ಕಾರ್ಮಿಕ ದಿನದ ವಿಶೇಷ -ಲೇಖನ

ಲೇಖನ

ವಿಶ್ವದ ಕಾರ್ಮಿಕರು ಒಂದಾಗಿ ಎನ್ನುವ ಕಾರ್ಮಿಕ ದಿನಾಚರಣೆ

ಚಂದ್ರು ಪಿ ಹಾಸನ್

ವಿಶ್ವದ ಕಾರ್ಮಿಕರು ಒಂದಾಗಿ ಎನ್ನುವ ಕಾರ್ಮಿಕ ದಿನಾಚರಣೆ

ಕಾಯಕವೇ ಕೈಲಾಸವೆಂಬ ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರ ರ ಸನ್ನುಡಿ ಗಳಂತೆ ಭೂಮಿಯ ಪ್ರತಿಯೊಂದು ಜೀವಿಯು ಜನಿಸಿದ ಮೇಲೆ ತನ್ನದೇ ಆದ ನಿತ್ಯಕರ್ಮ ಗಳಿಂದ ಜೀವನ ನಡೆಸಬೇಕಾಗುತ್ತದೆ ಕಾರ್ಮಿಕ ಜೀವನಶೈಲಿಯು ಅತ್ಯಂತ ಸುಂದರ ಹಾಗೂ ಸಮಾಧಾನಕರವಾಗಿದೆ . ಕರ್ಮಯೋಗಿ ಕಾರ್ಮಿಕ ಅವನು ಎಲ್ಲ ರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಕೊಂಡು ತನಗಾಗಿ, ತನ್ನವರಿಗೆ, ನನಗೋಸ್ಕರ ದುಡಿಯುತ್ತಲೇ ಇರುವನು.

ಈಗಿರುವಾಗ
“ವಿಶ್ವದ ಕಾರ್ಮಿಕರೇ ಒಂದಾಗಿರಿ ಒಂದಾಗಿರಿ” ಇದು ವಿಶ್ವಕಾರ್ಮಿಕ ದಿನಾಚರಣೆಯ ಧ್ಯೇಯವಾಕ್ಯ. “ವಿಶ್ವದಾದ್ಯಂತ ಸಮಾಜವಾದೀ ಸ್ಥಾಪನೆಗೆ ಒಂದಾಗಬೇಕು” ಎಂಬುದು ಇದರ ಉದ್ದೇಶ ಸಮಾಜವಾದದ ಮುಖವಾಡ ಧರಿಸಿ ಬಂಡವಾಳಶಾಹಿ ಸಾಮ್ರಾಜ್ಯಶಾಹಿ ವ್ಯವಸ್ಥೆಯನ್ನು ಅಸಮಾನತೆ ಅನ್ಯಾಯ ಶೋಷಣೆಗಳನ್ನು ಶಾಶ್ವತ ಗೊಳಿಸುತ್ತಿರುವ ರಾಷ್ಟ್ರದ ಆಳುವವರ್ಗಗಳ ಬಂಡಾಯ ಶಾಹಿ ಭೂಮಾಲಿಕ ವರ್ಗಗಳ ಶೋಷಿತ ಆಳ್ವಿಕೆಯನ್ನು ಕೊನೆಗೊಳಿಸಲು ರಾಷ್ಟ್ರದಲ್ಲಿನ ಶೋಷಿತ ಕಾರ್ಮಿಕರು ಹಾಗೂ ಇತರ ಎಲ್ಲಾ ಶೋಷಿತ ವರ್ಗಗಳು ಒಂದಾಗಿ ಈ ಶೊಷಕ  ವರ್ಗದ ಆಡಳಿತಕ್ಕೆ ಅಂತ್ಯ ಹಾಡದಿದ್ದರೆ ಸಂವಿಧಾನದಲ್ಲಿ ಘೋಷಿಸಲ್ಪಟ್ಟಿರುವ ಸಮಾಜವಾದವು ಕೇವಲ ಕಾಗದದ ಆಶ್ವಾಸನೆಯಾದೀತೆ ಹೊರತು ಸಾಮಾಜಿಕ ವಾಸ್ತವಿಕತೆ ಆಗಲಾರದು. ಅಂತೆಯೇ ಈ ಮೇ ದಿನಾಚರಣೆಯ ಸಂದೇಶ ‘ಶೋಷಿತ ಕಾರ್ಮಿಕರು ಒಗ್ಗೂಡಿ ಹೋರಾಟಕ್ಕೆ ಮುಂದಾಗಿ ಸಮಾಜವಾದಿ ಸಮಾಜ ಸ್ಥಾಪನೆಗೆ ಕಂಕಣಬದ್ಧರಾಗಬೇಕು’ ಎಂಬುದಾಗಿದೆ

ಈ ಎಲ್ಲಾ ನಿಟ್ಟಿನಲ್ಲಿ ಕಾರ್ಮಿಕನು ತನಗೆ ತನ್ನವರಿಗಾಗಿ ಅವರಿಗೋಸ್ಕರ ಕಾರ್ಮಿಕ ಪ್ರಭುತ್ವದ ಅಡಿಯಲ್ಲಿ ತನ್ನ ಪ್ರಭುತ್ವವನ್ನು ಸಾಧಿಸಿ ಜೀವನ ಸಾಗಿಸುತ್ತಾ ಇಂತಹ ಒಂದು ನಿಟ್ಟಿನಲ್ಲಿ ನಡೆಯುತ್ತಿರುವ ಇವನಿಗೊಂದು ದಿನವನ್ನು ಮೀಸಲಿಟ್ಟರೆ ಅದಕ್ಕೆ ಶುಭ ಅರ್ಥ ಸಿಗಬಹುದೆಂಬ ಚಿಂತನೆಗಳು ಅನಾದಿಕಾಲದಿಂದ ಬೆಳೆದುಕೊಂಡು ಬಂದಿತ್ತು. ಕಾರ್ಮಿಕ ಪ್ರಭುತ್ವದ ಕುರುವಿಗಾಗಿ ಮೇ 1 ರಂದು ಉತ್ಸವ ಆಚರಣೆ ಮಾಡಬೇಕೆಂದು ರಾಬರ್ಟ್ ಓವೆನ್ ಸೂಚಿಸಿದನಂತೆ . ಆದರೆ ವಾಸ್ತವವಾಗಿ  1889 ಕ್ಕಿಂತ ಮುಂಚೆ ಮೇ ದಿನಾಚರಣೆ ಮಾಡಿದ್ದಕ್ಕೆ ಯಾವ ಪುರಾವೆಗಳು ದೊರಕಿಲ್ಲ 1889 ರಲ್ಲಿ ಪ್ಯಾರಿಸ್ನಲ್ಲಿ ಸಮಾವೇಶಗೊಂಡಿದ್ದ ಸಮಾಜವಾದಿ ಅಂತರರಾಷ್ಟ್ರೀಯ ಪ್ರಥಮ ಅಧಿವೇಶನದಲ್ಲಿ ಮೇ ಒಂದನೇ ತಾರೀಕು ಅಂತರಾಷ್ಟ್ರೀಯ ಉತ್ಸವವೆಂದು ಆಚರಿಸಬೇಕು ಎಂದು ನಿರ್ಧರಿಸಲಾಯಿತು ಅಲ್ಲದೆ ಮೇ ಒಂದರಂದು ಸಾರ್ವಜನಿಕ ರಜಾದಿನವೆಂದು ಘೋಷಿಸಬೇಕೆಂದು ಒತ್ತಾಯ ಪಡಿಸಲು ನೇರ ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸಲಾಯಿತು

ಯುರೋಪಿನ ಬಹುತೇಕ ರಾಷ್ಟ್ರಗಳಲ್ಲಿ ಮೇ 1 ರಂದು ಕಾರ್ಮಿಕ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಹಾಗೆಯೇ ಭಾರತದಲ್ಲಿ ಮೇ ದಿನವೇ ಕಾರ್ಮಿಕ ದಿನ ಇದು ದಶಕದ ದ್ವಿತೀಯಾರ್ಧದಲ್ಲಿ ಕಾರ್ಮಿಕ ಸಂಘಟನೆಗಳ ಪ್ರಭಾವ ಹೆಚ್ಚಿದ್ದರಿಂದ ಇದರ ಆಚರಣೆ ಆರಂಭವಾಯಿತು. ಮೇ ದಿನಾಚರಣೆಯನ್ನು ಭಾಗವಹಿಸಿದ ಮೊಟ್ಟಮೊದಲ ಭಾರತೀಯ ಕಾರ್ಮಿಕರು ಇಂಗ್ಲೆಂಡಿನಲ್ಲಿ ಇದ್ದ ಭಾರತೀಯ ನಾವಿಕರು ಭಾರತಕ್ಕೆ ಸ್ವಾತಂತ್ರ್ಯ ನೀಡಬೇಕೆಂದು ಘೋಷಣೆಯನ್ನು ಒಳಗೊಂಡ ಪ್ರದರ್ಶನ ಚಿತ್ರಗಳನ್ನು ಹಿಡಿದು 1925ರಂದು ಮೆರವಣಿಗೆಯಲ್ಲಿ ಅವರು ಹೈಡ್ ಪಾರ್ಕಿನ ಮೇ ದಿನದ ಉತ್ಸವ ಸಭೆಗೆ ಹೋದರು. ಭಾರತದಲ್ಲಿ ಅವರ ನೆನಪಿಗಾಗಿ ಈ ಮೇ 1 ರಂದು ಕಾರ್ಮಿಕ ದಿನವೆಂದು ಘೋಷಿಸಲಾಯಿತು. 1927 ರಿಂದ ಈಚೆಗೆ ಮುಂಬಯಿಯಲ್ಲಿ ನಡೆದ ಉತ್ಸವದಲ್ಲಿ ಅನೇಕ ಕಾರ್ಮಿಕರ ಮುಖಂಡರು ಭಾಗವಹಿಸಿದ್ದರು, ಅದೇ ರೀತಿ ಎರಡನೇ ಮಹಾಯುದ್ಧದ ನಂತರ ಆ ದಿನವನ್ನು ಹೆಚ್ಚು ವ್ಯಾಪಕವಾಗಿ ಆಚರಿಸಲು ಪ್ರಾರಂಭವಾಯಿತು. ಕಾರ್ಮಿಕರು, ಕಾರ್ಮಿಕ ಸಂಘಗಳ ಕಾಂಗ್ರೆಸ್ ಒಂದನ್ನು ಬಿಟ್ಟು ಉಳಿದೆಲ್ಲ ಕಾರ್ಮಿಕ ಸಂಘಗಳ ಒಟ್ಟಾಗಿ ತಮ್ಮ ಹಕ್ಕುಗಳನ್ನು ಸಾಧಿಸಲು ಭಾರಿ ಮೆರವಣಿಗೆಯಲ್ಲಿ ಪಾರ್ಲಿಮೆಂಟ್ ಭವನದ ಬಳಿಗೆ ಮೆರವಣಿಗೆ ಪ್ರದರ್ಶನ ನಡೆಸಿದ್ದರು.

ಇವೆಲ್ಲದರ ಪರಿಣಾಮವಾಗಿ ಅಂದಿನಿಂದ ಇಂದಿನವರೆಗೆ ಭಾರತದಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಪ್ರತಿವರ್ಷ ಮೇ 1. ನೇ ತಾರೀಕಿನಂದು ಆಚರಿಸಲಾಗುತ್ತಿದೆ. ಇದರ ಮಹತ್ವವನ್ನು ವಿಶ್ವದಲ್ಲೇ ಪ್ರಥಮ ಸಮಾಜವಾದಿ ರಾಷ್ಟ್ರ ನಿರ್ಮಾಪಕ ರಷ್ಯಾ ಕ್ರಾಂತಿಕಾರಿ ನಾಯಕ ಲೆನಿನ್ ಬಣ್ಣಿಸಿದ್ದು ಹೀಗೆ “ಒಂದು ಸಂಪ್ರದಾಯ ಕ್ರಿಯೆಯಲ್ಲಿ ಶೋಷಿತವರ್ಗಗಳ ಹಾಗೂ ದೇಶಗಳ ವಿಮೋಚನೆಗಾಗಿ ನಡೆಸಬೇಕಾದ ಕ್ರಾಂತಿಕಾರಿ ಹೋರಾಟಗಳು ರಾಜಕೀಯ ಹೋರಾಟಗಳು ಸಾಮ್ರಾಜ್ಯಶಾಹಿ ವಿರೋಧಿ ಅಂತಾರರಾಷ್ಟ್ರೀಯ ಕಾರ್ಮಿಕವರ್ಗದ ಹೋರಾಟ ಅವಶ್ಯಕವಾದ ಚೈತನ್ಯವನ್ನು ಕಾರ್ಮಿಕರು ಬೆಳೆಸಿಕೊಳ್ಳಬೇಕಾದ ಮಹತ್ವದ ದಿನ ಇದು ತಮಗೆ ಸಂಬಂಧಿಸಿದ ದಿನನಿತ್ಯದ ಬೇಡಿಕೆಗಳಿಗಾಗಿ ಸಣ್ಣ ಸಣ್ಣ ಬೇಡಿಕೆಗಳಿಗಾಗಿ ಆಂದೋಲನ ನಡೆಸುವ ಸಂದರ್ಭವಲ್ಲ ಇದು ಅಂತರವನ್ನು ಅರಿತುಕೊಂಡು ಮೇ ದಿನವನ್ನು ಆಚರಿಸುವುದು ಅತ್ಯವಶ್ಯ” ಎಂದು ಈ ಒಂದು ಸಂದೇಶ ನಿಜಕ್ಕೂ ಅದ್ಭುತವಾಗಿದೆ ಒಂದು ನಿಟ್ಟಿನಲ್ಲಿ ಕಾರ್ಮಿಕ ದಿನ’ವನ್ನು ಆಚರಿಸಬೇಕಾಗಿದೆ

ಒಬ್ಬ ಕಾರ್ಮಿಕನು ಇತರರ ಅಧೀನದಲ್ಲಿ ಅಂದರೆ ತಮ್ಮ ಸೇವಕ ದಾರರ, ಉದ್ಯೋಗದಾತರ ಗಣಿಗಳ ಅಥವಾ ಯಜಮಾನರ ಕೈಕೆಳಗೆ ದುಡಿಯುವ ಜನರ ಕೆಲಸಕ್ಕೆ ಸಂಬಂಧಿಸಿದಂತೆ ರಚಿತವಾದ ಕೆಲವು ಕಾನೂನುಗಳು ಇವನ್ನು ಕೈಗಾರಿಕ ಕಾನೂನುಗಳು ಅಥವಾ ಕೈಗಾರಿಕಾ ನ್ಯಾಯ ಎಂದು ಕರೆಯಬಹುದು. ಉದ್ಯೋಗದಾತ ಅವನ ಅಧೀನದಲ್ಲಿ ಕೆಲಸ ಮಾಡುವವನಿಗೆ ಏರ್ಪಡುವ ಸಂಬಂಧವನ್ನು ಕಾನೂನಿನ ನಿಯಂತ್ರಣಕ್ಕೆ ಒಳಪಡಿಸುವುದು ಅವಶ್ಯ ಯಜಮಾನ ಕಾರ್ಮಿಕರ ನಡುವಿನ ಸಂಬಂಧ ವಾಸ್ತವವಾಗಿ ಇರಲಿ ಅಥವಾ ಮುಂದೆ ಉದ್ಭವಿಸುವ ಅಂತದ್ದಾಗಿರಲಿ ಕಾರ್ಮಿಕನ ದುಡಿಮೆ ದೈಹಿಕವಾದ್ದಾಗಿರಲಿ, ಮಾನಸಿಕವಾದ್ದಾಗಿರಲಿ ಇಂಥ ಎಲ್ಲ ಸಂದರ್ಭಗಳಿಗೂ ಕಾರ್ಮಿಕ ಕಾನೂನುಗಳು ಅನ್ವಯಿಸುತ್ತದೆ. ಸ್ವತಂತ್ರವಾಗಿ ದುಡಿಮೆ ಮಾಡುವ ಕಾರ್ಮಿಕ ಕಾನೂನು ಅನ್ವಯಿಸುವುದಿಲ್ಲ. ವ್ಯಾಪಕವಾದ ಅರ್ಥದಲ್ಲಿ ಪರಿಗಣಿಸಿದಾಗ ಸಂಘಟನೆ ನಿರುದ್ಯೋಗ ನಿವಾರಣೆ ಕೈಗಾರಿಕಾ ಸಂಬಂಧಗಳು, ಮುಷ್ಕರಗಳು, ಕಾರ್ಖಾನೆಗಳ ಬೀಗಮುದ್ರೆ ಸಂಬಂಧಿಸಿದ ಕಾನೂನು ಗಳನ್ನು ತೆಗೆದುಕೊಂಡು ಅದರಂತೆ ನಡೆಯುವುದು ಈ ದಿನದ ಮಹತ್ವ ಮತ್ತು ಅವರ ಕರ್ತವ್ಯವಾಗಿದೆ. ಕಾರ್ಮಿಕನಿಗೆ ತೊಂದರೆಯಾಗದಂತೆ, ನೆಮ್ಮದಿಗೆ ಭಂಗವಾಗದಂತೆ, ಅವನ ಆರೋಗ್ಯ ಕೆಡದಂತೆ ನೋಡಿಕೊಳ್ಳುವುದು ಈ ದಿನದ ಸಂದೇಶ ಹಾಗೂ ಉದ್ದೇಶ. ಕಾರ್ಮಿಕರ ದುಡಿಮೆಯ ಸಮಯದಲ್ಲಿ ಸಂಭವಿಸಬಹುದಾದ ಕ್ಷ ತಿ ಅಥವಾ ಸಾವಿಗೆ ಸೂಕ್ತ ಪರಿಹಾರ ನೀಡುವ ಕಾಯ್ದೆಯನ್ನು ಸರ್ಕಾರ ಅಂಗೀಕಾರ ಮಾಡಿದೆ

ಈ ಎಲ್ಲಾ ಪ್ರಯೋಜನಗಳಿಂದ ಉದ್ಭವ ವಾದ ಕಾರ್ಮಿಕ ದಿನಾಚರಣೆ ಯನ್ನು ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಮುಖ್ಯವಾಗಿ ಆಚರಿಸುವ ಸಂಭ್ರಮದ ದಿನ, ಉತ್ಸವದ ದಿನ “ಲೇಬರ್ ಡೇ”. ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಯಲ್ಲಿ ಪ್ರತಿವರ್ಷ ಈ ದಿನದ ಮಹತ್ವವನ್ನು ಪ್ರಪಂಚದ ಹಲವು ದೇಶಗಳಲ್ಲಿ ಅತಿ ಸಡಗರದಿಂದ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ದಿನದಂದು ಕಾರ್ಮಿಕ ಆಂದೋಲನ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ, ಅಲ್ಲದೆ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕರ ಮೆರವಣಿಗೆ ಪ್ರದರ್ಶನ ಏರ್ಪಡಿಸಿ ಮಾನವೀಯ ಮೌಲ್ಯಗಳೊಂದಿಗೆ ವಿಶೇಷತೆಯನ್ನು ಮತ್ತು ಕಾರ್ಮಿಕ – ಮಾಲೀಕರ ಸಹಭಾಗಿತ್ವವನ್ನು ಇಲ್ಲಿ ಜರುಗಬಹುದಾದ ಕಾರ್ಮಿಕ ಕಾನೂನುಗಳನ್ನು ಪರಸ್ಪರ ಆರೋಗ್ಯಕರ ಹಂಚಿಕೆಯಿಂದ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಹೇಳಬಹುದು

**********

12 thoughts on “ಕಾರ್ಮಿಕ ದಿನದ ವಿಶೇಷ -ಲೇಖನ

  1. ದುಡಿಯುವ ಕಾರ್ಮಿಕ ವರ್ಗ ಇದ್ದರೆ ಕುಳಿತು ತಿನ್ನುವ ಸಿರಿವಂತ ಜನರು ಇರುವುದು. ಲೇಖನ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಅಭಿನಂದನೆಗಳು

  2. ತುಂಬಾ ಚೆನ್ನಾಗಿದೆ ಅಣ್ಣ ಲೇಖನ. ವಾಸ್ತವ ಅಂಶ ತುಂಬಾ ಚೆನ್ನಾಗಿ ಮೂಡಿ ಬಂದಿದೆ.

    1. ಧನ್ಯವಾದಗಳು ಉದಯ್ ಕಿರಣ್

  3. ಚೆನ್ನಾಗಿದೆ ಅಣ್ಣ,, ಹೀಗೆ ನಿಮಗೆ ಯಶಸ್ಸು ಸಿಗಲಿ

Leave a Reply

Back To Top