ಮೇ-ದಿನದ ವಿಶೇಷ

ಹಮೀದಾ ಬೇಗಂ ದೇಸಾಯಿ

ಕಾರ್ಮಿಕರ ದಿನ…

ಪ್ರತಿ ವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನ, ಲೇಬರ್ಸ ಡೇ ,ಮೇ ಡೇ ಎಂದು ಆಚರಿಸಲಾಗುತ್ತದೆ. ಕಾರ್ಮಿಕರ ಶ್ರಮವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಮೀಸಲಾಗಿ ಇಟ್ಟಿರುವಿರಿ. ವಿವಿಧ ದೇಶಗಳಲ್ಲಿ ಅಧಿಕೃತ ಸಾರ್ವಜನಿಕ ರಜಾ ದಿನವನ್ನು ಮಾಡಿದ್ದಾರೆ. ಉದಾ: ಕ್ಯೂಬಾ , ಚೀನಾ , ಭಾರತ ಹಾಗೂ ಇನ್ನಿತರ ದೇಶಗಳು. ಆದರೆ ಭಾರತದಲ್ಲಿ 1923 ನೇ ಇಸ್ವಿಯ ಮೇ 1 ರಂದು ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದುಸ್ತಾನ್ ಸ್ಥಾಪನೆಗೊಂಡ ದಿನದಿಂದ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲು ಆರಂಭ ಆಯಿತು. ಆ ಸಮಯದಲ್ಲಿ ಇದನ್ನು ಮದ್ರಾಸ್ ಡೇ ಎಂದು ಕರೆಯುತ್ತಿದ್ದರು. ಈ ದಿನದಂದು ರಾಷ್ಟ್ರೀಯ ರಜಾ ದಿನವನ್ನಾಗಿ ಘೋಷಣೆ ಮಾಡಬೇಕೆಂದು ಹಾಗೂ ಕಾರ್ಮಿಕರಿಗೆ ಅಂದಿನ ದಿನ ರಜೆ ನೀಡಬೇಕೆಂದು ಸದನದಲ್ಲಿ ಮಸೂದೆಯನ್ನು ಮಂಡಿಸಲಾಯಿತು. ಅಂದಿನಿಂದ ಭಾರತದಲ್ಲಿ ಪ್ರತಿ ವರ್ಷ ಮೇ 1 ರಂದು ಕಾರ್ಮಿಕರ ದಿನಾಚರಣೆ ಆಚರಿಸಲಾಗುತ್ತದೆ. ವಿವಿಧ ರಾಷ್ಟ್ರಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಆಚರಿಸಲ್ಪಡುತ್ತದೆ.

ವಿಶ್ವ ಕಾರ್ಮಿಕರ ದಿನದ ಇತಿಹಾಸ ಮತ್ತು ಮಹತ್ವ

ಅಮೇರಿಕಾದಲ್ಲಿ ಕೈಗಾರಿಕಾ ಕ್ರಾಂತಿಯ ನಂತರ ಕಾರ್ಮಿಕರನ್ನು ವಿಪರೀತ ದುಡಿಸಿಕೊಳ್ಳಲಾಗುತ್ತಿತ್ತು. ಇದನ್ನು ವಿರೋಧಿಸಲು 1886 ರಲ್ಲಿ ಕಾರ್ಮಿಕರ ಒಕ್ಕೂಟವು ಒಂದು ದಿನಕ್ಕೆ 16 ಗಂಟೆಗಳ ಬದಲಾಗಿ 8 ಗಂಟೆಗಳ ಕೆಲಸಕ್ಕಾಗಿ ಮುಷ್ಕರ ಘೋಷಿಸಿತು. ಸಹಸ್ರ ಸಂಖ್ಯೆಯಲ್ಲಿ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿದರು. ಇದನ್ನು ನಿಯಂತ್ರಿಸಲು ಪೋಲಿಸರು ಗುಂಡಿನ ದಾಳಿ ನಡೆಸಿದರು. ಇದರಲ್ಲಿ ಅನೇಕ ಕಾರ್ಮಿಕರು ಸಾವನ್ನಪ್ಪಿದರು , ಕೆಲವರು ಗಾಯಗೊಂಡರು. ಈ ಘಟನೆಯ ನಂತರ ಕಾರ್ಮಿಕರ ಹಕ್ಕುಗಳಿಗಾಗಿ ಸಾಗರೋತ್ತರ ಚಳುವಳಿ ಆರಂಭವಾಯಿತು. ಕೊನೆಗೆ 1916 ರಲ್ಲಿ ಅಮೇರಿಕಾ ಸಂಯುಕ್ತ ಸಂಸ್ಥಾನವು 8 ಗಂಟೆಗಳ ಕೆಲಸದ ಅವಧಿಯನ್ನು ಘೋಷಿಸಿತು. ಕಾರ್ಮಿಕ ಹಕ್ಕುಗಳ ಹೋರಾಟಕ್ಕೆ ಮತ್ತು ಕಾರ್ಮಿಕರ ಪ್ರಭುತ್ವದ ನೆನಪಿಗೆ 1889 ರಲ್ಲಿ ಮೊದಲ ಬಾರಿಗೆ ಮೇ 1 ರಂದು ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು ಎಂದು ಹೇಳಲಾಗುತ್ತದೆ. ಪ್ಯಾರಿಸಿನಲ್ಲಿ ನಡೆದ ಅಂತಾರಾಷ್ಟ್ರೀಯ ಸಮಾಜವಾದಿ ಪ್ರಥಮ ಅಧಿವೇಶನದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಆಚರಣೆಯ ಉದ್ದೇಶ…

ವಿಶ್ವದಾದ್ಯಂತ ಕಾರ್ಮಿಕರಿಗೆ ಸಮಾನತೆ ಮತ್ತು ನ್ಯಾಯವನ್ನು ಒದಗಿಸಲು ನಡೆದ ಐತಿಹಾಸಿಕ ತ್ಯಾಗ ಮತ್ತು ಹೋರಾಟದ ಸ್ಮರಣಾರ್ಥ ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನ ವನ್ನು ಕಾರ್ಮಿಕ ಸಮುದಾಯಗಳ ಕೊಡುಗೆಗೆ ಸ್ಪಂದಿಸುವ ಜೊತೆಗೆ , ಇನ್ನಷ್ಟು ಉದ್ಯೋಗಾವಕಾಶ ಸೃಷ್ಟಿಸಲು , ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸಲು , ಸಾಮಾಜಿಕ ರಕ್ಷಣೆಯನ್ನು ನೀಡಲು ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಹಾಯ ಮಾಡುವ ಉದ್ದೇಶದಿಂದ ಆಚರಿಸಲಾಗುತ್ತದೆ.

ಆಧಾರ : ವಿವಿಧ ಮೂಲಗಳಿಂದ.


ಹಮೀದಾ ಬೇಗಂ ದೇಸಾಯಿ

2 thoughts on “

Leave a Reply

Back To Top