ಜ್ಞಾನಪೀಠ ವಿಜೇತರು

ಮಾಸ್ತಿ ವೆಂಕಟೇಶ ಅಯ್ಯಂಗಾರ್

Image result for photos of masti venkatesh iyengar

ಕನ್ನಡದ ಆಸ್ತಿ’ ಮಾಸ್ತಿ ವೆಂಕಟೇಶ ಅಯ್ಯಂಗಾರ್..!

‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದರು ‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು..!

ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು.
ಮಾಸ್ತಿ ವೆಂಕಟೇಶ ಅಯ್ಯಂಗಾರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು…

ತಿರುಮಲ್ಲಮ್ಮ ದಂಪತಿಗಳಿಗೆ ೮-೬-೧೮೯೧ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಮೈಸೂರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಪ್ರಥಮ ದರ್ಜೆಯಲ್ಲಿ ಎಫ್.ಎ. ಪದವಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ೧೯೧೨ರಲ್ಲಿ ಬಿ.ಎ. ಮತ್ತು ೧೯೧೩ರಲ್ಲಿ ಎಂ.ಸಿ.ಎಸ್. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರು. ಮುಂದೆ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಿಂದ ಎಂ.ಎ. (ಇಂಗ್ಲಿಷ್) ಪದವಿ ಪಡೆದರು.

ಇವರು ೧೯೧೪ರಲ್ಲಿ ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ಮಾಸ್ತಿ ಅವರು ಸಬ್ ಡಿವಿಜನ್ ಆಫೀಸರ್ (೧೯೨೭) ಮ್ಯಾಜಿಸ್ಟ್ರೇಟ್ ಮತ್ತು ಕಂಟ್ರೋಲರ್ (೧೯೩0) ಡೆಪ್ಯುಟಿ ಕಮೀಷನರ್ (೧೯೩೪) ಎಕ್ಸೈಜ್ ಕಮೀಷನರ್ (೧೯೪0) ಮೊದಲಾದ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ೧೯೪೩ ಸ್ವಇಚ್ಛೆಯಿಂದ ಸರ್ಕಾರಿ ಸೇವೆಯಿಂದ ನಿವೃತ್ತರಾದರು…

ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ (೧೯೪೩-೪೮), ಅಧ್ಯಕ್ಷರಾಗಿ (೧೯೫0-೬೪) ಸೇವೆ ಸಲ್ಲಿಸಿರುವ ಇವರು ‘ಜೀವನ’ ಮಾಸಪತ್ರಿಕೆಯನ್ನು ೨೫ ವರ್ಷ ಪ್ರಕಟಿಸಿದರು. ಕನ್ನಡ ಏಕೀಕರಣಕ್ಕೆ ಶ್ರಮಿಸಿದರು. ಸಹಾಯನಿಧಿ ಮೂಲಕ ಕನ್ನಡ ಲೇಖಕರನ್ನು ಬೆಳಕಿಗೆ ತಂದರು. ಪಿಇಎನ್ ಸಂಸ್ಥೆಯ ಉಪಾಧ್ಯಕ್ಷರಾಗಿ (೧೯೬೪) ಆಯ್ಕೆಯಾಗಿದ್ದರು. ೧೯೪೨ರಲ್ಲಿ ಅಖಿಲ ಭಾರತ ಪ್ರಾಚ್ಯ ಸಮ್ಮೇಳನದ ಕನ್ನಡ ವಿಭಾಗದ ಅಧ್ಯಕ್ಷರಾಗಿದ್ದರು. ಅನೇಕ ಅಖಿಲ ಭಾರತ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ ಮಾಸ್ತಿಯವರು…

ಮೈಸೂರು ಮಹಾರಾಜರು ರಾಜಸೇವಾ ಪ್ರಸಕ್ತ ಬಿರುದನ್ನು ೧೯೪೨ರಲ್ಲಿ ನೀಡಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್(೧೯೫೬), ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ(೧೯೬೮), ವರ್ಧಮಾನ ಪ್ರಶಸ್ತಿ (೧೯೮೩), ಮೈಸೂರು ವಿಶ್ವವಿದ್ಯಾನಿಲಯದ ಡಾಕ್ಟರೇಟ್(೧೯೭೭), ಭಾರತೀಯ ಜ್ಞಾನಪೀಠ ಪ್ರಶಸ್ತಿ (೧೯೮೩), ಕರ್ನಾಟಕ ಸರ್ಕಾರದ ಸನ್ಮಾನ (೧೯೮೪), ನಾಡಿನ ನಾನಾ ಸಂಸ್ಥೆಗಳಿಂದ ನೂರಾರು ಸನ್ಮಾನ, ಪ್ರಶಸ್ತಿ, ಗೌರವಗಳು ಮಾಸ್ತಿ ಅವರಿಗೆ ಸಂದಿವೆ…

ಕನ್ನಡ ಸಣ್ಣಕತೆಗಳ ಜನಕರೆಂದೇ ಖ್ಯಾತಿ ಹೊಂದಿದ ಮಾಸ್ತಿ ಅವರು ನೂರಕ್ಕೂ ಮೀರಿ ಕೃತಿಗಳನ್ನು ವಿವಿಧ ವಿಷಯಗಳ ಮೇಲೆ ರಚಿಸಿ ಕನ್ನಡವನ್ನು ಬೆಳೆಸಿದವರಲ್ಲಿ ಒಬ್ಬರಾಗಿದ್ದಾರೆ. ಇಲ್ಲಿ ಅವರ ಕೆಲವು ಕೃತಿಗಳನ್ನು ಉದಾಹರಿಸಿದೆ…

ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು. 1910 ರಲ್ಲಿ ಬರೆದ ‘ರಂಗನ ಮದುವೆ’ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩…

ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲದಲ್ಲಿ ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು…

Image result for photos of masti venkatesh iyengar

ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ‘ಚಿಕವೀರ ರಾಜೇಂದ್ರ’ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”.
“ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥವಾಗಿದೆ…

ಸಣ್ಣ ಕತೆಗಳ ಸಂಗ್ರಹ.–

ಸಣ್ಣಕತೆಗಳು (೫ ಸಂಪುಟಗಳು).
ರಂಗನ ಮದುವೆ.
ಮಾತುಗಾರ ರಾಮಣ್ಣ.

ನೀಳ್ಗತೆ.–

ಸುಬ್ಬಣ್ಣ (೧೯೨೮).
ಶೇಷಮ್ಮ(೧೯೭೬).

ಕಾವ್ಯ ಸಂಕಲನಗಳು–

ಬಿನ್ನಹ, ಮನವಿ(೧೯೨೨).
ಅರುಣ(೧೯೨೪).
ತಾವರೆ(೧೯೩೦).
ಸಂಕ್ರಾಂತಿ(೧೯೬೯).
ನವರಾತ್ರಿ(೫ ಭಾಗ ೧೯೪೪-೧೯೫೩)
ಚೆಲುವು, ಸುನೀತ.
ಮಲಾರ.
ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ).

ಜೀವನ ಚರಿತ್ರೆ.–

ರವೀಂದ್ರನಾಥ ಠಾಕೂರ(೧೯೩೫).
ಶ್ರೀ ರಾಮಕೃಷ್ಣ(೧೯೩೬).

ಪ್ರಬಂಧ–

ಕನ್ನಡದ ಸೇವೆ(೧೯೩೦).
ವಿಮರ್ಶೆ (೪ ಸಂಪುಟ ೧೯೨೮-೧೯೩೯).
ಜನತೆಯ ಸಂಸ್ಕೃತಿ(೧೯೩೧).
ಜನಪದ ಸಾಹಿತ್ಯ(೧೯೩೭).
ಆರಂಭದ ಆಂಗ್ಲ ಸಾಹಿತ್ಯ(೧೯೭೯).

ನಾಟಕಗಳು.–

ಶಾಂತಾ, ಸಾವಿತ್ರಿ, ಉಷಾ (೧೯೨೩).
ತಾಳೀಕೋಟೆ(೧೯೨೯).
ಶಿವಛತ್ರಪತಿ(೧೯೩೨).
ಯಶೋಧರಾ(೧೯೩೩).
ಕಾಕನಕೋಟೆ(೧೯೩೮).
ಲಿಯರ್ ಮಾಹಾರಾಜ.
ಚಂಡಮಾರುತ, ದ್ವಾದಶರಾತ್ರಿ.
ಹ್ಯಾಮ್ಲೆಟ್.
ಶೇಕ್ಸ್ ಪಿಯರ್ ದೃಶ್ಯಗಳು ೧,೨,೩.
ಪುರಂದರದಾಸ.
ಕನಕಣ್ಣ.
ಕಾಳಿದಾಸ.
ಅಜ್ಜನದಾರಿ, ಭಟ್ಟರಮಗಳು, ವಿಮಲಾ ಮರಿಯಾನ್.
ಬಾನುಲಿ ದೃಶ್ಯಗಳು.

ಕಾದಂಬರಿಗಳು.–

ಚೆನ್ನಬಸವ ನಾಯಕ(೧೯೫೦).
ಚಿಕವೀರ ರಾಜೇಂದ್ರ(೧೯೫೬).

ಆತ್ಮಚರಿತ್ರೆ.–

ಭಾವ.

ಹೀಗೆ ಅನೇಕಾನೇಕ ಕೃತಿಗಳ ರಚನೆಯೊಂದಿಗೆ ಮಾಸ್ತಿ‌‌ ವೆಂಕಟೇಶ ಅಯ್ಯಂಗಾರ್ ಅವರು ಬದುಕಿ‌ ಬಾಳಿದರು..!
— ಕೆ.ಶಿವು.ಲಕ್ಕಣ್ಣವರ

ಕೆ.ಶಿವು ಲಕ್ಕಣ್ಣವರ

Leave a Reply

Back To Top