸೇರಿ 1953ರಲ್ಲಿ ಆಲ್ ಆನರ್ಸ್ ಚಿನ್ನದ ಪದಕ ಪಡೆದಿದ್ದರು…

ಬಳಿಕ ಎರಡು ವರ್ಷ ಬೆಂಗಳೂರು, ತುಮಕೂರು, ಕೋಲಾರದ ಪದವಿ ಕಾಲೇಜುಗಳಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. 1957ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ ಪದವಿಯನ್ನು ಪ್ರಥಮ ಸ್ಥಾನದಲ್ಲಿ ಪಡೆದಿದ್ದರು…

‘ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಮೇಲೆ ತೀ. ನಂ. ಶೀಕಂಠಯ್ಯನವರ ಮಾರ್ಗದರ್ಶನದಲ್ಲಿ 1964ರಲ್ಲಿ ಪಿ.ಎಚ್‌ಡಿ ಪದವಿ ಪಡೆದಿದ್ದರು…

ವೃತ್ತಿಜೀವನದ ಆರಂಭದ ಕೆಲವು ವರ್ಷ ಪದವಿ ಕಾಲೇಜುಗಳ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಚಿದಾನಂದಮೂರ್ತಿಗಳು 1957ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರಾದರು. 1960ರ ಹೊತ್ತಿಗೆ ಮೈಸೂರಿನ ಮಾನಸಗಂಗೋತ್ರಿಯ ಸ್ನಾತಕೋತ್ತರ ಕನ್ನಡ ವಿಭಾಗದ ಪ್ರಾಧ್ಯಾಪಕರಾದರು. 1968ರವರೆಗೆ ಅಲ್ಲಿ ಪ್ರಾಧ್ಯಾಪಕರಾಗಿದ್ದರು. ಬಳಿಕ ಬೆಂಗಳೂರು ವಿಶ್ವವಿದ್ಯಾಲಯ ಸೇರಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. 1990ರ ಅಕ್ಟೋಬರ್ 10ರಂದು ಸ್ವಯಂ ನಿವೃತ್ತಿ ಪಡೆದಿದ್ದರು.

ವೀರಶೈವ ಧರ್ಮ, ವಾಗರ್ಥ, ಮಧ್ಯಕಾಲೀನ ಕನ್ನಡ ಸಾಹಿತ್ಯ ಮತ್ತು ಅಸ್ಪೃಶ್ಯತೆ, ಪುರಾಣ ಸೂರ್ಯಗ್ರಹಣ ಸೇರಿ ಅನೇಕ ಕೃತಿಗಳನ್ನು ರಚಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಚಿದಾನಂದಮೂರ್ತಿ ಭಾಜನರಾಗಿದ್ದರು…

ಹಂಪಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರದ್ದರು. ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕೆಂದು ಹೋರಾಟ ನಡೆಸಿದವರ ಪೈಕಿ ಚಿದಾನಂದಮೂರ್ತಿಯವರೂ ಪ್ರಮುಖರು. ಸುಮಾರು 1985ರ ಸಂದರ್ಭದಲ್ಲಿ ಸಾಹಿತಿಗಳ, ಕಲಾವಿದರ ಬಳಗದ ಮೂಲಕ ಆಗಿನ ಮುಖ್ಯಮಂತ್ರಿ, ಸಚಿವ ಸಂಪುಟ, ಶಾಸಕರ ಮೇಲೆ ಒತ್ತಡ ತಂದು ವಿಶ್ವವಿದ್ಯಾಲಯ ಸ್ಥಾಪನೆಗೆ ಓಡಾಡಿದ್ದರು…

ಸಂಶೋಧನೆ, ಸಾಹಿತ್ಯ ಸೇವೆ ಜತೆ ಸಮಾಜ ಸೇವೆಯಲ್ಲೂ ಚಿದಾನಂದಮೂರ್ತಿ ಮುಂದಿದ್ದರು. ಬರ, ನೆರೆಯಂತಹ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನೆರವಾಗಿದ್ದರು. ಉದಾಹರಣೆಗೆ, 2012ರಲ್ಲಿ ರಾಜ್ಯ ತೀವ್ರವಾಗಿ ಬರ ಎದುರಿಸಿದ್ದಾಗ ‘ಬರ ಪರಿಹಾರ ನಿಧಿ ಬಳಗ’ ಸ್ಥಾಪಿಸಿ ನೆರವಾಗಿದ್ದರು. ತೀವ್ರ ಬರಪೀಡಿತ ಪ್ರದೇಶಗಳಿಗೆ ಹೋಗಿ ಮೇವು ಧಾನ್ಯ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು…
ಹೀಗಿದ್ದ ಸಾಹಿತಿ ಎಂ.ಚಿದಾನಂದ ಮೂರ್ತಿ ಈಗ ನಮನ್ನು ಅಗಲಿದ್ದಾರೆ. ಅವರ ಬಗೆಗೆ ಎಡ ಪಂಥೀಯರ ಏನೇ ತಕರಾರು ಇದ್ದರೂ ನಮನ್ನು ಅಗಲಿದ ಎಂ.ಚಿದಾನಂದಮೂರ್ತಿಯವರಿಗಿದೋ ನಮನಗಳು…

***********

Image result for photos of chidanandamurthy books
Image result for photos of chidanandamurthy books
Image result for photos of chidanandamurthy books

Leave a Reply

Back To Top