ಕವಿತೆ
ಗಝಲ್
ಪ್ರತಿಮಾ ಕೋಮಾರ
ಗಜಲ್
ಕರವೆರಡು ಕೊರಡಾದರೂ ಸೋಲುವುದಿಲ್ಲ ಅವನು
ಉಳಿ ಮೇಲೆ ಉಳಿ ಬಿದ್ದರೂ ಎದೆಗುಂದುವುದಿಲ್ಲ ಅವನು
ಕತ್ತಲೇ ಮನೆಯಾದರೂ ಕೊರಗುವುದಿಲ್ಲ ಅವನು
ಎಲ್ಲರಿಗೂ ಬೆಳಕನ್ನೇ ಹಂಚಿದರೂ ಬೀಗುವುದಿಲ್ಲ ಅವನು
ಒಡಲಾಳದಲ್ಲಿ ಹರಿದರೂ ಲಾವಾ, ಹೇಳಿಕೊಳ್ಳುವುದಿಲ್ಲ ಅವನು
ಉಳ್ಳವರು ತುಳಿಯುತ್ತಲಿದ್ದರೂ ಚಕಾರವೆತ್ತುವುದಿಲ್ಲ ಅವನು
ಮಳೆ,ಬಿಸಿಲು ,ಚಳಿ ಏನೇ ಇದ್ದರೂ ಅಳುಕುವುದಿಲ್ಲ ಅವನು
ಕಾಯಕದಲ್ಲಿ ಮೇಲು ಕೀಳೆಂಬ ಭಾವ ತೋರುವುದಿಲ್ಲ ಅವನು
ಆಲಸ್ಯದಿ ದುಡಿಯದೇ ಕುಳಿತು ಉಣ್ಣುವುದಿಲ್ಲ ಅವನು
ಕಾಯಕವೇ ಕೈಲಾಸ ಎಂಬ ತತ್ವ ಮರೆಯುವುದಿಲ್ಲ ಅವನು
( ಶ್ರಮಿಕರಿಗೆ ನಮನ , ಮೇ ಕಾಮಿ೯ಕರ ದಿನ )