ಶಿಕ್ಷಣ

ಮೌಲ್ಯಯುತ ಜೀವನಕ್ಕೆ ಶಿಸ್ತು

Image result for images of school children  in drill

ರಮೇಶ ಇಟಗೋಣಿ

ಮೌಲ್ಯಯುತ ಜೀವನಕ್ಕೆ ಶಿಸ್ತು : ಪಾಲಕರು, ಶಿಕ್ಷಕರು, ವಿದ್ಯಾರ್ಥಿಗಳು

ವಿದ್ಯಾರ್ಥಿ ಜೀವನದಲ್ಲಿ ಮುಂದೆ ಗುರಿ ಹಿಂದೆ ಗುರು ಇರಬೇಕು. ವಿದ್ಯೆಯನ್ನು ಅರ್ಥೈಸಿಕೊಂಡು ಕಲಿಯುವ, ಗ್ರಹಿಸುವ ಸಾಮರ್ಥ್ಯ ಸಂಪಾದಿಸುವವನೇ ವಿದ್ಯಾರ್ಥಿ. ಕಲಿಕಾರ್ಥಿಗೆ ಏಕಲವ್ಯನಂತಹ ಉತ್ಕಟವಾದ ಕಲಿಕೆಯ ಹಸಿವು ಇದ್ದಲ್ಲಿ ವಿದ್ಯೆಯನ್ನು ಒಲಿಸಿಕೊಳ್ಳುವುದು ಕಷ್ಟ ಆಗಲಾರದು. ಮಕ್ಕಳಾಗಿ ಕಲಿಯುವುದು ಎಷ್ಟು ಚಂದವೋ ಅಷ್ಟೇ ಗುರುವಾಗಿ ಕಲಿಸೋದು ಅಷ್ಟೇ ಅಂದವಾಗಿದೆ. ಸಾವಿರಾರೂ ಕಲ್ಲುಗಳನ್ನು ಸುಂದರವಾದ ಮೂರ್ತಿ ಮಾಡುವ ಬ್ರಹ್ಮ ಶಿಕ್ಷಕ. ಸ್ಟುಡೆಂಟ್ ಲೈಫ್ ಇಸ್ ಗೋಲ್ಡನ್ ಲೈಫ್ ಆದರೆ ಟೀಚರ್ ಲೈಫ್ ಇಸ್ ಡೈಮಂಡ್ ಲೈಫ್.

ಮಕ್ಕಳಲ್ಲಿ ಶಿಸ್ತನ್ನು ರೂಢಿಸುವ ಕಾರ್ಯ ಮನೆಯಿಂದಲೇ ಆರಂಭವಾಗಬೇಕು “ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು” ಎಂಬಂತೆ ಶಿಸ್ತಿನ ಪಾಲನೆ ಕೆವಲ ವಿದ್ಯಾರ್ಥಿ ಜೀವನದ ಭಾಗವಲ್ಲ ಈಡೀ ಜೀವನದುದ್ದಕ್ಕೂ ಶಿಸ್ತು ಒಂದು ಅವಿಭಾಜ್ಯ ಅಂಗ. “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬಂತೆ ಮಕ್ಕಳಿಗೆ ಶಿಸ್ತನ್ನು ಕಾದುಕೊಳ್ಳಲು ತಿಳಿ ಹೇಳುವುದು ಪಾಲಕರ ಕರ್ತವ್ಯವಾಗಿದೆ. ಶಿಕ್ಷಣದಿಂದ ಒಳ್ಳೆಯ ನಡತೆಯನ್ನು ಅಳವಡಿಸಿಕೊಳ್ಳುವುದೇ ಶಿಸ್ತು, ಶಿಕ್ಷೆಯೇ ಶಿಸ್ತಲ್ಲ ಶಿಕ್ಷೆಯಿಂದ ಮಾತ್ರ ಶಿಸ್ತು ರೂಢಿಸಿಕೊಳ್ಳಲು ಸಾಧ್ಯವಿಲ್ಲ.

ಜೀವನದಲ್ಲಿ ಯಾವ ವಿದ್ಯಾರ್ಥಿ ಶಿಸ್ತು ಅಳವಡಿಸಿಕೊಳ್ಳುತ್ತಾನೆಯೋ, ಯಾರು ಶಿಸ್ತಿನ ಶಿಪಾಯಿಗಳಾಗಿ ಓದುತ್ತಾರೆಯೋ ಅಂತಹ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ ಅಂತವರು ಮಾತ್ರ ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ. ಶಿಕ್ಷಣ ಎಂದರೆ ಓದಿ ಉದ್ಯೋಗ ಗಿಟ್ಟಿಸಿಕೊಳ್ಳುವುದಲ್ಲ ನಿಮ್ಮಲ್ಲಿ ವ್ಯಕ್ತಿತ್ವವನ್ನು, ಮನುಷ್ಯತ್ವವನ್ನು, ಸಂಸ್ಕಾರವನ್ನು, ಉತ್ತಮ ಗುಣಗಳನ್ನು ಪಡೆಯುವುದೇ ಶಿಕ್ಷಣವಾಗಿದೆ.

ವಿದ್ಯಾರ್ಥಿ ತನ್ನ ಜೀವನದಲ್ಲಿ ಗುರಿ ಸಾಧಿಸಬೇಕಾದರೆ ಕೆಲವೊಂದು ನಿಯಮ ಪಾಲಿಸಬೇಕಾಗುತ್ತದೆ. ಅದರಲ್ಲೂ ಶಿಸ್ತು ಮತ್ತು ಸಮಯಪ್ರಜ್ಞೆ, ಹಿರಿಯರನ್ನು ಗೌರವಿಸುವ ಗುಣ, ಸಂಯಮದ ನಡವಳಿಕೆಗಳು ಹೆಚ್ಚಾಗಬೇಕು ಇವುಗಳನ್ನು ಯಾರು ಸರಿಯಾಗಿ ಅರ್ಥ ಮಾಡಿಕೊಳ್ಳುತ್ತಾರೋ ಅಂತವರು ಜೀವನದಲ್ಲಿ ಏನಾದರೂ ಸಾಧನೆ ಮಾಡುತ್ತಾರೆ ಇಲ್ಲವಾದರೆ “ಮಿಂಚಿ ಹೋದ ಕಾಲಕ್ಕೆ ಚಿಂತಿಸಿ ಫಲವಿಲ್ಲ” ಎಂಬಂತೆ ಜೀವನದುದ್ದಕ್ಕೂ ಗೊಂದಲದಲ್ಲಿ ಉಳಿಯುತ್ತಾರೆ.

“ಒಡೆದ ಮುತ್ತು ಕಳೆದ ಹೊತ್ತು” ಯಾವತ್ತೂ ತಿರುಗಿ ಬಾರದು ಎಂಬ ಮಾತಿನಂತೆ ಸಿಕ್ಕಂತ ಸಮಯವನ್ನು ಬಳಸಿಕೊಂಡು ಅವಕಾಶಗಳನ್ನು ಸೃಷ್ಟಿಸುತ್ತಾ ಹೋಗಬೇಕು. ಸಮಯ ಎಲ್ಲರಿಗೂ ಒಂದೇ ಅದನ್ನು ಅರಿತು ಹೆಜ್ಜೆ ಇಡುವುದು ಸಮಂಜಸ. ವಿದ್ಯಾರ್ಥಿಗಳಿಗೆ ಒಂದು ವರ್ಷದ ಮಹತ್ವ ತಿಳಿಯುವುದು ಪರೀಕ್ಷೆಯಲ್ಲಿ ಉತ್ತಿರ್ಣರಾದಾಗ ಮಾತ್ರ, ಸಿಕ್ಕ ಅವಕಾಶವನ್ನು ಆಯಾ ಸಮಯದಲ್ಲಿ ಸರಿಯಾಗಿ ಬೆಳೆಸಿಕೊಳ್ಳುತ್ತಾ ಶಿಸ್ತಿನ ಜೊತೆಗೆ ಸಾಧನೆಯು ನಿಮ್ಮನ್ನು ಬೆನ್ನಟ್ಟಿ ಬರುತ್ತದೆ.

ಶಿಸ್ತು ಎಂದರೆ ಕೆಲವರ ಮನಸ್ಸಿಗೆ ನಿಯಂತ್ರಣ ಹಾಕಿಕೊಳ್ಳುತ್ತಾರೆ ಬದುಕಿನ ಇತಿಮಿತಿಗಳನ್ನು, ಎಲ್ಲೆಯನ್ನು ಹಾಕಿಕೊಳ್ಳುತ್ತಾರೆ ಸಂತೋಷದ ಎಲ್ಲ ವಿಚಾರಗಳಿಂದ ದೂರ ಇರುತ್ತಾರೆ ಇದು ಶಿಸ್ತು ಅಲ್ಲ. ಬದುಕಿನೊಂದಿಗೆ ಶಿಸ್ತು ರೂಢಿಸಿಕೊಳ್ಳುವುದೆಂದರೆ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಏಕಾಗ್ರತೆಯಿಂದ ತಮ್ಮೊಳಗಿನ ಶಕ್ತಿಯನ್ನು ಹರಿಬಿಡುವುದರ ಜೊತೆಗೆ ಇತರರ ಮಾತುಗಳಿಗೆ ಒಳಗಾಗದೇ ಕೆಟ್ಟ ಅಭ್ಯಾಸಗಳಿಗೆ ಬಲಿಯಾಗದೆ ಸರಿಯಾದ ಮನಸ್ಥಿತಿಯನ್ನು ಬೆಳೆಸಿಕೊಳ್ಳುವುದೇ ಶಿಸ್ತು.

ಎಲ್ಲ ವಿದ್ಯಾರ್ಥಿಗಳ ಜೀವನದಲ್ಲಿ ಗುರುವಿನ ಪಾತ್ರ ಅಮೂಲ್ಯವಾದದ್ದು ಶಿಕ್ಷಕರು ಕೂಡಾ ಒಬ್ಬ ನಿರಂತರ ವಿದ್ಯಾರ್ಥಿಯಾಗಿ ಬಹಳ ವಿಚಾರಗಳನ್ನು ವಿದ್ಯಾರ್ಥಿಗಳಿಂದ ಕಲಿತುಕೊಳ್ಳುತ್ತಾರೆ. ತಮ್ಮಲ್ಲಿರುವ ಎಲ್ಲ ಒಳ್ಳೆಯ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಬಿತ್ತರಿಸಿ ಮೌಲ್ಯಯುತ ಮೂರ್ತಿಯನ್ನಾಗಿ ರೂಪಿಸುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಪ್ರೀತಿಸಿ, ಬೋಧಿಸಿ ಒಳ್ಳೆಯ ಮೌಲ್ಯ ತುಂಬಿ ನಿಸ್ವಾರ್ಥ ಸೇವೆ ಸಲ್ಲಿಸುವಲ್ಲಿ ಶಿಕ್ಷಕರದು ಒಂದು ಕೈ ಮೇಲೆ ಇರುತ್ತದೆ. “ಹರ ಮುನಿದರೂ ಗುರು ಮುನಿಯಲಾರ” ಎಂಬ ಮಾತಿನಂತೆ ಅಂತಹ ಪ್ರತಿಯೊಬ್ಬ ಗುರುವಿಗೂ ನನ್ನ ಅನಂತಕೋಟಿ ನಮನಗಳು.

*****************************

Leave a Reply

Back To Top