ಸಾಮಾಜಿಕ ಸಮಾನತೆ ಬಸವಣ್ಣ

ಬಸವಜಯಂತಿ ವಿಶೇಷ ಬರಹ

ಆಶಾ ಸಿದ್ದಲಿಂಗಯ್ಯ

Basavanna: Age, Photos, Family, Biography, Movies, Wiki & Latest News -  FilmiBeat

ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ

ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದೆನಿಸಯ್ಯಾ

ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.

ಶೂದ್ರರಾದ ರೈತಾಪಿ ಜನರು, ಕಾಯಕಜೀವಿಗಳು, ಮಹಿಳೆಯರು ಮತ್ತು ಪಂಚಮರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪುರುಷ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ಗ ಮತ್ತು ಮೇಲ್ಜಾತಿಯ ಅನುತ್ಪಾದಕ ಪುರುಷರಿಗಾಗಿಯೇ ಬದುಕಿನ ಎಲ್ಲ ಸುಖಭೋಗಗಳು ಮೀಸಲಾಗಿದ್ದವು. ಇವರು ಮಾತ್ರ ಜನಿವಾರ ಧರಿಸುವ ಹಕ್ಕನ್ನು ಪಡೆದಿದ್ದರು.

ಜನಿವಾರ ಧರಿಸುವ ಬ್ರಾಹ್ಮಣ ಓದಿರಬಹುದು, ಬರೆದಿರಬಹುದು ಆದರೆ ಕಾಯಕಜೀವಿಯಾಗಿ ಉತ್ಪಾದನೆಯಲ್ಲಿ ತೊಡಗಿಲ್ಲ. ಉತ್ಪಾದನೆಯ ಅನುಭವದಿಂದ ಬರುವ ಜ್ಞಾನವನ್ನು ಹಿಂದಿನ ಕಾಲದಲ್ಲಿ ಅವನೆಂದೂ ಪಡೆಯಲಿಲ್ಲ. ಕ್ಷತ್ರಿಯ ನಾಗಿರಬಹುದು ಆದರೆ ಉತ್ಪಾದನೆಯಲ್ಲಿ ತೊಡಗಲಿಲ್ಲ. ವೈಶ್ಯ ವಸ್ತುಗಳ ಮಾರಾಟ ಮಾಡಿರಬಹುದು, ಕೃಷಿಭೂಮಿಯ ಒಡೆಯನೂ ಆಗಿರಬಹುದು ಆದರೆ ಸ್ವತಃ ಉತ್ಪಾದನೆ ಮಾಡಲಿಲ್ಲ.ಈ ಮೂರೂ ವರ್ಣದವರಿಗೂ ಜನಿವಾರ ಇದೆ.

ಆದರೆ ಉತ್ಪಾದನೆಯಲ್ಲಿ ತೊಡಗಿದ ಕಾಯಕ ಜೀವಿಗಳಿಗೆ ಮತ್ತು ಪಂಚಮರಿಗೆ ಜನಿವಾರ ಇಲ್ಲ. ಯಾರಿಗೆ ಜನಿವಾರ ಇತ್ತೋ ಅವರು ದುಡಿಯದೆ ಸುಖ ಜೀವನವನ್ನು ಅನುಭವಿಸಿದರು. ಯಾರಿಗೆ ಜನಿವಾರ ಇದ್ದಿದ್ದಿಲ್ಲವೂ ಅವರು ದುಡಿದೂ ಕಷ್ಟ ಜೀವನವನ್ನು ಅನುಭವಿಸಿದರು. ಅಂತೆಯೆ ಬಸವಣ್ಣನವರು ಕಟ್ಟ ಕಡೆಗೆ ಮನುಷ್ಯನ ಕಡೆಗೆ ಬಂದರು ಈ ಅನ್ಯಾಯದ ವಿರುದ್ಧ ಸಿಡಿದೆದ್ದರು.

“ಜಾತಿ ಸಂಕರವಾದ ಬಳಿಕ ಕುಲವನರಸುವರೆ ?” ಎಂದು ಪ್ರಶ್ನಿಸಿ ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶೂದ್ರರಿಗೆ, ಮಹಿಳೆಯರಿಗೆ ಮತ್ತು ಪಂಚಮರಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದರು. ಅವರೆಲ್ಲ ಅನುಭವ ಮಂಟಪದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಭಾರತದಲ್ಲಿ ವಿವಿಧ ಜಾತಿಗಳ ಕಾಯಕಜೀವಿಗಳು ಮೊದಲ ಬಾರಿಗೆ ಜಾತಿಯನ್ನು ಮೀರಿ ಒಂದು ವರ್ಗವಾಗಿದ್ದು ಶರಣ ಸಂಕುಲದಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅವರೆಲ್ಲ ತಮ್ಮ ಕಾಯಕಗಳ ಹೆಸರುಗಳನ್ನು ಅಭಿಮಾನದಿಂದ ಉಳಿಸಿಕೊಂಡರು. ಆದರೆ ಆ ಕಾಯಕಗಳ ಒಳಗೆ ಇದ್ದ ಜಾತಿ ವಿಷವನ್ನು ಹೊರ ಹಾಕಿದರು. ಹೀಗೆ ಶರಣರಲ್ಲಿ ಸಮಗಾರ, ಮಾದಾರ, ಮೇದಾರ, ಡೋಹರ, ಅಂಬಿಗ ಮುಂತಾದ ಪದಗಳು ಜಾತಿ ಸೂತಕವನ್ನು ಕಳೆದುಕೊಂಡು ಕಾಯಕ ಸೂಚಕಗಳಾಗಿ ಉಳಿದವು.



Leave a Reply

Back To Top