ಗಝಲ್


ಶಿವರಾಜ್. ಡಿ
ನಮ್ಮ ಅಪಮಾನ ಅವಮಾನಗಳು ಇನ್ನೂ ಸತ್ತಿಲ್ಲ
ಅಸ್ಪೃಶ್ಯತೆ ಅನಾಚರ ಅಜ್ಞಾನಗಳು ಇನ್ನೂ ಸತ್ತಿಲ್ಲ
ನಿಮ್ಮ ಕಾಲಿನ ಚಪ್ಪಲಿ ಹೊಲೆದವರು ನಾವು
ಚಪ್ಪಲಿ ಮೆಟ್ಟು ಬೆನ್ನಿಗೆ ಹೊದ್ದ ದರ್ಪ ಇನ್ನೂ ಸತ್ತಿಲ್ಲ
ಮೀಸಲಾತಿ ಸ್ವಾಭಿಮಾನ ವಿರೋಧಿಸಿದವರು ನೀವು
ನಮ್ಮನ್ನು ತುಳಿದ ನಿಮ್ಮ ದುರಭಿಮಾನ ಇನ್ನೂ ಸತ್ತಿಲ್ಲ
ನಿಮ್ಮ ಮನೆಯ ಹೊಲ ಗದ್ದೆ ಚಾಕರಿಗೆ ಬೇಕು ನಾವು
ನಮ್ಮನ್ನು ಹೊರಗಿಟ್ಟವರ ಮಡಿವಂತಿಕೆ ಇನ್ನೂ ಸತ್ತಿಲ್ಲ
ನಿಮ್ಮ ಮಲಮೂತ್ರಗಳ ಹೊಲಸು ಹೊತ್ತವರು ನಾವು
ಶ್ವಪಚರೆಂದು ಜರಿದ ಕೊಳಕು ಮನಸ್ಸು ಇನ್ನೂ ಸತ್ತಿಲ್ಲ
ಸಂವಿಧಾನದ ಆಶಯಗಳು ಉಳಿಯಬೇಕು ಬಾಬಾ
ಬೆಂಕಿಹಚ್ಚ ಹೊರಟವರ ಹೀನ ಬುದ್ದಿ ಇನ್ನೂ ಸತ್ತಿಲ್ಲ.
********