ಪ್ರಸ್ತುತ

ಡಾ.ಬಿ.ಆರ್.ಅಂಬೇಡ್ಕರ್..!

ಎಲ್ಲಾ ಜನಾಂಗೀಯ ನಾಯಕ ಮತ್ತು ಸರ್ವರ ಅದರಲ್ಲೂ ದಲಿತರ ಏಳಿಗೆಗಾಗಿ ದುಡಿದ ಡಾ.ಬಿ.ಆರ್.ಅಂಬೇಡ್ಕರ್..!

जानिए कैसे उपनिषदों से प्रभावित थे ...

ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ. ಆ ನಿಮಿತ್ತವಾಗಿ ಈ ಪುಟ್ಟ ಲೇಖನ…

ಅಂದು ಆ ಬಾಲಕ ಅಸ್ಪೃಶ್ಯತೆ, ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಇವತ್ತು ಈ ಅಖಂಡ ಭಾರತದಲ್ಲಿ ಮರೆಯಲಾರದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲವೇನೋ? ಆ ಬಾಲಕ ಯಾರೆಂದು ಕ್ಷಣಮಾತ್ರದಲ್ಲಿ ಊಹಿಸಬಹುದು. ಅದೇ ಡಾ. ಬಿ.ಆರ್. ಅಂಬೇಡ್ಕರ್. ಈ ಹೆಸರು ಹೇಳುತ್ತಿದ್ದಂತೆಯೇ ಮೈ ರೋಮಾಂಚನಗೊಳ್ಳುತ್ತದೆ…

ಭೀಮರಾವ್ ರಾಮ್‍ಜಿ ಅಂಬೇಡ್ಕರ್ ಅವರು ಬಾಲ್ಯದಲ್ಲಿ ಅನುಭವಿಸಿದ ನೋವುಗಳು ಒಂದೇ-ಎರಡೇ? ಅದನ್ನು ಹೇಳುತ್ತಾ ಹೋದರೆ ನಿಜಕ್ಕೂ ಮನಸ್ಸಿಗೆ ನೋವಾಗುತ್ತದೆ…

Dr. Ambedkars dream of social and economic empowerment through ...

ಆಗಿನ್ನೂ ಅಂಬೇಡ್ಕರ್ ಅವರಿಗೆ ಏಳೆಂಟು ವರ್ಷ. ಒಂದು ದಿನ ಆ ಪುಟ್ಟ ಬಾಲಕ ತನ್ನ ತಂದೆಯನ್ನು ನೋಡಲು ಎತ್ತಿನಗಾಡಿಯಲ್ಲಿ ಕುಳಿತು ಸಾಗುತ್ತಿದ್ದ. ಗಾಡಿ ಸ್ವಲ್ಪ ದೂರ ಹೋಗಿತ್ತು. ಎತ್ತಿನ ಗಾಡಿಯವನಿಗೆ ಆ ಹುಡುಗ ದಲಿತ ಎಂಬುದು ತಿಳಿದು ಕೂಡಲೇ ಗಾಡಿಯನ್ನು ನಿಲ್ಲಿಸಿ ಆ ಪುಟ್ಟ ಬಾಲಕನನ್ನು ಕೆಳಕ್ಕೆ ತಳ್ಳಿ ಮುಂದೆ ಸಾಗಿಬಿಟ್ಟ. ಆ ಕ್ಷಣ ಆ ಪುಟ್ಟ ಹುಡುಗನ ಮನಸ್ಸಿಗೆ ಅತ್ಯಂತ ಆಘಾತವಾಯಿತು…

ಇನ್ನೊಮ್ಮೆ ಕೆರೆಯಲ್ಲಿ ನೀರು ಕುಡಿದ ಎಂಬ ಕಾರಣಕ್ಕೆ ಗ್ರಾಮಸ್ಥರೆಲ್ಲ ಸೇರಿ ಬಾಲಕನಿಗೆ ಥಳಿಸಿದರು. ಆಕಸ್ಮಿಕವಾಗಿ ಮಳೆ ಬಂದಿದ್ದರಿಂದ ರಸ್ತೆ ಬದಿಯಲ್ಲಿದ್ದ ಮನೆಯೊಂದರ ಜಗಲಿಯ ಮೇಲೆ ನಿಂತಿದ್ದಕ್ಕೆ ಮನೆಯ ಯಜಮಾನಿ ಕೋಪದಿಂದ ಜಗಲಿಯಿಂದ ತಳ್ಳಿದ್ದಳಂತೆ…

bhimrao ambedkar speech in constitution assembly - हमारा ...

ಕ್ಷೌರಿಕ ಕ್ಷೌರ ಮಾಡದೆ ಹಿಂದಕ್ಕೆ ಕಳುಹಿಸಿದ್ದನಂತೆ. ಹೀಗೆ ಒಂದೇ ಎರಡೇ? ನೂರಾರು ಅವಮಾನ, ಹಿಂಸೆ ಆ ಬಾಲಕನನ್ನು ಇನ್ನಿಲ್ಲದಂತೆ ಕಾಡಿದವು. ನಾವೂ ಮನುಷ್ಯರೇ, ಹಿಂದುಳಿದ ಜನಾಂಗದಲ್ಲಿ ಹುಟ್ಟಿದ್ದೇ ತಪ್ಪಾಯಿತಾ? ಎಂಬ ಭಾವನೆ ಆಗ ಆ ಬಾಲಕನನ್ನು ಕಾಡಿತ್ತು. ಅದಕ್ಕೆಲ್ಲಾ ಹೆದರಿ ಆ ಬಾಲಕ ಮುದುರಿ ಕೂತಿದ್ದರೆ ಇವತ್ತು ಜಗತ್ತೇ ಹೆಮ್ಮೆಯಿಂದ ಕೊಂಡಾಡುವ ಚೇತನವೊಂದು ಇರುತ್ತಿರಲಿಲ್ಲ…

ಆದರೆ, ಎಲ್ಲವನ್ನೂ ಗೆದ್ದು ನಿಂತಿದ್ದರಿಂದಲೇ ಇವತ್ತು ದೇಶ ಮರೆಯಲಾರದ ಚೇತನವಾಗಿ, ಸಂವಿಧಾನಶಿಲ್ಪಿಯಾಗಿ ಡಾ.ಬಿ.ಆರ್. ಅಂಬೇಡ್ಕರ್ ನಿಲ್ಲುವಂತಾಯಿತು…

ಡಾ.ಬಿ.ಆರ್.ಅಂಬೇಡ್ಕರ್ ಜನಿಸಿದ್ದು 1891ರ ಏಪ್ರಿಲ್ 14ರಂದು ಮಹರ್ ಎಂಬ ದಲಿತ ಜನಾಂಗದಲ್ಲಿ. ಮಹಾರಾಷ್ಟ್ರದ ರತ್ನಗಿರಿ ಜಿ¯್ಲÉಯ ಅಂಬವಾಡೆ ಗ್ರಾಮದಲ್ಲಿ ಸುಭೇದಾರ್ ರಾಮ್ಜೀ ಸಕ್ಬಾಲ್, ತಾಯಿ ಭೀಮಾಬಾಯಿ ಅವರ ಪುತ್ರರಾಗಿ ಜನಿಸಿದರು…

Dr Bhimrao Ambedkar brought Indias first Water Policy

ಅಂದಿನ ದಿನದಲ್ಲಿ ಕೆಳಜಾತಿಯ ಹುಡುಗನೊಬ್ಬ ಶಾಲೆಗೆ ಹೋಗಿ ಅಕ್ಷರ ಕಲಿಯುವುದು ಅಷ್ಟೊಂದು ಸುಲಭದ ಮಾತಾಗಿರಲಿಲ್ಲ. ಆದರೆ, ಅಂಬೇಡ್ಕರ್‍ರಿಗೆ ಚಿಕ್ಕಂದಿನಿಂದಲೇ ಓದಬೇಕು, ಏನನ್ನಾದರೂ ಸಾಧಿಸಬೇಕು ಎಂಬ ಛಲ ಇತ್ತು. ಇದಕ್ಕೆ ಹೆತ್ತವರು ನೀರೆರೆದು ಪೋಷಿಸಿದರು. ಇದರ ಜತೆಗೆ ಸಂಸ್ಕøತ ಕಲಿಯಬೇಕೆಂಬ ಮಹದಾಸೆಯಿತ್ತು. ಇದಕ್ಕೆ ಮೇಲ್ಜಾತಿಯವರು ಅಡ್ಡಿಪಡಿಸಿದರು. ಆದರೆ, ಇವರು ಬಗ್ಗಲಿಲ್ಲ…

ಬದಲಿಗೆ ಹಠತೊಟ್ಟವರಂತೆ ಸಂಸ್ಕøತ ಕಲಿತು, ಅದರಲ್ಲಿ ಸಂಪೂರ್ಣ ಪಾಂಡಿತ್ಯಗಳಿಸಿ, ತಾವೇ ಹಲವಾರು ವಿಚಾರ ಕ್ರಾಂತಿ ಕೃತಿಗಳನ್ನು ರಚಿಸುವುದರ ಮೂಲಕ ಆಧುನಿಕ ಮನು ಎಂಬ ಕೀರ್ತಿಗೆ ಪಾತ್ರರಾದರು. ಇದನ್ನು ಮಾತ್ರ ಯಾರಿಂದಲೂ ತಡೆಯಲು ಸಾಧ್ಯವಾಗಲೇ ಇಲ್ಲ. ಏಕೆಂದರೆ ಹಠವಾದಿ ಅಂಬೇಡ್ಕರ್‍ರ ಭೀಮಶಕ್ತಿ ಅಂಥದ್ದು…

भारत के संविधान के जनक डॉ बी आर ...

1907ರಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಅಂಬೇಡ್ಕರ್ ತೇರ್ಗಡೆಯಾದರು. ಅವರಿಗೆ ಆ ವರ್ಷವೇ ರಮಾಬಾಯಿಯೊಂದಿಗೆ ವಿವಾಹವಾಯಿತು. ಆ ನಂತರ ಅವರು ಮುಂಬೈನ ಎಲ್ಫಿನ್‍ಸ್ಟನ್ ಕಾಲೇಜಿನಲ್ಲಿ ಇಂಟರ್‍ಮೀಡಿಯಟ್ ಮುಗಿಸಿ 1921ರಲ್ಲಿ ಬಿಎ ಪದವೀಧರರಾದರು. ನಂತರ ಬರೋಡಾ ಮಹಾರಾಜರ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡರು…

ಆದರೆ, ಆಗ ಬರೋಡ ಮಹಾರಾಜರೇ ಇವರ ಬುದ್ಧಿಶಕ್ತಿಗೆ ಮಾರುಹೋಗಿ ವಿದೇಶದಲ್ಲಿ ವ್ಯಾಸಂಗ ಮಾಡಿ ಬಂದ ನಂತರ ತಮ್ಮ ಹತ್ತು ವರ್ಷಗಳ ಕಾಲ ಕೆಲಸ ಮಾಡಬೇಕೆಂಬ ಕರಾರಿನೊಂದಿಗೆ ಉನ್ನತ ವ್ಯಾಸಂಗಕ್ಕೆ ಅಂಬೇಡ್ಕರ್ ಅವರನ್ನು ಅಮೇರಿಕಾಕ್ಕೆ ಕಳುಹಿಸಿದರು…

Ambedkar family - Wikipedia

ಅಲ್ಲಿ ಎಂಎ ಪದವಿಯೊಡನೆ ಪಿಎಚ್‍ಡಿಯನ್ನು ಗಳಿಸಿ 1917ರ ಆಗ 21ರಂದು ಮತ್ತೆ ಭಾರತಕ್ಕೆ ಮರಳಿದರು. ಇಷ್ಟಾದರೂ ಅವರ ಶಿಕ್ಷಣ ದಾಹ ಇಂಗಿರಲಿಲ್ಲ. ಹಾಗಾಗಿ ಪುನಃ 1920ರಲ್ಲಿ ಮತ್ತಷ್ಟು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್‍ಗೆ ಹೋದ ಇವರು 1922ರಲ್ಲಿ ಬ್ಯಾರಿಸ್ಟರ್ ಎಂಬ ಪದವಿಯೊಡನೆ ಭಾರತಕ್ಕೆ ವಾಪಸಾದರು…

ವಿದೇಶದಲ್ಲಿ ಕಲಿತು, ಒಂದು ಸಾಲದು ಅಂತ ಹಲವಾರು ಡಾಕ್ಟರೇಟ್ ಪದವಿಗಳನ್ನು ಗಳಿಸಿ ಅಂಬೇಡ್ಕರ್ ಅವರು ಸ್ವದೇಶಕ್ಕೆ ಬಂದಿದ್ದರೂ, ಇಲ್ಲಿ ಮಾತ್ರ ಅದೇ ಅಸ್ಪೃಶ್ಯತೆ ಅವರನ್ನು ಅಪಮಾನಿಸುತ್ತಿತ್ತು. ಆಗ ಅಂಬೇಡ್ಕರ್ ಮೂಕನಾಯಕ ಎಂಬ ಪತ್ರಿಕೆ ಆರಂಭಿಸಿ ಅದರ ಮುಖೇನ ಅಸ್ಪೃಶ್ಯತೆಯ ವಿರುದ್ಧ ಜನ ಜಾಗೃತಿಗೆ ನಿಂತರು…

ಬಹಿಷ್ಕೃತ ಹಿತಕಾರಿಣಿ ಎಂಬ ಸಭಾದಂತಹ ಸಂಘಟನೆಗಳನ್ನು ಕಟ್ಟಿ ಅಸ್ಪೃಶ್ಯತೆ ವಿರುದ್ಧ ಸಮಾನತೆಗಾಗಿ ಬೀದಿಗಿಳಿದು ಹಲವು ಹೋರಾಟ ಮಾಡುವ ಮೂಲಕ ದಲಿತರ ಪಾಲಿಗೆ ಅಕ್ಷರಶಃ ತೋರುಬೆರಳಾಗಿದ್ದರು. ಇವರ ಚೌದರ್ ಕೆರೆ ಚಳವಳಿಯಂತೂ ಭಾರತದ ಇತಿಹಾಸದಲ್ಲಿ ದಾಖಲಿಸುವಂಥದ್ದು…

Mahaparinirvan Diwas 2019: डॉ. बाबासाहेब आंबेडकर ...

ಹೀಗೆ ದಲಿತರ ಪರ ಕ್ರಾಂತಿ ಕಹಳೆ ಪ್ರಾರಂಭವಾಗಿ ನಿಧಾನವಾಗಿ ದೇಶದೆಲ್ಲಾಡೆ ಮೊಳಗತೊಡಗಿತು. ಈ ಸಂದರ್ಭದಲ್ಲಿ ಎರಡನೆ ಮಹಾಯುದ್ಧ ಪ್ರಾರಂಭವಾಗಿತ್ತು. ಆ ಸಂದರ್ಭದಲ್ಲಿ ಬ್ರಿಟಿಷರು ಕೆಲವು ಭಾರತೀಯರನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಂಡಾಗ ಪ್ರಥಮ ಪ್ರಾಶಸ್ತ್ಯದಲ್ಲಿ ಅಂಬೇಡ್ಕರ್ ಅವರಿಗೆ ಸ್ಥಾನ ದೊರಕಿತ್ತು…

ಭಾರತ ಸ್ವಾತಂತ್ರ್ಯ ಗಳಿಸಿದ ನಂತರ ನೆಹರೂ ಸರ್ಕಾರದಲ್ಲಿ ಪ್ರಥಮ ಕಾನೂನು ಸಚಿವರಾಗಿದ್ದ ಹೆಗ್ಗಳಿಕೆ ಹೊಂದಿದ್ದ ಅಂಬೇಡ್ಕರ್, ಭಾರತ ದೇಶಕ್ಕೆ ಸಶಕ್ತ ಸಂವಿಧಾನ ನೀಡಿದ ಶಿಲ್ಪಿಯಾದರು. ಇದು ಇಡೀ ವಿಶ್ವಕ್ಕೇ ಮಾದರಿ ಸಂವಿಧಾನವಾಗಿರುವುದು ಇವರಿಗೆ ಸಂದ ಮಹಾಗೌರವವೇ ಸರಿ…

ಅಧಿಕಾರ ಇರಲಿ, ಇಲ್ಲದಿರಲಿ ಅಂಬೇಡ್ಕರ್ ಅವರು ಹೆಜ್ಜೆ ಇಟ್ಟಲ್ಲೆಲ್ಲಾ ಅಸ್ಪೃಶ್ಯತೆ ನಿವಾರಣೆಗಾಗಿಯೇ ಅವರ ಹೃದಯ ತುಡಿಯುತ್ತಿತ್ತು. ಅಂತೆಯೇ ದಲಿತರ ಪುರೋಭಿವೃದ್ಧಿಗಾಗಿಯೇ ಅವರ ಜೀವ ಸದಾ ಮಿಡಿಯುತ್ತಿತ್ತು. ಭಾರತ ದೇಶದಲ್ಲಿ ಅಂಬೇಡ್ಕರ್ ಎಂಬ ಕ್ರಾಂತಿ ಪುರುಷ ಜನಿಸಿದ್ದರಿಂದಲೇ ದೇಶದ ಅರ್ಧ ಭಾಗದಂತಿರುವ ಉತ್ತರ ಪ್ರದೇಶ ಕಾನ್ಷಿರಾಂರಂಥ ದಲಿತ ನಾಯಕನ ಹಿಡಿತಕ್ಕೆ ಸಿಕ್ಕಿದ್ದು. ಮಾಯಾವತಿಯಂತಹ ದಲಿತ ಮಹಿಳೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು (ಈಗ ಮಾಜಿ) ಸಾಧ್ಯವಾದದ್ದು…

Ambedkar was wrong, Gandhi wrote against untouchability in ...

ಅಂಬೇಡ್ಕರ್ ಅವರ ಇಡೀ ಜೀವನ ಅಸ್ಪೃಶ್ಯರೆನಿಸಿಕೊಂಡವರಿಗೆ ನ್ಯಾಯವನ್ನೂ, ಸಮಾನತೆಯನ್ನೂ ದೊರಕಿಸಿಕೊಡುವುದಕ್ಕೆ ಮುಡಿಪಾಗಿತ್ತು. ಇದರಲ್ಲಿ ಅವರು ಸಾಕಷ್ಟು ಯಶಸ್ಸನ್ನೂ ಸಾಧಿಸಿದ್ದರು. ಆದರೂ ಹಿಂದೂ ಧರ್ಮದ ಅಸಮಾನತೆಯಿಂದ ರೋಸಿಹೋಗಿದ್ದ ಅವರು ಬುದ್ಧನ ಕಾರುಣ್ಯದಲ್ಲಿ ಆಕರ್ಷಿತರಾಗಿ 1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ನಡೆದ ಬೃಹತ್ ಸಮಾರಂಭವೊಂದರಲ್ಲಿ ತಮ್ಮ ಪತ್ನಿ ಡಾ.ಶಾರದಾ ಸೇರಿದಂತೆ ತಮ್ಮ ಅಪಾರ ಅಭಿಮಾನಿಗಳೊಡನೆ ಬೌದ್ಧಧರ್ಮಕ್ಕೆ ಸೇರಿದರು…

Dr Bhimrao Ambedkar brought Indias first Water Policy

1956ರ ಡಿಸೆಂಬರ್ 6ರಂದು ಇಡೀ ದೇಶವನ್ನು ಅನಾಥವಾಗಿಸಿ ಕಾಣದ ಊರಿನತ್ತ ಪಯಣಿಸಿದ ಅಂಬೇಡ್ಕರ್ ಅವರಿಗೆ ಮರಣೋತ್ತರವಾಗಿ ಭಾರತ ಸರ್ಕಾರ 1991ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂಬೇಡ್ಕರ್ ಇಂದು ನಮ್ಮ ಮುಂದೆ ಇಲ್ಲದಿರಬಹುದು. ಆದರೆ, ಅವರು ಮಾಡಿದ ಮಹತ್ ಸಾಧನೆಯಿಂದ ನೆನಪಾಗುತ್ತಲೇ ಇರುತ್ತಾರೆ…

*******

ಕೆ.ಶಿವು.ಲಕ್ಕಣ್ಣವರ


Leave a Reply

Back To Top