ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಗಝಲ್

moon phot

ರೇಮಾಸಂ
ಡಾ.ರೇಣುಕಾತಾಯಿ.ಎಂ.ಸಂತಬಾ

ಸುಳ್ಳು ಶಬ್ದಗಳ ಪೋಣಿಸಿ ಸರಮಾಲೆ ಹಾಕದಿರು ಗೆಳೆಯ/
ಪೊಳ್ಳು ಮಾತಿನಲಿ ಸಿಲುಕಿಸಿ ಬಲೆಯ ಬೀಸದಿರು ಗೆಳೆಯ//

ಚಂದಿರ ನಕ್ಕಾನು ನಕ್ಷತ್ರಗಳನು ಪಿಡಿದು ಮುಡಿಸುವ ಪರಿಗೆ/
ವಾಸ್ತವಕ್ಕೆ ಮರಳು ಹಗಲುಗನಸು ಕಾಣದಿರು ಗೆಳೆಯ//

ಎದೆಯ ಹೊಲದಲಿ ಪ್ರೀತಿ ಬಿತ್ತಲು ಬೇಕೆನು ಕಾಣಿಕೆ/
ಧನವೇ ಮನವನು ಗೆಲ್ಲುವದೆಂದು ತಿಳಿಯದಿರು ಗೆಳೆಯ//

ವಾಸ್ತವಿಕತೆ ಕನ್ನಡಿಯನು ಗಮನಿಸಿ ನೋಡಲಾರೆಯೇನು/
ಪ್ರೇಮದಲಿ ಮಿಂದ ಕಣ್ಣ ದೃಷ್ಟಿ ಬದಲಿಸಿದಿರು ಗೆಳೆಯ//

ಉಷೆಯಿಂದ ನಿಶೆಯವರೆಗೆ ನಿನ್ನ ನೆನೆಯುವಳು ನೆನಪಿಲ್ಲವೇ/
ಪರರ ನಶೆಯಲಿ ರೇಮಾಸಂನು ಮರೆಯದಿರು ಗೆಳೆಯ//

*****************************

About The Author

Leave a Reply

You cannot copy content of this page

Scroll to Top