ಚಂದ್ರಾವತಿ ಬಡ್ಡಡ್ಕ
ನಾನು- ಛೇ ನೀವು ಎಲ್ಲಿ ಹೋದ್ದು? ಸಚಿನ್ ಸರೀ ಹೊಡ್ದ, ನೋಡ್ಬೇಕಿತ್ತು…
ಅಮ್ಮ- ಹೊಡ್ದನಾ…. ಯಾರಿಗೆ ಹೊಡ್ದಾ? ಆಚೆ ಪಾರ್ಟಿಯವನಿಗೆ ಹೊಡ್ದದ್ದದ್ದಾ…. ಯಾಕೆ ಹೊಡ್ದದ್ದು…?
ಶ್ರೀಪತಿ- ಅಲ್ಲಮ್ಮಾ ರನ್ ಬಾರಿಸಿದ.
ಅಮ್ಮ- ಹ್ಞಾ.. ಹಾಗಾ…. ನಾನು ಆಚೆ ಪಾರ್ಟಿಗೆ ಹೊಡ್ಡದ್ದದ್ದಾ ಅಂತ ನೆನ್ಸಿದೆ.
ನಾನು- ಹ್ಹೋ…. ವೋ….. ವಿಕೆಟ್…. ಇಲ್ಲ ಥರ್ಡ್ ಅಂಪಾಯರ್
ಅಮ್ಮ- ಏನಾಯ್ತು….ಏನಾಯ್ತು…
ನಾನು- ಸ್ವಲ್ಪ ಇರಿ…. ಧರ್ಡ್ ಅಂಪಾಯರ್‌ಗೆ ಹಾಕಿದ್ದಾರೆ
ಅಮ್ಮ- ಅದ್ಯಾರು?
ನಾನು- ವಿವರಿಸಿ ಎಂಬಂತೆ ಇವರತ್ತ ನೋಡಿದೆ.
ಶ್ರೀಪತಿ- ಥರ್ಡ್ ಅಂಪಾಯರ್ ಅಂದ್ರೇ….(ಸಾಗಿತು ವಿವರಣೆ)
ನಾನು- ಅಬ್ಬಾ… ನಾಟೌಟ್!
ಅಮ್ಮ- ಇಲ್ವಾ ಸದ್ಯ. ಸ್ವಾಮೀ ದೇವರೇ… (ಮಿಕ್ಕಂತೆ ದೇವರನ್ನು ನಂಬದವರು)
ಶ್ರೀಪತಿ- ಆಹಾ…. ಆರ್ರ್ಹಾ…… ಫೋರ್… ಯೇ… ಇಲ್ಲಲ್ಲ ಸಿಕ್ಸ್
ಅಮ್ಮ- ಅದೆಂಥ?
ನಾನು- ಫೋರ್ ಅಂದ್ರೇ…..(ಫೋರ್- ಸಿಕ್ಸ್ ಬಗ್ಗೆ ಸಣ್ಣ ಉಪನ್ಯಾಸ)
ನಾನು- ವ್ಹಾವ್….. ಹ್ಯೂಜ್ ಸಿಕ್ಸ್!
ಶ್ರೀಪತಿ- ಮತ್ತೊಂದು ಸಿಕ್ಸ್
(ಅಷ್ಟರಲ್ಲಿ ನಾನು ಎದ್ದು ಟಾಯ್ಲೆಟ್‌ಗೆ ಹೋದೆ)
ಅಮ್ಮ- ನೀನು ಎಲ್ಲಿ ಹೋದ್ದು…? ಅಂವ ಸುಮಾರು ಬೌಂಡರಿ ಹೊಡ್ದ. ಆದ್ರೆ ಆಚೆಯ ಹಸಿರು ಡ್ರೆಸ್ ಹಾಕಿದವರು ಗೆರೆ ದಾಟಲು ಬಿಡುವುದೇ ಇಲ್ಲ……
ಶ್ರೀಪತಿ- ಅಯ್ಯೋ ಅದು ಅವರ ಆಟ ಅಮ್ಮಾ. ಇವರು ಬೌಂಡರಿ ಹೊಡೆಯದಂತೆ ತಡೆಯೋದೆ ಅವರ ಕೆಲಸ ಮತ್ತು ಚಾಕಚಕ್ಯತೆ.
ಅಮ್ಮ- ಹೌದಾ….. ಹಾಗಾ..
(ಅಷ್ಟರಲ್ಲಿ ಮೈದುನನ ಅಗಮನ)
ಅಮ್ಮ- ಹೇ… ನೀನು ಯಾಕೆ ಊಟಕ್ಕೆ ಬರ್ಲಿಲ್ಲಾ….. ಆಞ… ಅದೆಂಥ ಕೈಯಲ್ಲಿ….. ಈಗ ಊಟ ಮಾಡ್ತಿಯಾ…. ರಾತ್ರಿ ಊಟಕ್ಕಿದ್ದಿಯಾ….. ಬೇಗ ಬಾ ಮನೆಗೆ…. (ಹೀಗೆ ಮೈದುನ ಹಿಂದೆ ಹೋಗಿ ಒಂದು ಹದ್ನೈದು ನಿಮಿಷ ಹೋಯ್ತು)
ಶ್ರೀಪತಿ: ಹೇ…. ನೋಡ್ನೋಡ್ನೋಡು ಹೇಗೆ ಡೈವ್ ಹೊಡ್ದ. ಎಕ್ಸೆಲಂಟ್ ಕ್ಯಾಚ್……. (ಅವರಿಗೆ ಇಷ್ಟವಾಗಿದ್ದ ಹಳೆಯ ಕ್ಯಾಚ್‌ಗಳ ವಿವರಣೆ…..)
ಅಮ್ಮ: ಮರಳಿ ಬಂದು ಅವರ ಜಾಗದಲ್ಲಿ ಕುಳಿತು, ಏನಾಯ್ತು, ಎಷ್ಟಾಯ್ತು…? ನಂಗೆ ಟೆನ್ಷನ್ ಆಗ್ತದೆ…
ನಾನು: ಯಾಕೆ?
ಅಮ್ಮ: ಇಂಡಿಯಾ ಸೋತರೇ….?
ನಾನು: ಸೋತರೆ ಏನಾಯ್ತು? ಆಟವನ್ನು ಆಟವಾಗಿ ನೋಡಿ, ಯಾರು ಚೆನ್ನಾಗಿ ಆಡ್ತಾರೋ ಅವರೇ ಗೆಲ್ತಾರೆ.
ಅಮ್ಮ: ನಂಗೆ ಟೆನ್ಷನ್ ಆಗ್ತದೆ….
ಶ್ರೀಪತಿ: ಈ ಅಮ್ಮನಿಗೆ ಹೀಗೆ ಬೇಡದ ವಿಷಯಕ್ಕೆ ಟೆನ್ಷನ್ ಮಾಡೇ ಬಿಪಿ ಜಾಸ್ತಿ ಆಗೋದೂ……..
ಅಮ್ಮ: ಲಲಿತ್ಮಾಯಿಗೆ ಫೋನ್ ಮಾಡ್ತೇನೆ….
ನಾನು: ಯಾಕೆ?
ಅಮ್ಮ: ಅವಳಿಗೆ ಕ್ರಿಕೆಟ್ ಚೆನ್ನಾಗಿ ಗೊತ್ತು. ಭಾರತ ಸೋಲ್ತದ ಗೆಲ್ತದಾಂತ ಅವಳು ಹೇಳ್ತಾಳೆ.
ನಾನು ಇವರು ಮುಖ-ಮುಖ ನೋಡ್ಕೊಂಡೆವು
(ವರ್ಷಗಳ ಹಿಂದೆ ಕ್ರಿಕೆಟ್ ನೋಡ್ತಿದ್ದಾಗ ಬರೆದಿದ್ದೆ. ಅರ್ಧಕ್ಕೆ ಬರೆದಿದ್ದ ಇದು ಭೂ(ಕಂಪ್ಯೂಟರ್)ಗತ ವಾಗಿತ್ತು. ಮತ್ತೆ ಹೇಗೆ ಮುಂದುವರಿಸಬೇಕಿದ್ದೆ ಎಂಬುದ ನಂಗೆ ಈಗ ಮರೆತು ಹೋಗಿದೆ. ಹೇಗಿತ್ತೋ ಹಾಗೇ ಪೋಸ್ಟ್ ಮಾಡೋಣ ಅನ್ನಿಸಿತು, ಹಾಗೇ ಮಾಡುತ್ತಿದ್ದೇನೆ)
ಚಂದ್ರಾವತಿ ಬಡ್ಡಡ್ಕ.
ಲೇಖಕರ ಪರಿಚಯ:
ಚಂದ್ರಾವತಿ ಬಡ್ಡಡ್ಕ, ಪತ್ರಿಕೆ ಗಳಲ್ಲಿ ಪೋರ್ಟಲ್ ಗಳಲ್ಲಿ ಕೆಲಸ ಮಾಡಿ ಅನುಭವ . ಸದ್ಯಕ್ಕೆ ವೃತ್ತಿಪರ ಅನುವಾದಕಿ
Soooper